
CHITRADURGA NEWS | 12 September 2025
ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡ್ರೋನ್ ಹಾರಿಸಿದರೆ ಶಿಕ್ಷೆ ಖಚಿತ.ಹೌದು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಸೆಪ್ಟಂಬರ್ 13 ರಂದು ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾಯಾತ್ರೆ ಆಯೋಜಿಲಾಗಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೊಭಾಯಾತ್ರೆಗೆ ಬಂದೋಬಸ್ತ್ | 151 ಕಡೆ ಸಿಸಿ ಟಿವಿ ಕ್ಯಾಮರಾ | 67 ಕ್ಯಾಮರಾಮೆನ್
ಈ ಶೋಭಾಯಾತ್ರೆಯಲ್ಲಿ ಸುಮಾರು ನಾಲ್ಕು ಲಕ್ಷ ಜನ ಭಾಗವಹಿಸುವ ಅಂದಾಜಿದ್ದು, ಜನರ ಸುರಕ್ಷತೆ ದೃಷ್ಠಿಯಿಂದ ಪೊಲೀಸ್ ಇಲಾಖೆಯ ಅನುಮತಿ ಇಲ್ಲದೆ ಯಾರಾದರೂ ಡ್ರೋನ್ ಕ್ಯಾಮರಾ ಹಾರಿಸಿದರೆ ಪೊಲೀಸರು ಡ್ರೋನ್ ಜಪ್ತಿ ಮಾಡಿ, ಆಪರೇಟರ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗುಸಲಿದ್ದಾರೆ.
ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಮಯದಲ್ಲಿ ಪೊಲೀಸ್ ಅಧೀಕ್ಷಕರವರ ಪೂರ್ವಾನುಮತಿಯನ್ನು ಪಡೆಯದೇ ಯಾವುದೇ ಡೋನ್ ಕ್ಯಾಮೆರಾ ಬಳಕೆ ಮಾಡುವುದನ್ನು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಿದೆ.
ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ
ಒಂದೊಮ್ಮೆ ಅನುಮತಿ ಪಡೆಯದೇ ಅನಧಿಕೃತವಾಗಿ ಡೋನ್ ಕ್ಯಾಮೆರಾಗಳನ್ನು ಬಳಕೆ ಮಾಡಿದಲ್ಲಿ ಸಂಬಂಧಪಟ್ಟ ಡೋನ್ ಕ್ಯಾಮೆರಾವನ್ನು ಜಫ್ತು ಮಾಡಿಕೊಂಡು Government of India Ministry of Civil Aviation & Ministry of Home Affairs (DGCA) ನಿಯಮಗ) ಪ್ರಕಾರ ಆಪರೇಟರ್ ಮತ್ತು ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
