ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲೆಯಲ್ಲಿ ಈ ವರ್ಷ ಸರಿಯಾದ ಮಳೆಯಾಗದ ಕಾರಣ ಮೇವು ನೀರಿನ ಅಭಾವ ತಲೆದೂರಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ, ಸ್ಥಳೀಯವಾಗಿ ಬೆಳೆದಿರುವ ಮೇವನ್ನು ಬೇರೆ ಜಿಲ್ಲೆ ಅಥವಾ ಹೊರ ರಾಜ್ಯಗಳಿಗೆ ಸಾಗಾಣೆ ಮಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ, ಸ್ಥಳೀಯವಾಗಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಸರ್ಕಾರದ ಸೂಚನೆಯಂತೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಳೆಯ ಕೊರತೆಯ ಕಾರಣ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಈಗಾಗಲೆ ಸರ್ಕಾರ ಘೋಷಣೆ ಮಾಡಿದೆ. ಬರದ ಕಾರಣ ಜಾನುವಾರುಗಳಿಗೆ ಮುಂಬರುವ ದಿನಗಳಲ್ಲಿ ಮೇವಿನ ಕೊರತೆಯಾಗುವ ಸಾಧ್ಯತೆ ಇರುವುದರಿಂದ, ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಿ, ತಕ್ಷಣದಿಂದಲೇ. ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವುವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡದಂತೆ ನಿಬರ್ಂಧಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಮಂಗಾಟ | ರೋಗಿಗಳ ಪರದಾಟ
ಹೀಗಾಗಿ ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ನಿಭಾಯಿಸಲು ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಮೇವನ್ನು ರೈತರಿಗೆ ಒದಗಿಸಬೇಕಾಗಿರುವುದರಿಂದ, ಜಿಲ್ಲೆಯಲ್ಲಿ ಲಭ್ಯವಿರುವ ಮೇವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ನಿರ್ಬಂಧಿಸಲಾಗಿದೆ. ಮೇವು ತುಂಬಿದ ಲಾರಿ, ಟ್ರ್ಯಾಕ್ಟರ್‍ಗಳನ್ನು ಗಮನಿಸಿಸಲು ಈಗಾಗಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ, ತಹಸಿಲ್ದಾರರಿಗೆ, ಉಪವಿಭಾಗಾಧಿಕಾರಿಗಳಿಗೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
