
CHITRADURGA NEWS | 07 MAY 2024
ಚಿತ್ರದುರ್ಗ: ಜಿಲ್ಲಾ ವೀರಶೈವ ಸಮಾಜದ ವತಿಯಿಂದ ವಿಶ್ವಗುರು ಬಸವಣ್ಣ ರವರ ಜಯಂತೋತ್ಸವದ ಅಂಗವಾಗಿ ಬೈಕ್ ರ್ಯಾಲಿ ಹಾಗೂ ಬಸವೇಶ್ವರ ಭಾವಚಿತ್ರ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಉದ್ಯೋಗ ಮಾಡುವ ಆಸೆಯೇ, ಏನು ಮಾಡಬೇಕೆಂಬ ಐಡಿಯಾ ಇಲ್ಲವೇ.. ಹಾಗಿದ್ದರೆ ಈ ಸುದ್ದಿ ಓದಿ, ನಿಮಗೊಂದು ಒಳ್ಳೆಯ ದಾರಿ ಸಿಗುತ್ತೆ..
ಮೇ.9 ರಂದು ಮಧ್ಯಾಹ್ನ 3.30ಕ್ಕೆ ವೀರಶೈವ ಯುವ ಸಂಘಟನೆ ವತಿಯಿಂದ ಬೈಕ್ ರ್ಯಾಲಿಯು ನಗರದ ನೀಲಕಂಠೇಶ್ವರ ಸ್ವಾಮಿ ದೇವಾಲಯದಿಂದ ಪ್ರಾರಂಭವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನ ತಲುಪಲಿದೆ.
ಮೇ.10 ರಂದು ಸಂಜೆ 4 ಗಂಟೆಗೆ ಶ್ರೀ ಬಸವೇಶ್ವರರ ಭಾವಚಿತ್ರ ಮೆರವಣಿಗೆಯು ದೇವಸ್ಥಾನದಿಂದ ಆರಂಭವಾಗಿ ಗಾಂಧಿ ವೃತ್ತ, ಆನೆ ಬಾಗಿಲು, ಚಿಕ್ಕಪೇಟೆ, ದೊಡ್ಡಪೇಟೆ, ರಂಗಯ್ಯನ ಬಾಗಿಲು, ಬಸವಮಂಟಪ ರಸ್ತೆ ಅಂಬೇಡ್ಕರ್ ವೃತ್ತ, ಬಿ.ಡಿ.ರಸ್ತೆಯ ಮೂಲಕ ಮರಳಿ ದೇವಸ್ಥಾನ ತಲುಪಲಿದೆ.
ಇದನ್ನೂ ಓದಿ: ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸುವವು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಬಸವಣ್ಣನವರ ಜಯಂತೋತ್ಸವವನ್ನು ಯಶಸ್ವಿಗೂಳಿಸಬೇಕು ಎಂದು ಮನವಿ ಮಾಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
