
CHITRADURGA NEWS | 08 AUGUST 2025
ಚಿತ್ರದುರ್ಗ: ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಸ್ಮರಣೋತ್ಸವದ ನಿಮಿತ್ತ ಅವರ ಹೆಸರಿನಲ್ಲಿ ಅಂದಾಜು ರೂ.13 ಕೋಟಿಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 126 ಕೊಠಡಿಗಳುಳ್ಳ 4 ಅಂತಸ್ತಿನ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ.ಕಳಸದ, ಸದಸ್ಯರಾದ ಡಾ.ಪಿ.ಎಸ್. ಶಂಕರ್ ಗುದ್ದಲಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಎಸ್.ಎನ್. ಚಂದ್ರಶೇಖರ್, ಶ್ರೀ ಮೋಕ್ಷಪತಿ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಗುರುಮಠಕಲ್‌ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ಕೆಇಬಿ ಷಣ್ಮುಖಪ್ಪ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ.ರಾಜೇಶ್, ನಾಗೇಂದ್ರಗೌಡ, ನಾಗರಾಜ್, ಡಾ.ಕೊಟ್ರೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
