Connect with us

ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು | ವೈದ್ಯರ ವಿರುದ್ಧ ಪೋಷಕರ ಆಕ್ರೋಶ

Rojamma

ಕ್ರೈಂ ಸುದ್ದಿ

ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಸಾವು | ವೈದ್ಯರ ವಿರುದ್ಧ ಪೋಷಕರ ಆಕ್ರೋಶ

CHITRADURGA NEWS | 10 DECEMBER 2024

ಚಿತ್ರದುರ್ಗ: 40 ದಿನಗಳ ಹಿಂದೆಯಷ್ಟೇ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲೂಕಿನ ಜಾಗನೂರಹಟ್ಟಿಯ ರೋಜಮ್ಮ(24) ಮಹಿಳೆ ಇಂದು ಹೊಟ್ಟೆನೋವು, ವಾಂತಿ, ಹೊಟ್ಟೆ ಉರಿ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕಂಬನಿ ಮಿಡಿದ ಕೋಟೆನಾಡು

40 ದಿನಗಳ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ರೋಜಮ್ಮ, 5 ದಿನಗಳ ನಂತರ ಮಗುವಿನೊಂದಿಗೆ ಮನೆಗೆ ತೆರಳಿದ್ದರು.

ಹೆರಿಗೆ ಮಾಡಿಸಿದ್ದ ವೈದ್ಯರ ವಿರುದ್ಧ ಮೃತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top
Exit mobile version