CHITRADURGA NEWS | 03 MARCH 2026
ಚಿತ್ರದುರ್ಗ: ರಾಜ್ಯ ಸರ್ಕಾರ ಪ್ರಕಟಿಸಿರುವ 56,432 ಹುದ್ದೆಗಳ ಭರ್ತಿ ಪ್ರಕ್ರಿಯೆಯಲ್ಲಿ ಶೇ. 56ರ ಮೀಸಲಾತಿಯನ್ನು ಕಡೆಗಣಿಸಿ, ಶೇ. 50ಕ್ಕೆ ಇಳಿಸಿರುವುದು ಘೋರ ಅನ್ಯಾಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಮಕ್ಕಳ ಉಚಿತ ಹೃದಯ ತಪಾಸಣೆ
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಇತ್ತೀಚಿನ ನಿರ್ಧಾರಗಳು ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿನ ಗೊಂದಲಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
2025ರ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಶೇ. 56ರ ಮೀಸಲಾತಿಗೆ ಮಧ್ಯಂತರ ತಡೆ ನೀಡಿರುವುದು ನಿಜ. ಆದರೆ, ಸರ್ಕಾರ ನ್ಯಾಯಾಲಯದಲ್ಲಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಲ್ಲಿ ಮತ್ತು ಪೂರಕ ದಾಖಲೆಗಳನ್ನು ಸಲ್ಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಜಾರ್ಖಂಡ್ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಶೇ. 50 ದಾಟಿದ್ದರೂ ಅಲ್ಲಿನ ಸರ್ಕಾರಗಳು ಅದನ್ನು ಊರ್ಜಿತಗೊಳಿಸಿವೆ. ಇಲ್ಲಿನ ಸರ್ಕಾರಕ್ಕೆ ಅಂತಹ ಬದ್ಧತೆ ಇಲ್ಲದಂತಾಗಿದೆ,” ಎಂದು ಕಿಡಿಕಾರಿದರು.
ಸರ್ಕಾರದ ಈ ಬೇಜವಾಬ್ದಾರಿ ನಡೆಯಿಂದಾಗಿ ಸುಮಾರು 4,000ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಯುವಜನರು ಉದ್ಯೋಗಾವಕಾಶದಿಂದ ವಂಚಿತರಾಗಲಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಾಯಕನಹಟ್ಟಿ ಜಾತ್ರೆ | ವಿಶೇಷ ಬಸ್‌ಗಳ ಕಾರ್ಯಾಚರಣೆ
ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಪೌರಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಾರಿಗೆ ಇಲಾಖೆ ನೌಕರರಿಗೆ ಸಂಬಳ ನೀಡಲು ಹಣವಿಲ್ಲ. ನೂರಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ.
ತನ್ನ ಆರ್ಥಿಕ ವೈಫಲ್ಯವನ್ನು ಮುಚ್ಚಿಕೊಳ್ಳಲು ಸರ್ಕಾರ ಮೀಸಲಾತಿ ಗೊಂದಲ ಸೃಷ್ಟಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಸುಗಮವಾಗಿ ನಡೆಯುತ್ತಿದ್ದ ಶೇ. 56ರ ಮೀಸಲಾತಿಯನ್ನು ಏಕಾಏಕಿ ಬದಲಿಸುವ ಮೂಲಕ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ.
ಸರ್ಕಾರ ಅಹಂಕಾರ ಬಿಟ್ಟು ತಕ್ಷಣವೇ ಸರ್ವಪಕ್ಷಗಳ ಪ್ರಮುಖರು, ಕಾನೂನು ತಜ್ಞರು ಮತ್ತು ಹೋರಾಟಗಾರರ ಸಭೆ ಕರೆದು ಚರ್ಚಿಸಬೇಕು. ರಾಜ್ಯಪಾಲರು ಕೇಳಿದ ಪ್ರಶ್ನೆಗಳಿಗೆ ಮತ್ತು ಮಸೂದೆಯ ಆಶಯಕ್ಕೆ ವಿರುದ್ಧವಾಗಿ ಸಂಪುಟ ನಿರ್ಧಾರ ಕೈಗೊಳ್ಳುವುದನ್ನು ನಿಲ್ಲಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಸಿಗಬೇಕಾದ ಸಾಂವಿಧಾನಿಕ ಮೀಸಲಾತಿಯನ್ನು ಉಳಿಸಿಕೊಳ್ಳಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು.
ಇದನ್ನೂ ಓದಿ: ದಿನ ಭವಿಷ್ಯ | ಮಾರ್ಚ್ 03 | ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
2022ರಿಂದ ಜಾರಿಯಲ್ಲಿದ್ದ ಶೇ. 17 (SC) ಮತ್ತು ಶೇ. 7 (ST) ಮೀಸಲಾತಿಯನ್ನು ಕತ್ತರಿಸುವ ಮೂಲಕ ಈ ಸರ್ಕಾರ ದಲಿತ ಮತ್ತು ಹಿಂದುಳಿದ ವರ್ಗಗಳ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಅನಿಲ್ ಕುಮಾರ್ ಮಾತನಾಡಿ, ಬಸವರಾಜ ಬೊಮ್ಮಾಯಿ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಶೇ.3 ರಿಂದ 7 ಕ್ಕೆ ಹೆಚ್ಚಿಸಿದರು. ಬೇರೆ ಬೇರೆ ರಾಜ್ಯಗಳಲ್ಲಿ ಶೇ.50ರ ಗಡಿದಾಟಿದೆ. ಆದರೆ, ಇಲ್ಲಿನ ನ್ಯಾಯಾಲಯದಲ್ಲಿ ಸರಿಯಾಗಿ ದಾಖಲಾತಿ ಸಲ್ಲಿಸದೆ ಪರಿಶಿಷ್ಟ ಜಾತಿಗಳಿಗೆ ಮೋಸ ಮಾಡಲು ಮುಂದಾಗಿದ್ದಾರೆ ಎಂದರು.
ಮುಖಂಡರಾದ ಪಾಪೇಶ ನಾಯಕ ಮಾತನಾಡಿ, ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಮೀಸಲಾತಿಗಾಗಿ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಿ 250 ದಿನ ಸತ್ಯಾಗ್ರಹ ನಡೆಸಿದ್ದಾರೆ. ಈ ವೇಳೆ ಅಂದಿನ ಬಿಜೆಪಿ ನೇತೃತ್ವದ ಸರ್ಕಾರ ಜೇನುಗೂಡಿಗೆ ಕೈ ಹಾಕಿ ಮೀಸಲಾತಿ ಜಾರಿ ಮಾಡಿದೆ. ಈಗ ಮೀಸಲಾತಿಯಲ್ಲಿ ಅನ್ಯಾಯ ಮಾಡಿ ಹುದ್ದೆ ಭರ್ತಿ ಮಾಡಿದರೆ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಲಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಅರವಿಂದ ಕೇಜ್ರಿವಾಲ್ ಬಿಡುಗಡೆ | ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಬಾಳೆಕಾಯಿ ರಾಮದಾಸ್, ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜು, ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ, ಜಿಲ್ಲಾ ಕಾರ್ಯದರ್ಶಿ ಪಾಲಯ್ಯ, ವಕ್ತಾರ ನಾಗರಾಜ್ ಬೇದ್ರೆ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
