CHITRADURGA NEWS | 19 NOVEMBER 2024
ಚಿತ್ರದುರ್ಗ: ನೆಮ್ಮದಿಯ ತಾಣವಾಗಿದ್ದ ಕೋಟೆನಾಡು ಚಿತ್ರದುರ್ಗದಲ್ಲೂ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆಯಾಗಿದ್ದಾರೆ.
ಇಬ್ಬರು ಬಾಂಗ್ಲಾ ನುಸುಳುಕೋರರನ್ನು ಚಿತ್ರದುರ್ಗದ ಕೋಟೆ ಠಾಣೆ ಪೊಲೀಸರು(police) ಬಂಧಿಸುವ ಮೂಲಕ ಬಾಂಗ್ಲಾ ವಲಸಿಗರ ಜಾಲದ ಹಿಂದೆ ಬಿದ್ದಿದ್ದಾರೆ.
ಇದನ್ನೂ ಓದಿ: ಎಪಿಎಂಸಿ ಆವರಣದಲ್ಲಿ ನ.19ರಂದು ವಿಚಾರ ಸಂಕಿರಣ
ಬಾಂಗ್ಲಾ ದೇಶದ ಪ್ರಜೆಗಳಾದ ಸುಮನ್ ಹುಸೇನ್ ಹಾಗೂ ಶೈಕ್ ಸೈಪುರ ರೆಹಮಾನ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಬಾಂಗ್ಲಾ ನುಸುಳುಕೋರರು ಇರುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ, ಜಾಲ ಬೇಧಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ-ಜೋಡಿಚಿಕ್ಕೇನಹಳ್ಳಿ ರೈಲ್ವೆ ಗೇಟ್ ಬಂದ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‍ಕುಮಾರ್ ಬಂಡಾರು, ಡಿವೈಎಸ್‍ಪಿ ದಿನಕರ್ ನೇತೃತ್ವದಲ್ಲಿ ಬಂಧಿತ ಇಬ್ಬರು ಬಾಂಗ್ಲಾ ಪ್ರಜೆಗಳ ವಿಚಾರಣೆ ನಡೆಸಲಾಗಿದೆ.
ಈ ಬಗ್ಗೆ ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
