By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
    5 days ago
    ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
    6 days ago
    ಅರ್ಜಿ ಅಹ್ವಾನ
    ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    7 days ago
    ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
    7 days ago
    Municipal Council
    ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
    7 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    1 week ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    4 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 month ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    5 days ago
    today bhavishya
    ದಿನ ಭವಿಷ್ಯ | ನವೆಂಬರ್ 02 | ಶುಭವಾರ್ತೆ, ಹೊಸ ಉದ್ಯೋಗಾವಕಾಶಗಳು
    6 days ago
    today bhavishya
    ದಿನ ಭವಿಷ್ಯ | ನವೆಂಬರ್ 01 | ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ, ವಸ್ತ್ರಾಭರಣ ಖರೀಧಿ
    7 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    2 weeks ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    1 week ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    1 week ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 week ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 weeks ago
Reading: ಭದ್ರಾ ನೀರು ಹರಿವಿಗೆ ವೇಗ | ನವೆಂಬರ್ ಅಂತ್ಯಕ್ಕೆ 17.5 ಟಿಎಂಸಿ ಲಿಫ್ಟ್ ಗುರಿ | ಚಲುವರಾಯಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭದ್ರಾ ನೀರು ಹರಿವಿಗೆ ವೇಗ | ನವೆಂಬರ್ ಅಂತ್ಯಕ್ಕೆ 17.5 ಟಿಎಂಸಿ ಲಿಫ್ಟ್ ಗುರಿ | ಚಲುವರಾಯಸ್ವಾಮಿ

News Desk Chitradurga News
Last updated: 20 September 2026 20:03
News Desk Chitradurga News
2 months ago
Share
Ganga Puja was performed and *Bagina* (ritual offering) was offered to the Bhadra waters near the village pond in Adiralu
ಆದಿರಾಳು ಗ್ರಾಮದ ಗೋಕಟ್ಟೆ ಬಳಿ ಭದ್ರಾ ನೀರಿಗೆ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಣೆ
SHARE

CHITRADURGA NEWS | 20 SEPTEMBER 2026

ಚಿತ್ರದುರ್ಗ: ಮುಂಬರುವ ನವೆಂಬರ್ ತಿಂಗಳ ಅಂತ್ಯದ ವೇಳೆಗೆ 17.5 ಟಿಎಂಸಿ ನೀರನ್ನು ತುಂಗಾ ನದಿಯಿಂದ ಎತ್ತಿ(ಲಿಫ್ಟ್ ಮಾಡಿ), ಭದ್ರಾ ಮೇಲ್ದಂಡೆ ಯೋಜನೆಗೆ ಶಾಶ್ವತ ಪರಿಹಾರ ಒದಗಿಸುವ ಸಂಕಲ್ಪವನ್ನು ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು.

ಇದನ್ನೂ ಓದಿ: ತಾಲ್ಲೂಕು ಮಟ್ಟದ ಕ್ರೀಡಾಕೂಟ | ಸಿರಿಗೆರೆ ಮೈಸೂರು ಬಸವಯ್ಯ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹಿರಿಯೂರು ತಾಲ್ಲೂಕಿನ ಆದಿರಾಳು, ಕೋವೇರಹಟ್ಟಿ ಮೊದಲಾದ ಕಡೆ ಭಾನುವಾರ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ಪ್ರಾಯೋಗಿಕವಾಗಿ ನೀರು ಹರಿಯುತ್ತಿರುವ ಕೆರೆಗಳನ್ನು ವೀಕ್ಷಣೆ ಮಾಡಿದ ಸಚಿವರು, ಆದಿರಾಳು ಗ್ರಾಮದ ಗೋಕಟ್ಟೆ ಬಳಿ ಭದ್ರಾ ನೀರಿಗೆ ಗಂಗಾಪೂಜೆ ನೆರವೇರಿ, ಬಾಗಿನ ಅರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ತುಂಗಾನದಿಯಿಂದ ನೀರು ಎತ್ತಲು ತೊಡುಕಾಗಿದ್ದ, ಅರಣ್ಯ ಇಲಾಖೆಯ ಅನುಮತಿ, ವಿದ್ಯುತ್ ಸಮಸ್ಯೆಗೆ ಪರಿಹಾರ ಒದಗಿಸಲಾಗಿದೆ. ಸಾಕಷ್ಟು ಕಷ್ಟಕರವಾದ ಸನ್ನಿವೇಶಗಳು ಮತ್ತು ಆರ್ಥಿಕ ಸವಾಲುಗಳ ನಡುವೆಯೂ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಗತಗೊಳಿಸಲು ಬದ್ಧವಾಗಿದೆ. ಗುತ್ತಿಗೆದಾರರ ಬಾಕಿ ಪಾವತಿಸಿದ್ದು, ಕಾಮಗಾರಿಗೆ ವೇಗ ದೊರಕಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ವತಃ ಮುಂದೆ ನಿಂತು ಯೋಜನೆಗೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆ ಬಗೆಹರಿಸಿದ್ದಾರೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸವಿದೆ. 

ತುಂಗಾದಿಂದ 17.5 ಟಿಎಂಸಿ ಅಡಿ ನೀರು ಬಂದರೆ ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ ಜಿಲ್ಲೆಗಳಿಗೆ ನೀರು ಹರಿಸಲು ತೊಂದರೆ ಆಗದು. ಯೋಜನೆ ಎಸ್.ನಿಜಲಿಂಗಪ್ಪನವರ ಕನಸು. ಸಾಕಷ್ಟು ಜನರ ಹೋರಾಟದ ಫಲವಾಗಿ ಯೋಜನೆ ಪ್ರಮುಖ ಘಟ್ಟಕ್ಕೆ ತಲುಪಿದೆ. ನಮ್ಮ ಅವಧಿಯಲ್ಲಿಯೇ ಮೇಕೆದಾಟು, ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ. ಭದ್ರಾದಿಂದ ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳಿಗೆ, ಎತ್ತಿನಹೊಳೆಯಿಂದ ಕೋಲಾರಕ್ಕೆ ನೀರು ಕೊಡುತ್ತೇವೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಸವಿತಾ ಸಮಾಜ ಅಭಿವೃದ್ಧಿ ನಿಗಮ | ಸಾಲ–ಸೌಲಭ್ಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ರೈತರ ಸಹಕಾರಕ್ಕೆ ಮನವಿ:

ಬೇರೆ ಜಿಲ್ಲೆಯ ರೈತರ ವಿರೋಧದ ನಡುವೆಯು ಭದ್ರಾದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ಅಡಿ ನೀರನ್ನು ಪ್ರಾಯೋಗಿಕವಾಗಿ ಹರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಸರ್ಕಾರ ತನ್ನ ‘100 ದಿನಗಳ ಕಾರ್ಯಕ್ರಮ’ ದಲ್ಲಿ ಎತ್ತಿನಹೊಳೆ ಹಾಗೂ ಭದ್ರಾ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಯೋಜನೆಯ ಲಾಭ ಹಂತ ಹಂತವಾಗಿ ಎಲ್ಲರಿಗೂ ಸಿಗಲಿದೆ. 

ಕಷ್ಟಪಟ್ಟು ಅನುಷ್ಠಾನಗೊಳಿಸುತ್ತಿರುವ ಈ ಯೋಜನೆಯ ಕಾಮಗಾರಿಗಳ ನಡುವೆ ಗಲಾಟೆ, ಜಗಳ ಅಥವಾ ಗೊಂದಲಗಳನ್ನು ಮಾಡಿಕೊಳ್ಳಬಾರದು. ಯಾವುದೇ ಕಾರಣಕ್ಕೂ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಶ್ರಮವಹಿಸಿ ಕಾರ್ಯನಿರ್ವಹಿಸುವಾಗ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಸಾರ್ವಜನಿಕರಲ್ಲಿ ಮತ್ತು ರೈತರಲ್ಲಿ ತಾಳ್ಮೆಯಿಂದ ಸಹಕರಿಸುವಂತೆ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಹಿರಿಯೂರಿಗೆ ಕ್ಷೇತ್ರಕ್ಕೆ ರೂ. 500 ಕೋಟಿ:

ಹಿರಿಯೂರು ತಾಲ್ಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿಗಳು 500 ಕೋಟಿ ಅನುದಾನ ಬಿಡುಗಡೆ ಮಾಡಲು ಒಪ್ಪಿದ್ದಾರೆ. ಸೆ.24ರ ಕಾರ್ಯಕ್ರಮದ ತರುವಾಯ ಹಿರಿಯೂರಿನಲ್ಲಿ ಬೃಹತ್ ಸಾರ್ವಜನಿಕ ಸಮಾರಂಭ ಏರ್ಪಡಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಸ್ತುತ ಗುರುತ್ವಾಕರ್ಷಣೆಯ ಬಲದಿಂದ ನೀರು ಸರಾಗವಾಗಿ ಹರಿಯುವ ಮೊದಲ ಹಂತದ ಕೆರೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉಳಿದ ಕೆರೆಗಳಿಗೂ ಕಾಲುವೆಗಳ ಮೂಲಕ ನೀರು ತಲುಪಿಸಲು ಯೋಜನೆ ರೂಪಿಸಲಾಗುವುದು. ದಿವಂಗತ ಸಚಿವ ಡಿ.ಸುಧಾಕರ್ ಆಶಯದಂತೆ ಹಿರಿಯೂರು ತಾಲ್ಲೂಕನ್ನು ಅಭಿವದ್ಧಿ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಬೀದಿ ನಾಯಿಗಳಿಗೆ ಉಚಿತ ಆಹಾರ ಒದಗಿಸಲು ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಭದ್ರೆ ಕಂಡು ಭಾವುಕರಾದ ಮಹಿಳೆಯರು:

ಸ್ಥಳೀಯ ಮಹಿಳೆಯರು ಬಾಗಿನ ಸಮರ್ಪಣೆ ವೇಳೆ ಆನಂದಭಾಷ್ಪ ಸುರಿಸಿ, ತಮಗೆ ಒಡವೆ-ವಸ್ತ್ರಗಳಿಗಿಂತ ಈ ಜೀವಜಲವೇ ದೊಡ್ಡ ವರವೆಂದು ಹರಸಿದಾಗ ಸಚಿವರು ಭಾವುಕರಾಗಿ ಕೆಲಕಾಲ ಮಾತು ಮರೆತರು. ನಿಮ್ಮ ಈ ಖುಷಿ ನೋಡಿ ನನಗೆ ಅದಕ್ಕಿಂತ ಹೆಚ್ಚಿನ ಸಂತೋಷವಾಗಿದೆ. ಈ ಖುಷಿಯನ್ನು ಎಲ್ಲರ ಮೊಗದಲ್ಲಿ ನೋಡುವ ಹಂಬಲ ನನ್ನದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಭಾವುಕರಾದರು.

ರೈತರನ್ನು ಸಂತೈಸಿ, ಕೆರೆಗಳಿಗೆ ನೀರು ನೀಡಲು ಸೂಚನೆ:

ಮಾರ್ಗಮಧ್ಯೆ ಎಲ್ಲಪುರನಹಳ್ಳಿ ಹಾಗೂ ಐಮಂಗಲ ಭಾಗದ ಗ್ರಾಮಸ್ಥರು ತಮ್ಮೂರಿನ ಕೆರೆಗಳಿಗೂ ತುರ್ತಾಗಿ ನೀರು ಹರಿಸಬೇಕೆಂದು ಸಚಿವ ಎನ್.ಚಲುವರಾಯಸ್ವಾಮಿ ಅವರ ವಾಹನ ತಡೆದು ಬೇಡಿಕೆ ಇಟ್ಟರು.

ಗ್ರಾಮಸ್ಥರನ್ನು ಆತ್ಮೀಯವಾಗಿ ಸಮಾಧಾನಪಡಿಸಿದ ಸಚಿವರು, ಕೆರೆಗಳೇ ಈ ನೆಲದ ರೈತರ ನಿಜವಾದ ಜೀವಾಳವಾಗಿದ್ದು, ಯಾವುದೇ ಆರ್ಥಿಕ ಅಥವಾ ತಾಂತ್ರಿಕ ಹೊಡೆತ ಎದುರಾದರೂ ಲೆಕ್ಕಿಸದೆ ಪ್ರತಿಯೊಂದು ಕೆರೆಗೂ ನೀರು ಮುಟ್ಟಿಸುವ ಹೊಣೆಗಾರಿಕೆಯನ್ನು ಸರ್ಕಾರ ನಿಭಾಯಿಸಲಿದೆ ಎಂಬ ಭರವಸೆ ನೀಡಿದರು.

13 ದಿನಕ್ಕೆ ಕೇವಲ 0.6 ಟಿಎಂಸಿ:

ಈ ವೇಳೆ ಮಾತನಾಡಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಭದ್ರಾ ನೀರು ಹರಿಸಲು ಆರಂಭಿಸಿ 13 ದಿನಗಳಾಗಿದ್ದು, ಕೇವಲ 0.6 ಟಿಎಂಸಿ ಅಡಿ ನೀರು ಹರಿದು ಬಂದಿದೆ. ಇನ್ನೂ 2.4 ಟಿಎಂಸಿ ಅಡಿ ನೀರು ಬರಬೇಕಿದೆ. ರೈತರು ಆತಂಕ ಪಡುವುದು ಬೇಡ. ಹಿರಿಯೂರು ತಾಲ್ಲೂಕಿನ 32 ಕೆರೆಗಳಿಗೆ ನೀರು ಹರಿಸಲಾಗುತ್ತದೆ. 

ಇದನ್ನೂ ಓದಿ: ವಿ.ವಿ.ಸಾಗರದಿಂದ ವೇದಾವತಿಗೆ 0.25 ಟಿಎಂಸಿ ನೀರು | ಮುನ್ನೆಚ್ಚರಿಕೆ ಸೂಚನೆ

ಭದ್ರಾ ಮೇಲ್ದಂಡೆ ಕಾಮಗಾರಿಗೆ ಇನ್ನೂ ರೂ.4,600 ಕೋಟಿ ಹಣ ಬೇಕಿದೆ. ರೂ.21,500 ಕೋಟಿ ಅಂದಾಜು ವೆಚ್ಚದ ಕಾಮಗಾರಿಯಲ್ಲಿ ರೂ.12,500 ಕೋಟಿ ಕೆಲಸ ಪೂರ್ಣಗೊಂಡಿದೆ. ರೈತರು ತಾಳ್ಮೆ ಕಳೆದುಕೊಂಡು ನಾಲೆ ಒಡೆಯುವಂತಹ ಕೆಲಸಕ್ಕೆ ಮುಂದಾಗಿರುವುದು ಬೇಸರ ತಂದಿದೆ. ಸರ್ಕಾರ ನಿರ್ಮಿಸಿರುವ ಆಸ್ತಿಗಳನ್ನು ವಿವೇಚನ ರಹಿತವಾಗಿ ಹಾಳು ಮಾಡುವುದು ತಪ್ಪು, ಮುಂದೆ ಯಾರಾದರು ಇಂತಹ ಕಿಡಿಗೇಡಿ ಕೆಲಸಕ್ಕೆ ಕೈ ಹಾಕಿದರೆ, ಮುಲಾಜು ತೋರದೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಚಿವ ಟಿ.ರಘುಮೂರ್ತಿ ನೀಡಿದರು.

ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್.ಸಿ.ರಮೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಲ್ಲಾಧಿಕಾರಿ ಎಸ್.ರಮ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ರವಿಶಂಕರ್, ಅಧೀಕ್ಷಕ ಇಂಜಿನಿಯರ್ ಹರೀಶ್, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್, ಮುಖಂಡ ಸುಹಾಸ್ ಸುಧಾಕರ್ ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhadraChaluvarayaswamyChitradurgaChitradurga newsTunga Riverಚಲುವರಾಯಸ್ವಾಮಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತುಂಗಾ ನದಿಭದ್ರಾ
Share This Article
Facebook Email Print
Previous Article ತಾಲ್ಲೂಕು ಮಟ್ಟದ ಕ್ರೀಡಾಕೂಟ | ಸಿರಿಗೆರೆ ಮೈಸೂರು ಬಸವಯ್ಯ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
Next Article Inspection of preparations for the mega event to be held at the grounds adjacent to the Madara Channayya Gurupeetha ಭದ್ರಾ ಜಲ ಹರಿವಿನ ಐತಿಹಾಸಿಕ ಸಂಭ್ರಮ | ಸೆ.24ರಂದು ಸಿಎಂ ಶಿವಕುಮಾರ್‌ರಿಂದ ಗಂಗಾಪೂಜೆ | ಸಚಿವ ಚಲುವರಾಯಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
Dina Bhavishya
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up