By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಎಚ್ಚರ…ಮನೆಯಿಂದ ಹೊರ ಬರಬೇಡಿ | ಹೆಚ್ಚಿದೆ ಸೂರ್ಯನ ಆರ್ಭಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಎಚ್ಚರ…ಮನೆಯಿಂದ ಹೊರ ಬರಬೇಡಿ | ಹೆಚ್ಚಿದೆ ಸೂರ್ಯನ ಆರ್ಭಟ

ಮುಖ್ಯ ಸುದ್ದಿ

ಎಚ್ಚರ…ಮನೆಯಿಂದ ಹೊರ ಬರಬೇಡಿ | ಹೆಚ್ಚಿದೆ ಸೂರ್ಯನ ಆರ್ಭಟ

News Desk Chitradurga News
Last updated: 3 April 2024 12:38
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 3 APRIL 2024
ಚಿತ್ರದುರ್ಗ: ದಿನದಿಂದ ದಿನಕ್ಕೆ ಬೇಸಿಗೆ ತಾಪಮಾನ ಹೆಚ್ಚಾಗುತ್ತಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತೀವ್ರತೆ ನಿರೀಕ್ಷೆ ಮೀರಿ ಏರಿಕೆಯಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ರಕ್ಷಣೆ ಪ್ರತಿಯೊಬ್ಬರಿಗೂ ಸವಾಲ್‌ ಆಗಿದೆ.

ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ತಾಯಂದಿರು, ವಯೋವೃದ್ಧರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣು ಪ್ರಸಾದ್‌ ವಿನಂತಿಸಿದ್ದಾರೆ.

ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು, ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸಿದ್ದಾರೆ.

ಹೆಚ್ಚು ನೀರು ಕುಡಿಯುವುದು: ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‌ಎಸ್‌ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.

ಕ್ಲಿಕ್ ಮಾಡಿ ಓದಿ: ಶಾಸಕ ಚಂದ್ರಪ್ಪ ಮನೆಗೆ ಕಾರಜೋಳ ಭೇಟಿ | ಮಾತಿಗೆ ತಪ್ಪಲ್ಲ ಎಂದ ರಘುಚಂದನ್

ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.

ಇವುಗಳನ್ನು ಮಾಡಬಾರದು: ಬಿಸಿಲಿನಲ್ಲಿ ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮದ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರುವ ಸಾಧ್ಯತೆ ಹೆಚ್ಚಿದೆ.

ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.

ಸಾಮಾನ್ಯ ಅಪಾಯದ ಚಿಹ್ನೆಗಳು: ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.

ಕ್ಲಿಕ್ ಮಾಡಿ ಓದಿ: ಪೊಲೀಸರಿಗೆ ಬೊಜ್ಜು ಕರಗಿಸೋ ಚಾಲೆಂಜ್‌ | ವ್ಯಾಯಾಮ ಪರಿಕರದ ಎಸ್ಪಿ ಟಾಸ್ಕ್

ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‌ಎಸ್‌, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆ ನೀಡಲಾಗಿದೆ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ArbhataHealthSunsunshineWake upಆರೋಗ್ಯಆರ್ಭಟಎಚ್ಚರಬಿಸಿಲುಸೂರ್ಯ
Share This Article
Facebook Email Print
Previous Article ಶಾಸಕ ಚಂದ್ರಪ್ಪ ಮನೆಗೆ ಕಾರಜೋಳ ಭೇಟಿ | ಮಾತಿಗೆ ತಪ್ಪಲ್ಲ ಎಂದ ರಘುಚಂದನ್
Next Article 6 ರಂದು ಶನೇಶ್ವರ ಸ್ವಾಮಿ ದೇಗುಲ ಲೋಕಾರ್ಪಣೆ | ಪ್ರಾಣ ಪ್ರತಿಷ್ಠಾಪನೆ, ಗೋಪುರ ಕಳಸಾರೋಹಣ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up