Connect with us

    Bescom Cash Counter: ಭಾನುವಾರವೂ ವಿದ್ಯುತ್‌ ಬಿಲ್‍ ಪಾವತಿಸಿ | ಬೆಸ್ಕಾಂ ಕ್ಯಾಶ್‌ ಕೌಂಟರ್‌ ಓಪನ್

    ಬೆಸ್ಕಾ

    ಮುಖ್ಯ ಸುದ್ದಿ

    Bescom Cash Counter: ಭಾನುವಾರವೂ ವಿದ್ಯುತ್‌ ಬಿಲ್‍ ಪಾವತಿಸಿ | ಬೆಸ್ಕಾಂ ಕ್ಯಾಶ್‌ ಕೌಂಟರ್‌ ಓಪನ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 SEPTEMBER 2024
    ಚಿತ್ರದುರ್ಗ: ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ಸೆ. 8 ಮತ್ತು 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ತಿಳಿಸಿದೆ.

    ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್‌ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಎಂಬ ಉದ್ದೇಶದಿಂದ ಬೆಸ್ಕಾಂ ವಲಯದ ಎಲ್ಲ ಉಪ ವಿಭಾಗಗಳ ಕ್ಯಾಶ್‌ ಕೌಂಟರ್‌ಗಳನ್ನು ಈ ತಿಂಗಳ 8 ಮತ್ತು 15ರ ಭಾನುವಾರವೂ ತೆರೆಯಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಪೇಮೆಂಟ್‌ ಬಳಸದವರ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.

    ಕ್ಲಿಕ್ ಮಾಡಿ ಓದಿ: ಗಣೇಶ ಮೂರ್ತಿ ವಿಸರ್ಜನೆ | ನಗರಸಭೆಯಿಂದ ತೊಟ್ಟಿಗಳ ವ್ಯವಸ್ಥೆ | ಇಲ್ಲಿದೆ ನೋಡಿ ಪಟ್ಟಿ

    ಬಿಲ್‌ ಬಂದ 30 ದಿನದೊಳಗೆ ವಿದ್ಯುತ್‌ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್‌ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

    ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ಮೀಟರ್‌ ರೀಡಿಂಗ್‌ಗೆ ಬರುವ ದಿನವೇ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಈಗಾಗಲೇ ಕೋರಿದೆ.

    ಕ್ಲಿಕ್ ಮಾಡಿ ಓದಿ: ಪಿಡಿಒ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ | ಹಣ ದುರುಪಯೋಗ ಆರೋಪ

    ವಿದ್ಯುತ್‌ ಬಿಲ್‌ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಶೂನ್ಯ ಬಿಲ್‌ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟ ಪಡಿಸಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top