CHITRADURGA NEWS | 22 JULY 2026
ಚಿತ್ರದುರ್ಗ: ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗುತ್ತಿದೆ ಎಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಆಪಾದಿಸಿದರು.
ಇದನ್ನೂ ಓದಿ: ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಎತ್ತಿನಹೊಳೆ ಯೋಜನೆಗೆ 16700 ಕೋಟಿ ರೂ.ಗಳನ್ನು ಕೊಟ್ಟಿದ್ದಾರೆ. ಭದ್ರಾಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ತಾರತಮ್ಯವೆಸಗಿರುವುದು ಯಾವ ನ್ಯಾಯ?
ಅನುದಾನ ಬಿಡುಗಡೆಯಾಗಿದ್ದರೆ ಇಷ್ಟೊತ್ತಿಗೆ ಹಿರಿಯೂರಿನ ವಾಣಿವಿಲಾಸಸಾಗರಕ್ಕೆ 60 ರಿಂದ 70 ಟಿಎಂಸಿ. ನೀರು ಹರಿಯುತ್ತಿತ್ತು. ಕೇಂದ್ರ ಸರ್ಕಾರ ಯೋಜನೆಗೆ 5300 ಕೋಟಿ ರೂ.ಗಳನ್ನು ಘೋಷಿಸಿ ನಾಲ್ಕು ವರ್ಷಗಳಾಗಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡುವುದರ ಜೊತೆಗೆ ವಿವಿಧ ಇಲಾಖೆಗಳಿಂದ ನಿರಪೇಕ್ಷಣಾ ಪತ್ರ ಕೊಡಿಸುವುದು ಮುಖ್ಯ ಎಂದು ಒತ್ತಾಯಿಸಿದರು.
ಎಷ್ಟು ಮರಗಳನ್ನು ಕಡಿಯುತ್ತಾರೋ ಅಷ್ಟು ಮರಗಳನ್ನು ಬೆಳೆಸಲು ಅರಣ್ಯ ಮತ್ತು ಪರಿಸರ ಇಲಾಖೆಗೆ ಸರ್ಕಾರ ಹಣ ನೀಡಬೇಕು. 47 ಲಕ್ಷ ಕೋಟಿ ರೂ.ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ತಕ್ಷಣವೇ ಮೂರು ಸಾವಿರ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಬೇಕು. ರಾಜ್ಯದ ಸಂಸದರುಗಳು ಸುಳ್ಳು ಹೇಳುವುದನ್ನು ಬಿಟ್ಟು ಭದ್ರಾಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವ ಜವಾಬ್ದಾರಿ ಹೊರಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ
ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಜು.25 ರಂದು ಚಿತ್ರದುರ್ಗಕ್ಕೆ ಆಗಮಿಸುವ ಮೊದಲು ಜಿಲ್ಲೆಗೆ ಯಾವಾಗ ನೀರು ಹರಿಸುತ್ತೇವೆನ್ನುವುದನ್ನು ಸ್ಪಷ್ಟಪಡಿಸಬೇಕು. ಜಿಲ್ಲೆ ಈಗಾಗಲೆ ಬರಗಾಲಕ್ಕೆ ತುತ್ತಾಗಿದ್ದು, ಜನ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದಾರೆ. ಕೂಡಲೆ ವಿಶೇಷ ಪ್ಯಾಕೇಜ್ ನೀಡಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಮಾತನಾಡುತ್ತ ಕೇಂದ್ರ ರಾಜ್ಯ ಸರ್ಕಾರಗಳು ಒಬ್ಬರ ಮೇಲೊಬ್ಬರು ಹೇಳಿಕೊಂಡು ಕಾಲಹರಣ ಮಾಡಬಾರದು. ರೈತರ ತೋಟಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು, ನೀರಿಲ್ಲದಂತಾಗಿದೆ. ಬಡ ಜನರು ಗುಳೆ ಹೋಗುತ್ತಿದ್ದಾರೆ. ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಘೋಷಿಸಿ ಮೋಡ ಬಿತ್ತನೆ ಮಾಡಬೇಕೆಂದರು.
ಇದನ್ನೂ ಓದಿ: ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಹಮಾಲರ ಸಂಘದ ಅಧ್ಯಕ್ಷ ಬಸವರಾಜ್, ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಮಲ್ಲಾಪುರದ ತಿಪ್ಪೇಸ್ವಾಮಿ, ಲಕ್ಷ್ಮಿ, ಈ.ಸತ್ಯಕೀರ್ತಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

