CHITRADURGA NEWS | 11 APRIL 2025
ಬೀಜಗಳ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇವುಗಳಲ್ಲಿ ಫೈಬರ್, ಕಬ್ಬಿಣ, ಆ್ಯಂಟಿ ಆಕ್ಸಿಡೆಂಟ್ಗಳು ಸೇರಿದಂತೆ ಹಲವು ಪೋಷಕಾಂಶಗಳು ಇರುತ್ತವೆ.
ಹಾಗಾಗಿ ಈ ಬೀಜಗಳನ್ನು ಸೇವಿಸುವುದರಿಂದ ಇವು ಕರುಳಿನ ಆರೋಗ್ಯವನ್ನು ಸುಧಾರಿಸುತ್ತವೆ. ಹೊಟ್ಟೆಯುಬ್ಬರ ಸಮಸ್ಯೆ ಕಾಡುವುದಿಲ್ಲ. ಅಲ್ಲದೇ ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒಟ್ಟಾರೆ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ಈ ಬೀಜಗಳನ್ನು ನಿಮ್ಮ ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಿ.
ಕೊತ್ತಂಬರಿ ಬೀಜದ ನೀರು :
ಇದು ಜೀರ್ಣಕ್ರಿಯೆ ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಹೊಟ್ಟೆಯಲ್ಲಿರುವ ವಿಷಕಾರಿ ಅಂಶವನ್ನು ಹೊರಹಾಕುತ್ತದೆ.
ಇದರಿಂದ ಹೊಟ್ಟೆಯಲ್ಲಿ ಅನಿಲದ ಸಮಸ್ಯೆಗಳು ಕಾಡುವುದಿಲ್ಲ. ಹಾಗೂ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
ಕಪ್ಪು ಜೀರಿಗೆ ಬೀಜದ ನೀರು:
ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಉರಿಯೂತ ಮತ್ತು ಕೀಲು ನೋವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಮಂಡಿನೋವಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಬಹಳ ಉತ್ತಮವಾಗಿದೆ.
ಫೆನ್ನೆಲ್ ಬೀಜದ ನೀರು:
ಇದು ಹೊಟ್ಟೆಯಲ್ಲಿ ಉಬ್ಬರ ಮತ್ತು ಆಮ್ಲೀಯತೆಯನ್ನು ನಿವಾರಿಸುತ್ತದೆ. ಹಾರ್ಮೋನುಗಳನ್ನು ಸಮತೋಲನದಲ್ಲಿಡುತ್ತದೆ. ಚರ್ಮವನ್ನು ಹಯಡ್ರೇಟ್ ಆಗಿಡುತ್ತದೆ ಮತ್ತು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ. ಅಲ್ಲದೇ ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ.
ಜೀರಿಗೆ ಬೀಜದ ನೀರು :
ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಮತ್ತು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕಾಯಿಲೆ ಬೀಳದಂತೆ ತಡೆಯುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರ ಮೂಲಕ ಮಧುಮೇಹ ಸಮಸ್ಯೆ ಬಾರದಂತೆ ತಡೆಯುತ್ತದೆ.
ಮೆಂತ್ಯ ಬೀಜದ ನೀರು :
ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಕೂದಲು ಮತ್ತು ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.
ಆದರೆ ಈ ಬೀಜಗಳನ್ನು ಬೇಯಿಸುವುದಕ್ಕಿಂತ ನೀರಿನಲ್ಲಿ ನೆನೆಸಿಟ್ಟು ಕುಡಿಯುವುದು ಬಹಳ ಒಳ್ಳೆಯದು. ಯಾಕೆಂದರೆ ಇದು ನಿಮ್ಮ ನೀರಿನಲ್ಲಿನ ಪೌಷ್ಠಿಕಾಂಶವನ್ನು ಹೆಚ್ಚಿಸುತ್ತದೆ.
ಹಾಗಾಗಿ ಇವುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಹಾಗೇ ಈ ಬೀಜಗಳನ್ನು ಓಟ್ಸ್ ಅಥವಾ ಸಲಾಡ್ಗಳಲ್ಲಿ ಮಿಕ್ಸ್ ಮಾಡಿ ಕೂಡ ಸೇವಿಸಬಹುದು. ಇದು ನಿಮ್ಮ ಜಲಸಂಚಯನವನ್ನು ಹೆಚ್ಚಿಸುತ್ತದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number