
CHITRADURGA NEWS | 26 JULY 2025
ಮೊಳಕಾಲ್ಮೂರು: ಮೊಳಕಾಲ್ಮೂರು ತಾಲೂಕು ರಾಂಪುರ ಸಮೀಪದ ಗ್ರ್ಯಾಂಡ್ ಹೋಟೆಲ್ ಎದುರು ಇಂದು ಬೆಳಗಿನ ಜಾವ ವಾಹನ ಡಿಕ್ಕಿಯಾಗಿ ಕರಡಿ ಮೃತಪಟ್ಟಿದೆ.
ಇದನ್ನೂ ಓದಿ: ಹೊಸದುರ್ಗದಲ್ಲಿ ವಿದ್ಯುತ್ ವ್ಯತ್ಯಯ
ಸುಮಾರು ಆರೇಳು ವರ್ಷದ ಗಂಡು ಕರಡಿ ಅಪಘಾತದ ರಭಸಕ್ಕೆ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಮೃತಪಟ್ಟಿದೆ.
ಬೆಂಗಳೂರು – ಬಳ್ಳಾರಿ ಮಾರ್ಗದ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ವನ್ಯಜೀವಿಗಳು ಅಪಘಾತಕ್ಕೀಡಾಗಿ ನಿರಂತರವಾಗಿ ಸಾಯುತ್ತಿರುವುದು ಜಿಲ್ಲೆಯಲ್ಲಿ ಆತಂಕಕಾರಿ ಬೆಳವಣಿಗೆ ಎಂದು ಪರಿಸರ ಪ್ರಿಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಕ್ರೋಶ:
ಮೊಳಕಾಲ್ಮೂರು ಗುಡ್ಡ ಪ್ರದೇಶ ಮತ್ತು ಕಾಯ್ದಿಟ್ಟ ಅರಣ್ಯ ಪ್ರದೇಶ ಹೊಂದಿಕೊಂಡಂತೆ ಸುತ್ತಮುತ್ತ ಬೃಹತ್ ಕಲ್ಲು ಬಂಡೆಗಳ ಗುಡ್ಡಗಾಡು ಇರುವುದರಿಂದ ವನ್ಯಜೀವಿಗಳು ಒಂದು ಕಡೆಯಿಂದ ಮತ್ತೊಂದು ಕಡೆ ಓಡಾಡುವುದು ಸಾಮಾನ್ಯವಾಗಿದೆ. ಹೀಗಾಗಿ ಕರಡಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕರಡಿ ಹೆದ್ದಾರಿಯಲ್ಲೇ ಕೊನೆಯುಸಿರೆಳೆದಿದೆ.
ಇದನ್ನೂ ಓದಿ: ದಿನ ಭವಿಷ್ಯ | ಜುಲೈ 26 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
ಮತ್ತೊಂದು ಕಡೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಿರತೆ, ಕರಡಿ, ಜಿಂಕೆ ಇನ್ನಿತರ ಕಾಡುಪ್ರಾಣಿಗಳು ರಸ್ತೆ ಅಪಘಾತಕ್ಕೆ ಸಿಲುಕಿ ಮೃತಪಡುತ್ತಿರುವುದು ಆತಂಕ ಮೂಡಿಸಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಮಾಲತೇಶ್ ಅರಸ್, ಪ್ರಧಾನ ಕಾರ್ಯದರ್ಶಿ ಟಿ.ರುದ್ರಮುನಿ, ಉಪಾಧ್ಯಕ್ಷರಾದ ಓಂಕಾರಪ್ಪ, ಕಾನೂನು ಸಲಹೆಗಾರರಾದ ಶಿವಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
