CHITRADURGA NEWS | 08 JULY 2026
ಚಿತ್ರದುರ್ಗ: ನಗರದ ಹೊರವಲಯದ ಭೋವಿ ಗುರುಪೀಠದ ಆವರಣದಲ್ಲಿ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ 17ನೇ ಪಟ್ಟಾಭಿಷೇಕ ಮಹೋತ್ಸವ, 28ನೇ ಲಾಂಛನ ದಿಕ್ಷಾ ಮಹೋತವ, 40ನೇ ಜನ್ಮ ವರ್ಧ್ಯಂತ್ಸೋವ ಜು.18ರಂದು ನಡೆಯಲಿದೆ ಎಂದು ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಂ.ರಾಮಪ್ಪ ತಿಳಿಸಿದರು.
ಇದನ್ನೂ ಓದಿ: SIR ನಡೆಸುತ್ತಿರುವುದು ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಅಲ್ಲ | ಬಿ.ವೈ.ವಿಜಯೇಂದ್ರ
ನಗರದ ಭೋವಿ ವಿದ್ಯಾರ್ಥಿ ನಿಲಯ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗೂ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಮತ್ತು ಯಾವುದೇ ಪದವಿಯಲ್ಲಿ ಈ ವರ್ಷ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದರು.
ವಿದ್ಯಾರ್ಥಿಗಳ ಉನ್ನತ ಶಿಕ್ಷಣ-ಕೈ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯ್ಕೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ಆರ್ಥಿಕ ಸಹಾಯಧನ ವಿತರಿಸಲಾಗುವುದು ಎಂದು ಹೇಳಿದರು.
ಜು.18ರಂದು ಕಲ್ಯಾಣ ಕರ್ನಾಟಕ ಮಟ್ಟದ ಬೋವಿ ಜನೋತ್ಸವಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರ ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಜಿ.ಪರಮೇಶ್ವರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖಂಡರಾದ ಮಲ್ಲೇಶ್ ಬಾಬು ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಾಜಿ ಸಚಿವ ಅರವಿಂದ ಲಿಂಬಾವಳಿ ವಹಿಸುವರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ನೇತೃತ್ವವನ್ನು ಮಾಜಿ ಸಚಿವ ಶಿವರಾಜ ತಂಗಡಗಿ ವಹಿಸುವರು. ದಿಕ್ಕೂಚಿ ನುಡಿಗಳನ್ನು ಶಾಸಕ ಎಂ.ಚಂದ್ರಪ್ಪ ನುಡಿಯಲಿದ್ದಾರೆ. ಪಾವಗಡ ಶಾಸಕ ವಿ ವೆಂಕಟೇಶ ಹಾಗೂ ಪುಲಕೇಶಿ ನಗರದ ಶಾಸಕ ಶ್ರೀನಿವಾಸ ಹಾಗೂ ಭೋವಿ ಸಮಾಜದ ಹಾಲಿ ಮಾಜಿ ಸಚಿವರು, ಶಾಸಕರು ಆಗಮಿಸಲಿದ್ದಾರೆ.
ಸಮಾಜದ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಅಂತರರಾಜ್ಯ ಮಟ್ಟದ ಭೋವಿ ಜನಾಂಗದ ಪ್ರಮುಖ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದು ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
ಸುದ್ದಿಗೋಷ್ಠಿಯಲ್ಲಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಕಾರ್ಯದರ್ಶಿ ಇ.ಮಂಜುನಾಥ್, ಮಠದ ಸಿಇಓ ಗೌನಹಳ್ಳಿ ಗೋವಿಂದಪ್ಪ, ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಮುಖಂಡರಾದ ಡಿ.ಸಿ.ಮೋಹನ್, ಹೆಚ್.ನಾಗರಾಜ್, ಕನಕದಾಸ್, ದೇವರಾಜ್, ನಟೇಶ್ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

