CHITRADURGA NEWS | 28 MARCH 2026
ಚಿತ್ರದುರ್ಗ: ಬೈಕಿನಲ್ಲಿ ಜೋರಾಗಿ ಬರುತ್ತಿದ್ದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದ ಆರೋಪಿಗೆ ಚಿತ್ರದುರ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹಿರಿಯೂರಿನ ನಂಜಯ್ಯನಕೊಟ್ಟಿಗೆಯಿಂದ ಕೆ.ಎಂ.ಕೊಟ್ಟಿಗೆಗೆ ಹೋಗುವ ಮಾರ್ಗದಲ್ಲಿ ಆರೋಪಿ ತಿಪ್ಪೇಸ್ವಾಮಿ ಬೈಕಿನಲ್ಲಿ ಅತೀ ವೇಗವಾಗಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
ಇದನ್ನು ಗಮನಿಸಿದ ಶ್ರೀಧರಮೂರ್ತಿ ಎಂಬುವವರು ಇಷ್ಟು ವೇಗವಾಗಿ ಯಾಕೆ ಓಡಿಸುತ್ತಿಯ ಎಂದು ಕೇಳಿದ್ದಕ್ಕೆ ಆರೋಪಿ ತಿಪ್ಪೇಸ್ವಾಮಿ, ಇದನ್ನು ಕೇಳಲು ನೀನ್ಯಾರು ಎಂದು ಜಗಳ ನಡೆಸಿ ತನ್ನ ಜೇಬಿನಲ್ಲಿದ್ದ ಬಿಯರ್ ಬಾಟಲಿಯಿಂದ ಶ್ರೀಧರಮೂರ್ತಿ ಅವರ ತಲೆ ಹಾಗೂ ಬೆನ್ನಿಗೆ ಹಲ್ಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ.
ಈ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿಎಸ್‌ಐ ಬಿ.ಎನ್.ಮಂಜುನಾಥ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ:ಹೊಸದುರ್ಗ, ಹೊಳಲ್ಕೆರೆ ಭಾಗದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ | ಪಿಸಿಪಿಎನ್ಡಿಟಿ ಸಮಿತಿ ಕಳವಳ
ವಿಚಾರಣೆ ನಡೆಸಿದ ಜಿಲ್ಲಾ ಪತ್ರು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಅವರು, ಮಾ.27 ರಂದು ಆರೋಪಿ ತಿಪ್ಪೇಸ್ವಾಮಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಂಶೀರ್ ಅಲಿಖಾನ್ ವಾದ ಮಂಡಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
