
ಚಿತ್ರದುರ್ಗ ನ್ಯೂಸ್.ಕಾಂ: ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯಿಂದ, ಚಿತ್ರದುರ್ಗ ಜಿಲ್ಲಾ ಶಾಖೆಗೆ ‘ಬೆಸ್ಟ್ ಡಿಸ್ಟ್ರಿಕ್ಟ್ ಅವಾರ್ಡ್’ (BEST DISTRICT AWARD) ನೀಡಿ ಪುರಸ್ಕರಿಸಲಾಗಿದೆ.
2020-21ನೇ ಸಾಲಿನಲ್ಲಿ ಜಗತ್ತಿನೆಲ್ಲೆಡೆ ಬಂದ ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಜನ ಜೀವ ಕಳೆದುಕೊಂಡರು. ಹಲವರು ಹೈರಾಣಾದರು. ಈ ವೇಳೆ ಅನೇಕ ಸಂಘ ಸಂಸ್ಥೆಗಳು ಜೀವದ ಹಂಗು ತೊರೆದು ಮುಂದೆ ಬಂದು ಜನರ ಸೇವೆಗೆ ನಿಂತಿದ್ದರು. ಈ ಸಾಲಿನಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಚಿತ್ರದುರ್ಗ ಜಿಲ್ಲಾ ಶಾಖೆ ಕೂಡಾ ಸೇರಿದೆ.
ಇದನ್ನೂ ಓದಿ: ಬಂಗಾರದ ನಾಣ್ಯದ ಕಥೆ 8 ಲಕ್ಷಕ್ಕೆ ನಾಮ | ನಾಲ್ಕೇ ದಿನಗಳಲ್ಲಿ ಬೇಧಿಸಿದ ಪೊಲೀಸರು
ಬೆಂಗಳೂರಿನ ರಾಜ ಭವನದಲ್ಲಿ ಮಂಗಳವಾರ ನಡೆದ ಕರ್ನಾಟಕ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯಪಾಲರು ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆಯ ಅಧ್ಯಕ್ಷರಾದ ಥಾವರಚಂದ್ ಗೆಹಲೊಟ್ ಚಿತ್ರದುರ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ದಿವ್ಯಪ್ರಭು ಜಿ.ಆರ್.ಜೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ರೆಡ್‍ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆಯ ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ಅರುಣ್ ಕುಮಾರ್, ರಾಜ್ಯ ಆಡಳಿತ ಮಂಡಳಿ ಸದಸ್ಯ ಮಧು ಪ್ರಸಾದ್, ಮಾಜಿ ಸದಸ್ಯೆ ಗಾಯತ್ರಿ ಶಿವರಾಂ, ಗಿರೀಶ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
