ಮುಖ್ಯ ಸುದ್ದಿ
ಚಿತ್ರದುರ್ಗ ಎಬಿವಿಪಿಯ ಬಾಲಪ್ಪ | ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ

CHITRADURGA NEWS | 23 FEBRUARY 2024
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಎಬಿವಿಪಿ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಬಾಲಪ್ಪ ಗೂಗಿಹಾಳ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.
ಮೂಲತಃ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕು ಹಣಮಾಪುರದ ಬಾಳಪ್ಪ, ವಿದ್ಯಾರ್ಥಿ ದೆಸಯಿಂದಲೂ ಎಬಿವಿಪಿ, ಆರೆಸ್ಸೆಸ್ಸ್ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ಬಂದವರು.

ಇದನ್ನೂ ಓದಿ: ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಭಾರ್ಗವಿ ದ್ರಾವಿಡ್
2010 ರಲ್ಲಿ ಚಿತ್ರದುರ್ಗ ಜಿಲ್ಲಾ ಎಬಿವಿಪಿ ಸಂಘಟನಾ ಕಾರ್ಯದರ್ಶಿ, ಆನಂತರ ಶಿವಮೊಗ್ಗ, ಬಳ್ಳಾರಿ ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಸ್ವಗ್ರಾಮ ಹಣಮಾಪುರಕ್ಕೆ ತೆರಳಿದ ನಂತರ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿ ಸದಸ್ಯರಾಗಿ ಆಯ್ಕೆಯಾಗಿದ್ದರು.

ಆನಂತರ ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾಗಿರುವ ಅವಧಿಯಲ್ಲಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಫೆ.22 ರಂದು ನಡೆದ ಸಭೆಯಲ್ಲಿ ನಿಯುಕ್ತಿ ಮಾಡಲಾಗಿದೆ.
ಇದನ್ನೂ ಓದಿ: ಸ್ಥಿರತೆ ಕಂಡುಕೊಳ್ಳದ ಅಡಿಕೆ ಧಾರಣೆ | ಮಾರಾಟ ಮಾಡದ ಬೆಳೆಗಾರರಲ್ಲಿ ಗೊಂದಲ
ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ನಿಯುಕ್ತಿ ಮಾಡಿರುವ ಪ್ರಮಾಣ ಪತ್ರ ವಿತರಿಸಿದ್ದಾರೆ.
