ಲೋಕಸಮರ 2024
ಗಡಿ ದಾಟಿದ್ರೂ ಮೂರು ದಿನ ‘ಎಣ್ಣೆ’ ಸಿಗಲ್ಲ | ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್
CHITRADURGA NEWS | 23 APRIL 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೂರು ದಿನ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಈ ಕಾರ್ಯಕ್ಕೆ ವಿಜಯನಗರ ಜಿಲ್ಲಾಡಳಿತ ಸಹ ಸಾಥ್ ನೀಡಿದೆ.
ಕ್ಲಿಕ್ ಮಾಡಿ ಓದಿ: ಘಟಾನುಘಟಿಗಳ ನಡುವೆ ಜಿದ್ದಾಜಿದ್ದಿಗೆ ಸಾಕ್ಷಿ ಕೋಟೆನಾಡು | ಚಿತ್ರದುರ್ಗ ಲೋಕಸಭೆಯ ಸಮಗ್ರ ಮಾಹಿತಿ
ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ನಡೆಯುವಾಗ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗಡಿಭಾಗದ 5 ಕಿ.ಮೀ ವ್ಯಾಪ್ತಿಯಲ್ಲಿ ಏ.24ರ ಸಂಜೆ 6ರಿಂದ ಏ.26ರ ಸಂಜೆ 6 ಗಂಟೆಯವರೆಗೆ ಎಲ್ಲಾ ಬಗೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಮದ್ಯ ಮಾರಾಟ, ತಯಾರಿಕೆ, ಮದ್ಯ ಸಾಗಣೆ ಹಾಗೂ ಇತರೆ ಸ್ಥಳಗಳಾದ ಬಾರ್ ಆ್ಯಂಡ್ ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಡಾಬಾಗಳಲ್ಲಿ ಮದ್ಯ ಸಾಗಣೆ, ಶೇಖರಣೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಒಣ ದಿನಗಳೆಂದು ಘೋಷಿಸುವಂತೆ ವಿಜಯನಗರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಕೋರಿದ್ದರು. ಅದರಂತೆ ಈ ಆದೇಶ ಹೊರಡಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಬಕಾರಿ ಉಪ ಆಯುಕ್ತರು ಈ ಆದೇಶವನ್ನು ಅನುಷ್ಠಾನಕ್ಕೆ ತರಲು ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.