
CHITRADURGA NEWS | 04 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ಬೆಸ್ಕಾಂ ಇಂಜಿನಿಯರ್ ತಿಮ್ಮರಾಯಪ್ಪ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಸ್ಕಾಂ ಕಂಟ್ರಾಕ್ಟರ್ ಬಳಿ 35 ಲಕ್ಷ ಟೆಂಡರ್ ಗೆ 10 % ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದರ ಅಂಗವಾಗಿ ರೂ.3.5 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ | 17 ಶಿಕ್ಷಕರು ಆಯ್ಕೆ
ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಬೆಸ್ಕಾಂ ಕಂಟ್ರಾಕ್ಟರ್ ಸಂಜಯ್ ದೂರು ನೀಡಿದ್ದು. ಸಂಜಯ್ ನೀಡಿದ ದೂರು ಆಧರಿಸಿ ನಿನ್ನೆ ರಾತ್ರಿ ತಿಮ್ಮರಾಯಪ್ಪ ವಿರುದ್ದ FIR ದಾಖಲು ಮಾಡಲಾಗಿದೆ.
ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಂ ನೇತೃತ್ವದಲ್ಲಿ ಟ್ರಾಪ್ ಮಾಡಲಾಗಿದೆ. ಟೀಚರ್ಸ್ ಕಾಲೋನಿ ಮನೆ ಬಳಿ ಲಂಚ ಪಡೆದು ಸಿಕ್ಕಿಬಿದ್ದ ಬೆಸ್ಕಾಂ EE ತಿಮ್ಮರಾಯಪ್ಪ. ಲಂಚದ ಹಣವನ್ನು ಹಿಂಪಡೆದು, ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
