By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಸತಿ ಶಾಲೆ ವಿದ್ಯಾರ್ಥಿಗಳು
    ಎಸ್‍ಎಸ್‍ಎಲ್‍ಸಿ RESULT | 29 ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ
    3 hours ago
    Yogish Sahyadri
    ತುಮಕೂರಿನಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ | ಚಿತ್ರದುರ್ಗದಿಂದ ಭಾಗವಹಿಸಲು ಅವಕಾಶ 
    3 hours ago
    ಡಾ.ರಾಜ್‍ಕುಮಾರ್ ಅವರ 97ನೇ ಜನ್ಮ ದಿನಾಚರಣೆ
    ಡಾಡಾ.ರಾಜಕುಮಾರ್ ಗುಣಗಳು ಇಂದಿನ ಪೀಳಿಗೆಗೆ ದಾರಿದೀಪ | ಟಿ.ರಘುಮೂರ್ತಿ
    3 hours ago
    ಸಚಿವ ಡಿ.ಸುಧಾಕರ್‌ ಆರೋಗ್ಯದಲ್ಲಿ ಚೇತರಿಕೆ | ಶಾಸಕರಾದ ಟಿ.ರಘುಮೂರ್ತಿ, ವೀರೇಂದ್ರ(ಪಪ್ಪಿ)
    6 hours ago
    ವರದಕ್ಷಿಣೆ
    ವರದಕ್ಷಿಣೆ ತಡೆಗಟ್ಟಲು ಅಧಿಕಾರಿಗಳ ನೇಮಕ 
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    7 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    4 hours ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    14 hours ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    15 hours ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    2 days ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    2 days ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    3 days ago
Reading: ಸಮಾನತೆ ಎನ್ನುವ ಬೀಜ ಬಿತ್ತಿದವರು ಬಸವಣ್ಣ | ಹೊಸದುರ್ಗ ರಂಗನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಮಾನತೆ ಎನ್ನುವ ಬೀಜ ಬಿತ್ತಿದವರು ಬಸವಣ್ಣ | ಹೊಸದುರ್ಗ ರಂಗನಾಥ್

News Desk Chitradurga News
Last updated: 3 November 2025 18:53
News Desk Chitradurga News
6 months ago
Share
ವಚನ ಕಾರ್ತಿಕೋತ್ಸವದಲ್ಲಿ ಶಿವಶರಣ ವೈದ್ಯ ಸಂಗಣ್ಣ ಮತ್ತು ವೈದ್ಯನಾಥೇಶ್ವರ ನವರ ಸ್ಮರಣೆ ಕಾರ್ಯಕ್ರಮ
SHARE

CHITRADURGA NEWS | 03 NOVEMBER 2025

ಚಿತ್ರದುರ್ಗ: 12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದಂತಹ ಸಾಧನೆ ಇಡೀ ವಿಶ್ವವೇ ಬೆರಗುಗೊಳಿಸುವಂಥದ್ದು. ಅಂದಿನ ಸಮಾಜದಲ್ಲಿದ್ದ ಅಸಮಾನತೆ, ತಾರತಮ್ಯ, ಭೇದಭಾವ, ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಿದ ಅಮೂಲ್ಯ ರತ್ನ ಬಸವಣ್ಣ. ಅನೇಕ ಶರಣರನ್ನು ಒಂದುಗೂಡಿಸಿ ಸಮಾನತೆ ಎನ್ನುವ ಬೀಜವನ್ನು ಬಿತ್ತಿದರು ಎಂದು ಹೊಸದುರ್ಗದ ಎಂ. ರಂಗನಾಥ್ ಹೇಳಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ನವೆಂಬರ್‌ 3 | ಯಾವ ಅಡಿಕೆಗೆ ಎಷ್ಟು ರೇಟ್‌

ಮುರುಘಾ ಮಠದಲ್ಲಿ ಏರ್ಪಡಿಸಿರುವ ವಚನ ಕಾರ್ತಿಕೋತ್ಸವದಲ್ಲಿ ಶಿವಶರಣ ವೈದ್ಯ ಸಂಗಣ್ಣ ಮತ್ತು ವೈದ್ಯನಾಥೇಶ್ವರ ನವರ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವೈದ್ಯ ಸಂಗಣ್ಣ ಶರಣರು 21 ವಚನಗಳನ್ನು ರಚನೆ ಮಾಡಿದ್ದಾರೆ. ಅವರ ಒಂದು ವಚನದಲ್ಲಿ ದೈಹಿಕ ಔಷಧಿಗಿಂತ ಮನಸ್ಸಿನ ಔಷಧಿ ತೆಗೆದುಕೊಳ್ಳುವುದರಿಂದ ನಮ್ಮಲ್ಲಿರುವ ಖಾಯಿಲೆಗಳು ವಾಸಿ ಆಗುತ್ತವೆ. ಆ ಔಷಧಿ ವಚನಗಳಲ್ಲಿ ಸಿಗುತ್ತದೆ ಎಂದು ಹೇಳಿದರು.

ವೈದ್ಯ ಸಂಗಣ್ಣನವರು ಪಂಚ ಮಹಾಶರಣರನ್ನು ಹೊಗಳುತ್ತ ಕಕ್ಕಯ್ಯನವರನ್ನು ಕಾಮಧೇನು ಹೋಲಿಕೆ ಮಾಡಿ ತನಗೆ ಬೇಕಾಗಿರುವುದನ್ನು ನೀಡುವ ಮಹಾಶರಣ ಎಂದಿದ್ದಾರೆ. ಮಾದಾರ ಚೆನ್ನಯ್ಯ ಶರಣರನ್ನು ಕಲ್ಪವೃಕ್ಷಕ್ಕೆ ಹೋಲಿಕೆ ಮಾಡಿ, ತೆಂಗಿನಮರ ಪ್ರತಿಯೊಂದು ಭಾಗಗಳು ಯಾವ ರೀತಿ ಉಪಯೋಗಕ್ಕೆ ಬರುತ್ತದೆಯೋ ಚೆನ್ನಯ್ಯನವರ ವಚನಗಳು ನಮ್ಮ ಜೀವನಕ್ಕೆ ದಾರಿ ದೀಪವಾಗಿದೆ. 

ಹರಳಯ್ಯನವರು ತಮಗೆ ಬಂದ ಕಷ್ಟಗಳನ್ನು ಹೋಗಲಾಡಿಸುವ ವ್ಯಕ್ತಿ ಆಗಿದ್ದಾರೆ. ಕೆಂಬಾವಿ ಶರಣರು ಅಮೃತ ಸಮುದ್ರಕ್ಕೆ ಹೋಲಿಕೆ ಮಾಡಿದ್ದಾರೆ. ಅವರ ವಚನಗಳನ್ನು ನಮ್ಮ ಜೀವನಕ್ಕೆ ಅಳವಡಿಸಿಕೊಂಡಲ್ಲಿ ಅಮೃತದಂತೆ ಶಕ್ತಿಯನ್ನು ಹೊಂದುತ್ತವೆ. ಶಿವನಾಗಮಯ್ಯನವರನ್ನು ದೈವ ಪರ್ವತ ಎಂದಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ನ.05 ರಂದು ಚಿತ್ರದುರ್ಗದಲ್ಲಿ ಸುವರ್ಣ ಮಹೋತ್ಸವ | ವ್ಯವಸ್ಥಿತ ಆಯೋಜನೆಗೆ ಕ್ರಮ ವಹಿಸಿ | ಡಿಸಿ

ಸಾನ್ನಿಧ್ಯ ವಹಿಸಿದ್ದ ಶ್ರೀ ಬಸವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಮಾನವನಿಗೆ ಕಾಯಿಲೆಗಳು ಬರುವುದಕ್ಕಿಂತ ಮುಂಚಿತವಾಗಿ ಮುಂಜಾಗ್ರತೆಯಿಂದ ಔಷಧಿಗಳನ್ನು ಸೇವಿಸುವುದು ಒಳ್ಳೆಯದು. ಅದೇ ರೀತಿ ಮಾನಸಿಕ ಕಾಯಿಲೆಗಳಿಗೆ ವಚನಗಳೇ ಔಷಧಿ ಆಗಿವೆ. 12ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿದ್ದ ವೈದ್ಯ ಸಂಗಣ್ಣ ಪಾರಂಪರಿಕ ನಾಟಿ ಔಷಧಿಗಳನ್ನು ನೀಡುತ್ತ ಬಂದವರು. 

ನಾನಾ ರೋಗಗಳು ಬರುವುದಕ್ಕಿಂತ ಮುಂಚೆ ಲಿಂಗಧಾರಣೆ ಮಾಡಿಸಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಗೊಳ್ಳುತ್ತದೆ. ಕಳೆದುಕೊಂಡು ಹುಡುಕುವುದಕ್ಕಿಂತ ತನ್ನಲ್ಲಿರುವುದನ್ನು ಉಳಿಸಿಕೊಳ್ಳುವುದು ಮನುಷ್ಯನ ಮುಖ್ಯ ಗುರಿಯಾಗಿರಬೇಕು. ವಿಭೂತಿಯಲ್ಲಿ ಒಂದು ವಿಸ್ಮಯವಿದೆ. 

ಯಾರು ವಿಭೂತಿ ಧರಿಸಿ ಲಿಂಗಪೂಜೆ ನೆರವೇರಿಸುತ್ತಾರೋ ಅವರಲ್ಲಿ ಭಕ್ತಿ, ಜ್ಞಾನ, ಯೋಗ ಪ್ರಸರಿಸಿ ಒಂದು ಶಕ್ತಿ ಪ್ರಾಪ್ತವಾಗುತ್ತದೆ. ಶಿವಯೋಗ ಮಾಡುವವರಲ್ಲಿ ಸಮಾಧಾನ, ಕರುಣೆ, ಮಾನವೀಯ ಮೌಲ್ಯಗಳು ವೃದ್ಧಿಸುತ್ತವೆ ಎಂದು ಹೇಳಿದರು.

ಶರಣ ವೈದ್ಯನಾಥೇಶ್ವರರ ಕುರಿತು ಎನ್‌.ಸಿ.ಚಂದ್ರಶೇಖರ ಮಾತನಾಡಿ, ಸಾಮಾಜಿಕ ವ್ಯವಸ್ಥೆಯಲ್ಲಿ ಕಳ್ಳಿಯ ಹಾಲು ಅಶುದ್ಧ. ಅದು ಶುದ್ಧ ಹಾಲಿಗೆ ಸಮನಲ್ಲ. ಹಾಗೇ ವಚನಗಳನ್ನು ತಿಳಿದವರು ನಿಜವಾದ ಜ್ಞಾನಿಗಳಾಗುತ್ತಾರೆ. ನಮ್ಮನ್ನು ಸುಳ್ಳಿನ ನಾಟಕದಿಂದ ಹೊರತೆಗೆದು ನಿಜವಾದ ಶುದ್ಧತೆ ಮತ್ತು ಭಕ್ತಿಯುಳ್ಳವರಾಗಬೇಕು. 

ಲಿಂಗಪೂಜೆಯು ಪ್ರತಿಯೊಬ್ಬ ವ್ಯಕ್ತಿಯನ್ನು ಶುದ್ಧ ನಡತೆಯತ್ತ ಕೊಂಡೊಯ್ಯುತ್ತದೆ. ವೇದ, ಜಪ, ತಪಗಳಿಂದ ದೇವರನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. 12ನೇ ಶತಮಾನದಲ್ಲಿ ಬಸವಾದಿ ಶರಣರು ರಚಿಸಿದ ವಚನಗಳು ಕಲ್ಯಾಣ ರಾಜ್ಯವನ್ನು ಸೃಷ್ಟಿ ಮಾಡುವಂತಹ ಶಕ್ತಿ ಹೊಂದಿವೆ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ನವೆಂಬರ್ 03 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಎಸ್.ಜೆ.ಎಂ. ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಕಣುಮೇಶ್, ಸುಂಕದ ಬಂಕಣ್ಣ ಶರಣರ ಕುರಿತು ಮಾತನಾಡಿ, 12ನೇ ಶತಮಾನದಲ್ಲಿಯೂ ಸಹ ಸುಂಕವನ್ನು ಸಂಗ್ರಹಿಸಲಾಗುತ್ತಿತ್ತು. ಆ ಕಾಲಘಟ್ಟದಲ್ಲಿ ಪ್ರಾಮಾಣಿಕತೆ, ಮಾನವೀಯತೆ ಹೊಂದಿರುವ ಶರಣರನ್ನು ಕಾಣುತ್ತೇವೆ. ಅದೇ ರೀತಿ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣುವ ಮನೋಭಾವ ಶ್ರೀಮಠದಲ್ಲಿ ಇದೆ ಎಂದು ಹೇಳಿದರು.

ಎಸ್.ಜೆ.ಎಂ. ಬ್ಯಾಂಕ್‌ನ ವ್ಯವಸ್ಥಾಪಕ ಟಿ.ಕೆ. ರಾಜಶೇಖರ್, ಹರಗುರು ಚರಮೂರ್ತಿಗಳು, ವಿವಿಧ ಸಮಾಜದ ಮುಖಂಡರು, ಎಸ್.ಜೆ.ಎಂ. ವಿದ್ಯಾಪೀಠದ ನೌಕರ ವರ್ಗದವರು, ಗುರುಕುಲದ ಮಕ್ಕಳು, ವಿದ್ಯಾರ್ಥಿಗಳು, ಬಸವ ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BasavannaChitradurgaChitradurga newsequalityಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವಣ್ಣಸಮಾನತೆ
Share This Article
Facebook Email Print
Previous Article ಬಿ.ಆರ್.ಪಿ ಮತ್ತು ಸಿ.ಆರ್.ಪಿಗಳಿಗೆ ಜಿಲ್ಲಾಮಟ್ಟದ ಎಂ.ಆರ್.ಪಿ ತರಬೇತಿ | ಪ್ರಾಚಾರ್ಯ ಎಂ.ನಾಸಿರುದ್ದೀನ್ ಉದ್ಘಾಟನೆ
Next Article ಮರುಳು ಮಾಡುವವರ ಮಾತು ನಂಬಬೇಡಿ‌‌ | ಡಾ.ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ವಸತಿ ಶಾಲೆ ವಿದ್ಯಾರ್ಥಿಗಳು
ಎಸ್‍ಎಸ್‍ಎಲ್‍ಸಿ RESULT | 29 ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ
ಮುಖ್ಯ ಸುದ್ದಿ
Yogish Sahyadri
ತುಮಕೂರಿನಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ-ಸಾಂಸ್ಕೃತಿಕ ಶಿಬಿರ | ಚಿತ್ರದುರ್ಗದಿಂದ ಭಾಗವಹಿಸಲು ಅವಕಾಶ 
ಮುಖ್ಯ ಸುದ್ದಿ
ಡಾ.ರಾಜ್‍ಕುಮಾರ್ ಅವರ 97ನೇ ಜನ್ಮ ದಿನಾಚರಣೆ
ಡಾಡಾ.ರಾಜಕುಮಾರ್ ಗುಣಗಳು ಇಂದಿನ ಪೀಳಿಗೆಗೆ ದಾರಿದೀಪ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
arecanut price list
ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up