CHITRADURGA NEWS | 11 JUNE 2025
ಮುಖ್ಯಾಂಶಗಳು:
- ಚಿತ್ರದುರ್ಗ-ಚಳ್ಳಕೆರೆ-ಬಳ್ಳಾರಿ ರೈಲ್ವೇ ಡಬ್ಲಿಂಗ್
- 3342 ಕೋಟಿ ರೂ. ಮೊತ್ತದ ಯೋಜನೆಗೆ ಕೇಂದ್ರದ ಒಪ್ಪಿಗೆ
- ಒಟ್ಟು 185 ಕಿ.ಮೀ ಉದ್ದದ ಮಾರ್ಗ
- 174 ಹೆಕ್ಟೇರ್ ಭೂಸ್ವಾಧೀನ
ಚಿತ್ರದುರ್ಗ: ರೈಲ್ವೇ ವಿಚಾರದಲ್ಲಿ ಕೋಟೆನಾಡು ಚಿತ್ರದುರ್ಗಕ್ಕೆ ಮತ್ತೊಮ್ಮೆ ಲಕ್ ಖುಲಾಯಿಸಿದ್ದು, ರೂ. 3,342 ಕೋಟಿ ವೆಚ್ಚದ ಚಿಕ್ಕಜಾಜೂರು-ಚಿತ್ರದುರ್ಗ-ಚಳ್ಳಕೆರೆ-ಬಳ್ಳಾರಿ ರೈಲ್ವೆ ಡಬ್ಲಿಂಗ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ರೂ. 3,342 ಕೋಟಿ ವೆಚ್ಚದ ಚಿಕ್ಕಜಾಜೂರು-ಚಿತ್ರದುರ್ಗ-ಚಳ್ಳಕೆರೆ-ಬಳ್ಳಾರಿವರೆಗಿನ 185 ಕಿ.ಮೀಟರ್ ಉದ್ದದ ರೈಲ್ವೆ ಮಾರ್ಗವನ್ನು ದ್ವಿಪಥ ರೈಲ್ವೆ ಮಾರ್ಗವನ್ನಾಗಿ (ಡಬ್ಲಿಂಗ್) ನಿರ್ಮಾಣ ಮಾಡಲು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಇದನ್ನೂ ಓದಿ: ಚಿತ್ರದುರ್ಗಕ್ಕೆ ಮತ್ತೊಂದು ರೈಲು ಮಾರ್ಗ | ಮಲೆನಾಡಿನಿಂದ ಅರೆ ಮಲೆನಾಡು ಸಂಪರ್ಕ | 1825 ಕೋಟಿ ವೆಚ್ಚ
ಈ ವಿಷಯವಾಗಿ ರೈಲ್ವೆ ಸಚಿವರುಗಳಿಗೆ ಸಂಸದ ಗೋವಿಂದ ಕಾರಜೋಳರವರು ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಒತ್ತಡ ಹೇರಿದ್ದರು.

ಈ ಯೋಜನೆಗೆ ಅನುಮೋದನೆ ನೀಡಿರುವ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದೀಜಿಯವರಿಗೆ ರೈಲ್ವೆ ಸಚಿವರುಗಳಾದ ಶ್ರೀ ಅಶ್ವಿನಿ ವೈಷ್ಣವಿರವರಿಗೆ, ಶ್ರೀ ವಿ. ಸೋಮಣ್ಣರವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನತೆಯ ಪರವಾಗಿ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ: KRS ಮಾದರಿಯಲ್ಲಿ ವಿವಿ ಸಾಗರದ ಅಭಿವೃದ್ಧಿ | ಬೆಂಗಳೂರಿನಲ್ಲಿ ಮಹತ್ವದ ಸಭೆ | ಪ್ರವಾಸಿ ತಾಣವಾಗಿ ರೂಪಿಸಲು ಸೂಚನೆ
ಸದರಿ ಮಾರ್ಗದಲ್ಲಿ 174 ಹೆಕ್ಟೇರ್ ಭೂಸ್ವಾಧೀನದ ಅವಶ್ಯಕತೆಯಿದ್ದು, ಚಿತ್ರದುರ್ಗ ಲೋಸಕಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳಲ್ಕೆರೆ ತಾಲ್ಲೂಕು, ಅಮೃತಾಪುರ ರೈಲ್ವೆ ನಿಲ್ದಾಣ ಹೊಸ ರೈಲ್ವೆ ನಿಲ್ದಾಣವಾಗಿ ನಿರ್ಮಾಣವಾಗಲಿದೆ.
ಈ ಮಾರ್ಗದಲ್ಲಿ 29 ಪ್ರಮುಖ ಸೇತುವೆಗಳು 230 ಸಣ್ಣ ಸೇತುವೆಗಳು 12 ಲೆವೆಲ್ ಕ್ರಾಸಿಂಗ್‌ಗಳು ನಿರ್ಮಾಣವಾಗಲಿವೆ. ಈ ಯೋಜನೆಯನ್ನು 4 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶವನ್ನು ರೈಲ್ವೆ ಇಲಾಖೆ ಹೊಂದಿದೆ.
ಇದನ್ನೂ ಓದಿ: ಜಾನುಕೊಂಡದಲ್ಲಿ ನೂತನ ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಈ ಮಾರ್ಗವು ಮಂಗಳೂರು ಬಂದರಿನೊಂದಿಗೆ ಹೈದರಾಬಾದ್, ಹೊಸಪೇಟೆ, ಬಳ್ಳಾರಿ, ಕೈಗಾರಿಕಾ ಪ್ರದೇಶಗಳಿಗೆ ಹಾಗೂ ಬಳ್ಳಾರಿ – ಚಿತ್ರದುರ್ಗ ಗಣಿ ಪ್ರದೇಶಗಳಿಗೆ ನೇರ ಸಂಪರ್ಕವನ್ನು ಹೊಂದುವ ಮೂಲಕ ಹೆಚ್ಚು ಉಪಯುಕ್ತವಾಗಲಿದೆ. ಅಲ್ಲದೆ, ಹೈದರಾಬಾದ್, ಬಳ್ಳಾರಿ, ಹಂಪಿ ಸೇರಿದಂತೆ ಹಲವಾರು ಪ್ರವಾಸಿ ತಾಣಗಳಿಗೆ ಹೆಚ್ಚು ಸಹಕಾರಿಯಾಗಲಿದೆ.
ಮಂಗಳೂರು ಬಂದರಿಗೆ ಕಬ್ಬಿಣದ ಅದಿರು ಸಾಗಾಟಕ್ಕೆ ಈ ಮಾರ್ಗ ಹೆಚ್ಚು ಅನುಕೂಲಕರವಾಗಲಿದೆ. ಒಟ್ಟಾರೆಯಾಗಿ ಹೈದರಾಬಾದ್ ಕರ್ನಾಟಕವನ್ನು ಮಧ್ಯ ಕರ್ನಾಟಕದೊಂದಿಗೆ ಕರಾವಳಿ ಕರ್ನಾಟಕಕ್ಕೆ ಬೆಸೆಯುವ ಈ ಮಾರ್ಗ ಸಾರ್ವಜನಿಕವಾಗಿ ಹೆಚ್ಚು ಅನುಕೂಲಕರವಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
