CHITRADURGA NEWS | 10 FEBRUARY 2026
ಚಿತ್ರದುರ್ಗ: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಕಾರ್ಯದಕ್ಷತೆ ಗುರುತಿಸಿ ಗೌರವಿಸುವ ಸಲುವಾಗಿ ನೀಡಲಾಗುವ 2026ನೇ ಸಾಲಿನ ಜಿಲ್ಲಾ ಮಟ್ಟದ ‘ಸರ್ವೋತ್ತಮ ಸೇವಾ ಪ್ರಶಸ್ತಿ’ಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ನಾಮ ನಿರ್ದೇಶನಗಳನ್ನು ಸಲ್ಲಿಸಲು ಇದೇ ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಫೆ.11 ರಿಂದ ಕಬೀರಾನಂದ ಮಠದಲ್ಲಿ ಶಿವರಾತ್ರಿ ಮಹೋತ್ಸವ | ಶ್ರೀ ಶಿವಲಿಂಗಾನಂದ ಸ್ವಾಮೀಜಿ
ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಹಾಗೂ ನೌಕರರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ಜಿಲ್ಲಾ, ರಾಜ್ಯ ಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮನಿರ್ದೇಶನಗಳನ್ನು ಫೆ.26ರೊಳಗಾಗಿ ಆನ್‍ಲೈನ್ ಜಾಲತಾಣ https://dparar.karnataka.gov.in ಅಥವಾ https://sarvothamaawards.karnataka.gov.in ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಗ್ರಾಮ ಪಂಚಾಯತಿ ಕೊನೆಯ ಸಾಮಾನ್ಯ ಸಭೆ | ಕಾಲುವೇಹಳ್ಳಿ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಭಾಷಣ
ಭೌತಿಕವಾಗಿ ಸಲ್ಲಿಸಿದ ಯಾವುದೇ ಮನವಿ ಹಾಗೂ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
