ಕ್ರೈಂ ಸುದ್ದಿ
ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು | ವೈದ್ಯರ ವಿರುದ್ಧ ಪೋಷಕರ ಆಕ್ರೋಶ
Published on
CHITRADURGA NEWS | 10 DECEMBER 2024
ಚಿತ್ರದುರ್ಗ: 40 ದಿನಗಳ ಹಿಂದೆಯಷ್ಟೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲೂಕಿನ ಜಾಗನೂರಹಟ್ಟಿಯ ರೋಜಮ್ಮ(24) ಮಹಿಳೆ ಇಂದು ಹೊಟ್ಟೆನೋವು, ವಾಂತಿ, ಹೊಟ್ಟೆ ಉರಿ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಕೋಟೆನಾಡು
40 ದಿನಗಳ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ರೋಜಮ್ಮ, 5 ದಿನಗಳ ನಂತರ ಮಗುವಿನೊಂದಿಗೆ ಮನೆಗೆ ತೆರಳಿದ್ದರು.
ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಮೃತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.
Continue Reading
You may also like...
Related Topics:Baranti death, Chitradurga District Hospital, Chitradurga Latest, Chitradurga news, Chitradurga Updates, Kannada News, Outrage, Police, Pregnant, ಆಕ್ರೋಶ, ಕನ್ನಡ ಸುದ್ದಿ, ಗರ್ಭಿಣಿ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಪೊಲೀಸ್, ಬಾಣಂತಿ ಸಾವು
Click to comment