CHITRADURGA NEWS | 05 MARCH 2026
ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಭೀಮಗಾಯನ” ಕಾರ್ಯಕ್ರಮವನ್ನು ಮಾ. 07 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿವಶರಣ ಮಾದಾರ ಚನ್ನಯ್ಯ ಸಭಾಭವನ (ಲಿಡ್ಕರ್ ಭವನ)ದಲ್ಲಿ ಆಯೋಜಿಸಲಾಗಿದೆ.
ಇದನ್ನೂ ಓದಿ: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗಾಂಧೀಜಿ, ಬುದ್ಧ, ಬಸವಣ್ಣನವರ ವಿಚಾರಧಾರೆಗಳನ್ನು ಜನಮಾನಸದಲ್ಲಿ ಜಾಗೃತಗೊಳಿಸಲು ಪರಿಣತಿ ಹೊಂದಿದ ಪರಿಶಿಷ್ಟ ಜಾತಿಯ ಕಲಾವಿದರನ್ನು ಒಳಗೊಂಡ ಮೈಸೂರು ಜಿಲ್ಲೆಯ ಸರಗೂರಿನ “ಅಮ್ಮ ವಸುಂಧರೆ ಕಲಾತಂಡ” ಭೀಮಗಾಯನ ಸಮಾನತೆಯ ಸ್ವರ ಸಂಭ್ರಮವನ್ನು ಪ್ರಸ್ತುತಪಡಿಸಲಿದೆ.
ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಚಳ್ಳಕೆರೆ ಶಾಸಕರು ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ. ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ, ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ. ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮುಂತಾದ ಉನ್ನತ ಅಧಿಕಾರಿಗಳು, ಗಣ್ಯ ಮಾನ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಇದನ್ನೂ ಓದಿ: ಅಸಿಸ್ಟೆಂಟ್ ಹುದ್ದೆ | RBI ನಿಂದ ಅರ್ಜಿ ಅಹ್ವಾನ
ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ದಲಿತ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರುಗಳು, ಇತರೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಎಲ್ಲ ಸಮಾಜದ ಮುಖಂಡರುಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
