Connect with us

    ಮನಮೋಹನ್ ಸಿಂಗ್ ಅಗಲಿಕೆಗೆ ಬಿ.ಜಿ.ಗೋವಿಂದಪ್ಪ ಸಂತಾಪ

    ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ

    ಹೊಸದುರ್ಗ

    ಮನಮೋಹನ್ ಸಿಂಗ್ ಅಗಲಿಕೆಗೆ ಬಿ.ಜಿ.ಗೋವಿಂದಪ್ಪ ಸಂತಾಪ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 27 DECEMBER 2024

    ಹೊಸದುರ್ಗ: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು ಸಂತಾಪ ಸೂಚಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

    ಮನಮೋಹನ್‌ ಸಿಂಗ್‌ ನಿಧನರಾದ ಸುದ್ದಿ ಕೇಳಿ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ಹಾಗೂ ಭಾರತ ದೇಶ ಕಂಡ ಪ್ರಮುಖ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ನಿಧನದ ಸುದ್ದಿಯೂ ದೇಶಕ್ಕೆ ತುಂಬಲಾರದ ನಷ್ಟ ಉಂಟುಮಾಡಿದೆ.

    ಡಾ.ಮನಮೋಹನ್ ಸಿಂಗ್ ರವರು ಅಂತರಾಷ್ಟ್ರೀಯ ಮೇಲ್ವಿಚಾರಣಾ ನಿಧಿ ಸಲಹೆಗಾರರಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿ ಭಾರತ ದೇಶಕ್ಕೆ ಕೀರ್ತಿ ತಂದುಕೊಟ್ಟಿದ್ದು, ಭಾರತದ ಸರ್ವತೋಮುಖ ಅಭಿವೃದ್ಧಿಗೆ ಕಾರಣಿಭೂತರಾಗಿದ್ದರು ಎಂದು ಹೇಳಿದ್ದಾರೆ.

    ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಮಕ್ಕಳ ಹಕ್ಕು ಕಾಯ್ದೆ ಸೇರಿ ಹಲವಾರು ಮಹತ್ವದ ಕಾಯ್ದೆಗಳು ಜಾರಿಗೆ ಬಂದಿದ್ದವು. ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಆಧಾರ್) ಉಪಕ್ರಮಗಳು ಅವರ ಸರ್ಕಾರದ ಅವಧಿಯಲ್ಲೇ ಜಾರಿಗೆ ಬಂದಿದ್ದವು.

    ಕ್ಲಿಕ್ ಮಾಡಿ ಓದಿ: ವಾಣಿವಿಲಾಸ ಸಾಗರ ಜಲಾಶಯ ಮಟ್ಟ 129.40 ಅಡಿ

    ಮನಮೋಹನ್ ಸಿಂಗ್ ಅವರ ವಿದೇಶಾಂಗ ನೀತಿಯಿಂದ ಅಮೆರಿಕ, ಚೀನಾ, ಜಪಾನ್‌ನಂತಹ ದೇಶಗಳೊಂದಿಗೆ ಭಾರತದ ಸಂಬಂಧ ಬಲಗೊಂಡಿತ್ತು. ಭಾರತ-ಅಮೆರಿಕ ನಾಗರಿಕ ಪರಮಾಣು ಒಪ್ಪಂದದ ಮಾತುಕತೆಯಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ ಮತ್ತು ಅಂತಾರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸಲು ಅವರು ಅನೇಕ ಕ್ರಮಗಳನ್ನು ಕೈಗೊಂಡಿದ್ದರು.

    ಮನಮೋಹನ್‌ಸಿಂಗ್‌ ಭಾರತದ ರಿಸರ್ವ್ ಬ್ಯಾಂಕ್ ಗವರ್ನರ್, ಯೋಜನಾ ಆಯೋಗದ ಉಪಾಧ್ಯಕ್ಷ, ಆರ್ಥಿಕ ವ್ಯವಹಾರಗಳ ಸಮಿತಿಯ ಅಧ್ಯಕ್ಷ, ಪ್ರಧಾನಿಗೆ ಆರ್ಥಿಕ ಸಲಹೆಗಾರ ಇತ್ಯಾದಿ ಆಗಿ ಸೇವೆ ಮಾಡಿದ್ದರು.

    ಕ್ಲಿಕ್ ಮಾಡಿ ಓದಿ: ನಾಯಿ ಬಾಯಲ್ಲಿ ನವಜಾತ ಶಿಶು | ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

    ಡಾ.ಮನಮೋಹನ್ ಸಿಂಗ್ ಅವರು ಮೌನ ಕ್ರಾಂತಿಯ ಮೂಲಕ ಆರ್ಥಿಕ ತಜ್ಞರಾಗಿ ಆಡಳಿತ ನಡೆಸಿರುವುದು ವಿಶ್ವಕ್ಕೆ ಮಾದರಿಯಾಗಿದೆ. ಅವರ ಬದುಕು, ಸೇವೆ ಮತ್ತು ಆಡಳಿತ ಇವುಗಳು ಇಂದಿನ ಪ್ರಜಾಪ್ರಭುತ್ವ ಸರ್ಕಾರಗಳಿಗೆ ಮಾದರಿಯಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಹೊಸದುರ್ಗ

    To Top