CHITRADURGA NEWS | 02 APRIL 2026
ಹೊಳಲ್ಕೆರೆ: ಅವಮಾನ ಸಹಿಸದೆ ನೊಂದ ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ(SELF DEATH) ಮಾಡಿಕೊಂಡಿರುವ ಘಟನೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತ(22) ಮೃತ ವಿದ್ಯಾರ್ಥಿನಿ.
ಇದನ್ನೂ ಓದಿ: ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
ಇಲ್ಲಿನ ಉಪನ್ಯಾಸಕರಬ್ಬರ ಜೊತೆಗೆ ವಿದ್ಯಾರ್ಥಿನಿಯ ಹೆಸರು ತಳುಕು ಹಾಕಿ ಸ್ನೇಹಿತೆಯರು ಅವಮಾನ ಮಾಡಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ ಬರೆದಿಟ್ಟಿದ್ದಾರೆ.
ಸಹಪಾಠಿಗಳ ಹೆಸರುಗಳನ್ನು ಡೆತ್ನೋಟ್ನಲ್ಲಿ ಸ್ಪಷ್ಟವಾಗಿ ಬರೆದಿಟ್ಟು, ಅವರಿಂದ ಆಗಿರುವ ಅಪಮಾನದಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿರುವುದಾಗಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ನಿವೃತ್ತ ಹೊಂದಿದ ಭದ್ರಾ ಮೇಲ್ದಂಡೆ ಇಂಜಿನಿಯರ್ ಬಾರಿಕರ ಚಂದ್ರಪ್ಪ ಅವರಿಗೆ ಬೀಳ್ಕೊಡುಗೆ
ಮೃತ ವಿದ್ಯಾರ್ಥಿನಿಯ ತಂದೆ ಹಾಗೂ ತಾಯಿ ಇಬ್ಬರೂ ಶಿಕ್ಷಕ ವೃತ್ತಿ ಮಾಡಿಕೊಂಡಿದ್ದು, ಹೊಳಲ್ಕೆರೆಯಲ್ಲಿ ನೆಲೆಸಿದ್ದಾರೆ. ಮಗಳ ಬಗ್ಗೆ ಸ್ನೇಹಿತರು ಈ ರೀತಿ ಮಾತನಾಡುವ ವಿಚಾರ ತಿಳಿದಾಗ ಸಮಾಧಾನ ಮಾಡಿ, ಕಾಲೇಜಿನಲ್ಲಿ ಇಂಥದ್ದೇಲ್ಲಾ ಸಾಮಾನ್ಯ ತಲೆಕೆಡಿಸಿಕೊಳ್ಳದೆ ಓದಿನ ಕಡೆಗೆ ಗಮನಹರಿಸುವಂತೆ ಸಲಹೆ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

