
CHITRADURGA NEWS | 30 JULY 2024
ಚಿತ್ರದುರ್ಗ: ಎಮ್ಮೆ ಮೇಯಿಸುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡ ಚಳ್ಳಕೆರೆ ತಾಲ್ಲೂಕಿನ ಓಬಳಾಪುರದ ಓಂಕಾರಪ್ಪ (56) ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮದ ಕೆರೆಯಂಗಳದಲ್ಲಿ ಎಮ್ಮೆ ಮೇಯಿಸುತ್ತಿದ್ದ ಓಂಕಾರಪ್ಪ ಎಂಬಾತನ ಮೇಲೆ ಸೋಮವಾರ ಹಿಂಭಾಗದಿಂದ ಬಂದ ಕರಡಿ ದಾಳಿ ನಡೆಸಿ ಕಣ್ಣು, ತಲೆ ಹಾಗೂ ಮೂಗನ್ನು ಗಂಭೀರವಾಗಿ ಗಾಯಗೊಳಿಸಿದೆ. ಜೋರಾಗಿ ಕಿರುಚಿದ ಶಬ್ದ ಕೇಳಿ ಸಮೀಪದಲ್ಲೇ ಜಾನುವಾರುಗಳನ್ನು ಮೇಯಿಸುತ್ತಿದ್ದ ದನಗಾಹಿಗಳು ಓಡಿ ಬಂದಿದ್ದು ಅಷ್ಟರಲ್ಲಿ ಕರಡಿ ಓಡಿ ಹೋಗಿದೆ.
ಇದನ್ನೂ ಓದಿ: ಗಾಂಧಿನಗರದಲ್ಲಿ ಮನೆ ಕಳ್ಳತನ | ಆರೋಪಿ ಬಂಧನ
ಕೂಡಲೇ ಚಳ್ಳಕೆರೆಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಬಳಿಕ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸ್ಥಿತಿ ಗಂಭೀರವಾಗಿದ್ದರಿಂದ ದಾವಣಗೆರೆ ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ: ವೇದಾವತಿ ನದಿ ಹರಿಯುವ ದೃಶ್ಯ ನಯನ ಮನೋಹರ
ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ‘ಕರಡಿ ದಾಳಿಗೆ ಸಿಲುಕಿ ಗಾಯಗೊಂಡ ವ್ಯಕ್ತಿಯ ಚಿಕಿತ್ಸಾ ವೆಚ್ಚವನ್ನು ಇಲಾಖೆ ಭರಿಸಲಿದೆ’ ಎಂದು ಹಿರಿಯೂರು ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಸುರೇಶ್ ತಿಳಿಸಿದ್ದಾರೆ.
ಗಡಿ ಭಾಗದಲ್ಲಿ 10 ವರ್ಷಗಳ ಬಳಿಕ ಕರಡಿ ದಾಳಿ ನಡೆದಿದೆ. ಗಡಿ ಭಾಗ ಮತ್ತು ವೇದಾವತಿ ನದಿ ತೀರದ ವಿವಿಧ ಗ್ರಾಮದ ಜನರು ಸಂಜೆ, ಬೆಳಿಗ್ಗೆ ಜಮೀನುಗಳಿಗೆ ಹೋಗುವಾಗ ತೀವ್ರ ಎಚ್ಚರಿಕೆ ವಹಿಸಬೇಕು ಎಂದು ವಲಯ ಅರಣ್ಯ ಅಧಿಕಾರಿ ಬಹುಗುಣ ಸಲಹೆ ನೀಡಿದ್ದಾರೆ.
ಉಪ ವಲಯ ಅರಣ್ಯಾಧಿಕಾರಿ ವಸಂತಕುಮಾರ್, ಅರಣ್ಯ ರಕ್ಷಕ ರಾಜೇಶ್ ಸ್ಥಳದಲ್ಲಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

