
CHITRADURGA NEWS | 07 FEBRUARY 2024
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬ್ರಹ್ಮ ವಿದ್ಯಾನಗರ ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ ರಜತ ಮಹೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಅಂತಿಮ ಹಂತ ತಲುಪಿವೆ.
ಫೆ. 9 ಹಾಗೂ 10ರಂದು ರಜತ ಮಹೋತ್ಸವ ನಡೆಯಲಿದೆ. ಫೆ. 9ರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಿ. ಸುಧಾಕರ್, ಕೆ.ಎನ್. ರಾಜಣ್ಣ, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಮಧು ಬಂಗಾರಪ್ಪ, ಆರ್.ಬಿ. ತಿಮ್ಮಾಪುರ, ಎನ್.ಎಸ್. ಬೋಸರಾಜು, ನಾಗೇಂದ್ರ, ಶಾಸಕರಾದ ಪುಟ್ಟರಂಗಶೆಟ್ಟಿ, ಬಿ.ಜಿ. ಗೋವಿಂದಪ್ಪ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: ಸಾಹಿತಿ ಬಿ.ಎಲ್.ವೇಣು ಅವರಿಗೆ ಸಂದ ಮದಕರಿ ನಾಯಕ ಪ್ರಶಸ್ತಿ ಗೌರವ – ರಾಜನಹಳ್ಳಿ ವಾಲ್ಮೀಕಿ ಜಾತ್ರೆಗೆ ಅಂತಿಮ ಸಿದ್ಧತೆ

ಸಾಲುಮರದ ತಿಮ್ಮಕ್ಕ, ಡಾ.ಕೆ.ಎಸ್. ರವೀಂದ್ರನಾಥ್, ಕುಂಸಿ ಚಂದ್ರಪ್ಪ, ವಿಜಯ್ ಕುಮಾರ್ ತೋರ್ಗಲ್, ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಸವಿತ ಮಹತೋ ಅವರಿಗೆ ‘ಭಗೀರಥ ರತ್ನ ಪ್ರಶಸ್ತಿ’ ನೀಡಲಾಗುತ್ತಿದೆ. ಮಧ್ಯಾಹ್ನ 2ಕ್ಕೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಇದನ್ನೂ ಓದಿ: ಸಂಸದರ ಕಚೇರಿಗೆ ತಲೆಯಿಟ್ಟು ಮಲಗಿದ ರೈತರು
ಫೆ. 10ಕ್ಕೆ ಶ್ರೀಮಠದ ಆವರಣದಲ್ಲಿ ಹೋಮ, ಹವನ, ಪೀಠಾರೋಹಣ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರೋಗ್ಯ ಉಚಿತ ತಪಾಸಣಾ ಶಿಬಿರ, ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕುರಿತ ಪ್ರದರ್ಶನ ಹಾಗೂ ಫೆ. 8ರಿಂದ 10ರವರೆಗೆ ನಿರಂತರ ದಾಸೋಹ ನಡೆಯಲಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
