
CHITRADURGA NEWS | 22 MARCH 2025
ಚಿತ್ರದುರ್ಗ: ಜಮೀನಿಗೆ ನೀರು ಹಾಯಿಸಲು ಹೋಗಿದ್ದ ರೈತರ ಮೇಲೆ ಕರಡಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಸಿರಿಗೆರೆ ಸಮೀಪದ ಅಳಗವಾಡಿ ಗ್ರಾಮದ ಶಿವಪ್ಪ ಹಾಗೂ ಅವರ ಪುತ್ರ ರಂಗನಾಥ್ ಇಬ್ಬರು ಶುಕ್ರವಾರ ರಾತ್ರಿ ನೀರು ಹಾಯಿಸಲು ಜಮೀನಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
25 ವರ್ಷದ ರಂಗನಾಥ್ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದ್ದು, ತಲೆಯ ಭಾಗಕ್ಕೆ ಬಾಯಿ ಹಾಕಿ ಕಚ್ಚಿದೆ. ಕೈಯಿಂದ ತರಚಿದಂತೆ ಮಾಡಿದ್ದು ತೀವ್ರ ರಕ್ತಸ್ರಾವ ಆಗಿದೆ.
ಕರಡಿ ದಾಳಿಗೆ ಸಿಲುಕಿ ಬಿಡಿಸಿಕೊಳ್ಳಲಾಗದೆ ಕಿರುಚುತ್ತಿರುವುದನ್ನು ಕೇಳಿ ದೂರದಲ್ಲಿದ್ದ ತಂದೆ ಶಿವಪ್ಪ ಓಡಿ ಬಂದು ಕರಡಿ ಓಡಿಸಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ತಕ್ಷಣ ಬೈಕ್ ಸಹಾಯದಿಂದ ಪುತ್ರನನ್ನು ಸಿರಿಗೆರೆ ಆಸ್ಪತ್ರೆಗೆ ಕರೆತಂದಿದ್ದು, ಇಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
