
CHITRADURGA NEWS | 10 FEBRUARY 2026
ಚಿತ್ರದುರ್ಗ: ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಫಲಾನುಭವಿಗಳನ್ನು ಗುರಿಯಾಗಿಸಿಕೊಂಡು ಪೋನ್ ಮೂಲಕ ಕರೆ ಮಾಡಿ ಓಟಿಪಿ ಪಡೆದು ವಂಚಿಸುವ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಮೊಬೈಲ್ ಸಂಖ್ಯೆ 9153257976 ಮೂಲಕ ತಾಲ್ಲೂಕಿನ ಕಡಬನಹಳ್ಳಿ ಗ್ರಾಮದ ಅಂಗನವಾಡಿ ವ್ಯಾಪ್ತಿಯ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಕರೆ ಮಾಡಿ, ಅಂಗನವಾಡಿ ಕಾರ್ಯಕರ್ತೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಎಂದು ಪರಿಚಯಿಸಿಕೊಂಡು, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಹಣ ಜಮಾ ಮಾಡುವ ನೆಪದಲ್ಲಿ ಫಲಾನುಭವಿಗಳಿಂದ ಒಟಿಪಿ ಪಡೆದು, ಅವರ ಬ್ಯಾಂಕ್ ಖಾತೆಗಳಿಂದ ಹಣವನ್ನು ದೋಚುತ್ತಿದ್ದಾರೆ.
ಸೋಮವಾರ ಫಲಾನುಭವಿಯೊಬ್ಬರ ಖಾತೆಯಿಂದ ಸುಮಾರು 50,000 ರೂ. ಗಳಿಗೂ ಹೆಚ್ಚು ಹಣವನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿಕೊಳ್ಳಲಾಗಿದೆ.
9153257976 ಮೊಬೈಲ್ ಸಂಖ್ಯೆ ಅಥವಾ ಸಂಶಯಾಸ್ಪದ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ಬ್ಯಾಂಕ್ ವಿವರ ಅಥವಾ ಒಟಿಪಿ ವಿವರ ಕೇಳಿದರೆ ಯಾರು ಕೂಡ ಹಂಚಿಕೊಳ್ಳಬಾರದು.
ಇದನ್ನೂ ಓದಿ: ಫೆ.11 ರಿಂದ ಕಬೀರಾನಂದ ಮಠದಲ್ಲಿ ಶಿವರಾತ್ರಿ ಮಹೋತ್ಸವ | ಶ್ರೀ ಶಿವಲಿಂಗಾನಂದ ಸ್ವಾಮೀಜಿ
ಒಂದು ವೇಳೆ ಇಂತಹ ಕರೆಗಳು ಬಂದರೆ ಸಾರ್ವಜನಿಕರು ತಕ್ಷಣ ಜಾಗೃತರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಮಾಹಿತಿ ನೀಡುವಂತೆ ಉಪನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

