
CHITRADURGA NEWS | 06 JANUARY 2026
ಚಿತ್ರದುರ್ಗ: ಬಳ್ಳಾರಿ ರಕ್ಷಣಾಧಿಕಾರಿ ಪವನ್ ನಜ್ಜೂರ್‍ರವರ ಅಮಾನತ್ತನ್ನು ಕೂಡಲೆ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಡಿವೈಎಸ್ಪಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಅಮ್ಮ ದುಡ್ಡು ಕೊಡಲಿಲ್ಲ ಅಂತಾ ಬೆಂಕಿ ಹಚ್ಚಿಕೊಂಡ ಮಗ
ಮಾಜಿ ಸಚಿವ ಜನಾರ್ಧನರೆಡ್ಡಿರವರ ನಿವಾಸದ ಸಮೀಪ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಗುಂಡಿಗೆ ಬಲಿಯಾಗಿರುವುದಕ್ಕೆ ಸಂಬಂಧಿಸಿದಂತೆ ಎಸ್.ಪಿ. ಪವನ್ ನಜ್ಜೂರ್‍ರವರನ್ನು ಅಮಾನತ್ತುಗೊಳಿಸಿರುವುದು ಯಾವ ನ್ಯಾಯ?
ಘಟನೆಗಳಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸುವ ಬದಲು ಅಧಿಕಾರ ವಹಿಸಿಕೊಂಡ ಮರುದಿನವೇ ಪವನ್‍ನಜ್ಜೂರ್‍ರವರನ್ನು ಅಮಾನತ್ತುಪಡಿಸಿರುವುದರಲ್ಲಿ ಅರ್ಥವಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇವರುಗಳು ಸತ್ಯಾಸತ್ಯತೆಯನ್ನು ಅರಿತು ಕೂಡಲೆ ಅಮಾನತ್ತು ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಅವಿನಾಶ್, ಶಶಿ, ಪ್ರದೀಪ್, ಮುಜಾಹಿದ್, ಚಂದನ, ತಿಪ್ಪೇಸ್ವಾಮಿ, ವಿಜಯಬಾಬು, ನಿಸಾರ್ ಇವರುಗಳು ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
