
CHITRADURGA NEWS | 23 AUGUST 2025
ಹೊಳಲ್ಕೆರೆ: ಮೂರು ತಿಂಗಳೊಳಗೆ ಭದ್ರಾ ಜಲಾಶಯದಿಂದ ತಾಲ್ಲೂಕಿನಲ್ಲಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ಗಣೇಶ ಹಬ್ಬ | ಶಾಂತಿ, ಸೌಹಾರ್ದತೆಯಿಂದ ಆಚರಿಸಿ | ಡಿಸಿ ವೆಂಕಟೇಶ್
ಕಂಬದದೇವರಹಟ್ಟಿ ಗ್ರಾಮದಲ್ಲಿ 1.45 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕೆರೆಯನ್ನು ಶನಿವಾರ ಲೋಕಾರ್ಪಣೆಗೊಳಿಸಿ ನಂತರ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ಮಕ್ಕಳು ಶಾಲಾ-ಕಾಲೇಜಿಗೆ ಹೋಗಲು ಗ್ರಾಮಸ್ಥರು ಆಸ್ಪತ್ರೆ ಮತ್ತಿತರ ಕಡೆ ಸಂಚರಿಸುವಾಗ ಯಾವುದೇ ತೊಂದರೆಯಾಗಬಾರದೆಂದು ಕೆರೆ ಮಧ್ಯದಲ್ಲಿ ರಸ್ತೆ ಮಾಡಿಸಿದ್ದೇನೆ.
ಅತ್ಯುತ್ತಮವಾದ ಶಾಲಾ-ಕಾಲೇಜು ಕಟ್ಟಿಸಿ ಎಲ್ಲಾ ಕಡೆ ಸಿ.ಸಿ.ರಸ್ತೆಗಳ ನಿರ್ಮಾಣವಾಗಿದೆ. ಹತ್ತುವರೆ ಕೋಟಿ ರೂ.ವೆಚ್ಚದಲ್ಲಿ ಚಿಕ್ಕ ಡ್ಯಾಂ ಕಟ್ಟಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯುವ ಕೆಲಸ ಮಾಡಿದ್ದೇನೆ. ಹರಿಶಿನಘಟ್ಟದಿಂದ ನಿಮ್ಮ ಊರು ಪಕ್ಕದಲ್ಲಿಯೂ ಡ್ಯಾಂ ಕಟ್ಟಿಸಿದ್ದೇನೆ. ಇದರಿಂದ ಅಕ್ಕಪಕ್ಕದ ಬೋರ್‍ಗಳಲ್ಲಿ ನೀರಿನ ಮಟ್ಟ ಹೆಚ್ಚಲಿದೆ ಎಂದು ಹೇಳಿದರು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಇ.ಡಿ.ವಶಕ್ಕೆ
ಈ ಸಂದರ್ಭದಲ್ಲಿ ಬಸವರಾಜ್ ಯಾದವ್, ದಾಸಯ್ಯ, ರಾಜಣ್ಣ, ಮಾರುತೇಶ್, ಕಮಲಾಕ್ಷ, ಸಾರಿಕಾ, ಹರೀಶ್, ಗಂಗಾಧರಪ್ಪ, ಮಲ್ಲಿಕಾರ್ಜುನ್ ಹಾಗೂ ಗ್ರಾಮದ ಪ್ರಮುಖರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
