CHITRADURGA NEWS | 11 AUGUST 2026
ಚಿತ್ರದುರ್ಗ: 2026–27ನೇ ಸಾಲಿನ ‘ಆತ್ಮ’ ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಜಮೀನು ಹೊಂದಿರುವ, ಆಸಕ್ತ ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಹಿಂದೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದವರು, ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು, ವಿಶ್ವವಿದ್ಯಾಲಯ ಹಾಗೂ ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ನೌಕರರು, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ನಿವೃತ್ತ ತಾಂತ್ರಿಕ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ.
ಇದನ್ನೂ ಓದಿ: ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
ಅರ್ಜಿಯ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

