CHITRADURGA NEWS | 16 MAY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜನತೆಗೆ ಜೀವನಾಡಿ ಆಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಶೀಘ್ರವೇ ಮುಗಿಸಿ ಕಾಲುವೆಯ ಮುಖಾಂತರ ನೀರನ್ನು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ತಿಳಿಸಿದರು.
ಇದನ್ನೂ ಓದಿ: ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ
ಕುಂಚಿಗನಾಳ್ ಗ್ರಾಮದ ಬಳಿಯ ಹಳೆ ರಾಷ್ಟ್ರೀಯ ಹೆದ್ದಾರಿ-4ರ ಬಳಿ ಹಾದು ಹೋಗಿರುವಂತೆ ಭದ್ರಾ ಮೇಲ್ದಂಡೆಯ ಕಾಲುವೆಯ ಕಾಮಗಾರಿಯನ್ನ ಜಂಟಿ ಅಧಿಕಾರಿಗಳೊಂದಿಗೆ ವೀಕ್ಷಣೆ ನಡೆಸಿ ಮಾತನಾಡಿದರು,
ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಕನಸಾಗಿರುವಂತಹ ಭದ್ರಾ ಮೇಲ್ದಂಡೆ ಯೋಜನೆ ಇನ್ನೇನು ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಂಡು ರೈತರಿಗೆ ಅನುಕೂಲವಾಗಲಿದೆ, ಇದರ ಅನ್ವಯವಾಗಿ ಭದ್ರಾ ಮೇಲ್ದಾಂಡೆ ಯೋಜನೆಯ ಅಧಿಕಾರಿಗಳು ಜೊತೆ ಸಮಾಲೋಚನೆಯನ್ನು ನಡೆಸಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ನಡೆಸಬೇಕು ಶೀಘ್ರವೇ ಭದ್ರಾ ನೀರನ ಕೆರೆಗಳಿಗೆ ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ ಜಿಲ್ಲೆಯ ರೈತಾಪಿ ಸಮುದಾಯಕ್ಕೆ ಸಾಕಷ್ಟು ಅನುಕೂಲವಾಗಲಿದೆ ಈಗಾಗಲೇ 47,000 ಎಕರೆ ಪ್ರದೇಶಕ್ಕೆ ಡ್ರಿಪ್ಪಿಂಗ್ ವ್ಯವಸ್ಥೆಯನ್ನು ಈ ಯೋಜನೆಯ ಮೂಲಕ ಕಲ್ಪಿಸಲಾಗಿದೆ, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 19 ಕೆರೆಗಳಿಗೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ, ಇದರ ಜೊತೆಗೆ ಇನ್ನೂ 8 ಕೆರೆಗಳನ್ನ ಭದ್ರಾ ಮೇಲ್ದಂಡೆ ಯೋಜನೆಗೆ ಸೇರ್ಪಡೆ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಮತ್ತು ಉಪ ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರದ ಮುಖೇನ ತಿಳಿಸಲಾಗಿತ್ತು ಎಂದು ತಿಳಿಸಿದರು.
ಇದನ್ನೂ ಓದಿ: ಕೈಮಗ್ಗ ನೇಕಾರರಿಗೆ ರಾಜ್ಯಮಟ್ಟದ ಪ್ರಶಸ್ತಿ | ಅರ್ಜಿ ಸಲ್ಲಿಸಲು ಮೇ.30 ಕೊನೆದಿನ
ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ, ಕಾಟೀಹಳ್ಳಿ, ಸಿದ್ದಾಪುರ, ಮಾನಂಗಿ, ಹುಲ್ಲೂರು, ತಿಮ್ಮಣ್ಣನಾಯಕನ ಕೆರೆ, ನಂದೀಪುರ ಹಾಗೂ ಅನ್ನೇಹಾಳ್ ಗ್ರಾಮಗಳ ಕೆರೆಗಳಿಗೆ ಭದ್ರಾ ನೀರು ತುಂಬಿಸುವ ಕಾರ್ಯಕ್ಕೆ ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಂದ ಅನುಮೋದನೆ ದೊರಕಿದೆ.
ಭದ್ರಾ ಮೇಲ್ದಂಡೆ ಯೋಜನೆಯಿಂದ ರೈತಪಿ ವರ್ಗದವರಿಗೆ ಹಾಗೂ ಕುಡಿಯುವ ನೀರಿಗೆ ಸಾಕಷ್ಟು ಅನುಕೂಲ ದೊರೆಯಲಿದೆ, ಯೋಜನೆಯ ಮಹತ್ವವಾದ ಕಾರ್ಯ ಅತೀ ಶೀಘ್ರದಲ್ಲಿ ಮುಕ್ತಾಯಗೊಂಡು ರೈತಪಿ ವರ್ಗದವರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಚಿತ್ರದುರ್ಗ ನಗರದ ಹೊರ ವಲಯದ ಹಾದು ಹೋಗಿರುವಂತಹ ಭದ್ರಾ ಮೇಲ್ದಂಡೆಯ ಯೋಜನೆಯ ಕಾಮಗಾರಿಯನ್ನ ಗುಣಮಟ್ಟದಿಂದ ಮಾಡಬೇಕು, ಮಾಡುವ ಕೆಲಸ ಪ್ರಾಮಾಣಿಕವಾಗಿ ಮಾಡಿದರೆ ನಿಮ್ಮ ಕೆಲಸ ಶಾಶ್ವತವಾಗಿ ಉಳಿಯುತ್ತದೆ, ನೀವು ಮಾಡುವ ಕಾರ್ಯದಿಂದ ಸಾವಿರಾರು ರೈತರ ಕುಟುಂಬಗಳಿಗೆ ಅನುಕೂಲವಾಗಲಿದೆ, ರೈತರಿಗೆ ಅನುಕೂಲವಾಗುವಂತಹ ಕಾರ್ಯಗಳಲ್ಲಿ ಯಾವುದೆ ಲೋಪದೋಷಗಳು ಕಂಡುಬರುವಂತಿಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
ಭದ್ರಾ ಮೇಲ್ದಂಡೆ ಯೋಜನೆ ದೊಡ್ಡಸಿದ್ದವ್ವನಹಳ್ಳಿ, ಮದಕರಿಪುರ, ಗೋನೂರು, ದಂಡಿನ ಕುರುಬರಹಟ್ಟಿ, ಬೊಮ್ಮನಹಳ್ಳಿ, ಸಾಸಲಹಟ್ಟಿ, ಮುತ್ತಯನಹಟ್ಟಿ, ಕಲೇನಹಳ್ಳಿ, ಬಚ್ಚಬೋರನಹಟ್ಟಿ, ಹಂಪಯ್ಯನಮಾಳಿಗೆ, ಹಂಪಯ್ಯನಮಾಳಿಗೆ ಗೊಲ್ಲರಹಟ್ಟಿ ಗ್ರಾಮಗಳ ಬಳಿ ಹಾದು ಹೋಗಿರುವಂತ ಭದ್ರಾ ಮೇಲ್ದಂಡೆ ಕಾಮಗಾರಿಯನ್ನ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಅಧಿಕ ಇಂಜಿನಿಯರ್ ಹರೀಶ್, ಸಹಾಯ ಕಾರ್ಯಪಾಲಕರಾದ ಇಂಜಿನಿಯರ್ ಕಿರಣ್ ಕುಮಾರ್, ಶ್ರೀಧರ್ ನಾಯಕ್, ಗಂಗೇಶ್ ಹರೀಶ್, ಸುನಿಲ್ ಕುಮಾರ್, ಜೀವಿತ, ತೋಟಗಾರಿಕೆ ಸಹಾಯಕ ನಿರ್ದೇಶಕ ದೇವರಾಜ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ್, ಮಾಜಿನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಆರ್ ಕೆ ಸರ್ದಾರ್, ಕಾಂಗ್ರೆಸ್ ಮುಖಂಡರಾದ ರಾಜೇಶ್ ಮಧುರೆ, ಪಪ್ಪಿಸ್ ಸ್ಟೂಡೆಂಟ್ ವಿಂಗ್ ಅಧ್ಯಕ್ಷ ರವಿ ಚಿನ್ನು, ಹಾಗೂ ಇಲಾಖೆ ಅಧಿಕಾರಿಗಳು ಮತ್ತು ರೈತರು ಇದ್ದರು.
ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ, ಜೀವನಾಡಿ ಎಂದು ಸಚಿವ ಸುಧಾಕರ್ ರವರು ಯಾವಾಗಲೂ ಸಹ ಮಾತನಾಡುತ್ತಿದ್ದರು, ಭದ್ರಾ ಮೇಲ್ದಂಡೆ ಯೋಜನೆಯ ಕಾರ್ಯವನ್ನ ಭರ್ತಿ ಮಾಡಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಡಬೇಕೆನ್ನುವ ಪ್ರಾಮಾಣಿಕ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದರು, ಅವರ ಹಾದಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯನ್ನ ವೀಕ್ಷಿಸಿ ಶೀಘ್ರದಲ್ಲೇ ಭದ್ರಾ ಮೇಲ್ದಂಡೆ ನೀರು ಹರಿಸುವಿಕೆಯ ಕಾರ್ಯವನ್ನು ಮಾಡಲಾಗುವುದುರು.
-ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

