
CHITRADURGA NEWS | 03 JULY 2024
ಚಿತ್ರದುರ್ಗ: ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಉಚಿತ ಚಿಕಿತ್ಸೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೂ ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು.
ಇದನ್ನೂ ಓದಿ: ಮುರುಘಾಮಠದಲ್ಲಿ ಫ.ಗು.ಹಳಕಟ್ಟಿಯವರ 144ನೇ ಜಯಂತಿ ಆಚರಣೆ


ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಸರ್ಕಾರದ ಒಂದು ಪ್ರತಿಷ್ಠಿತ ಸಂಸ್ಥೆಯಾಗಿದ್ದು, ಗುಣಮಟ್ಟದ ಕ್ಯಾನ್ಸರ್ ಚಿಕಿತ್ಸೆಗೆ ಹೆಸರುವಾಸಿಯಾದ ಆಸ್ಪತ್ರೆಯಾಗಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಹಾಗೂ ಹೊರ ರಾಜ್ಯಗಳ ಸಾರ್ವಜನಿಕರು ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ.
ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡವರ ದಾಖಲೆಗಳನ್ನು ಪರಿಶೀಲಿಸಿದಾಗ ಬಹಳ ಕಡಿಮೆ ಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡದ ಎಸ್.ಟಿ.ಜನಾಂಗದವರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ
ಜಿಲ್ಲೆಯಲ್ಲಿ ಹೆಚ್ಚು ಪರಿಶಿಷ್ಟ ಪಂಗಡದವರು ವಾಸಿಸುತ್ತಿರುವುದರಿಂದ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವವರು ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉಚಿತವಾಗಿ ಸರ್ಕಾರಿ ಸೌಲಭ್ಯ ಪಡೆಯಬಹುದು ಎಂದು ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
