By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
    ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
    10 minutes ago
    ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ
    ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ | ಹಣ್ಣು, ಪ್ರಸಾದ ವಿತರಣೆ 
    2 hours ago
    ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ
    ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  
    2 hours ago
    ಪತ್ರಿಕಾಗೋಷ್ಠಿಯಲ್ಲಿ ಶಿವಯೋಗಿ ಸಿ.ಕಳಸದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿದರು
    SJM ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಮೈಲುಗಲ್ಲು | 7 ವೃತ್ತಿಪರ ಕಾಲೇಜು ಸೇರ್ಪಡೆ 
    3 hours ago
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    7 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    6 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    4 hours ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    5 hours ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    1 day ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    1 day ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    2 days ago
Reading: ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇವಸ್ಥಾನಕ್ಕೆ ಭೂಮಿ ಪೂಜೆ | ಯಾರೆಲ್ಲಾ ಭಾಗವಹಿಸಿದ್ದರು | ಯಾರು ಏನು ಹೇಳಿದ್ರು..?
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇವಸ್ಥಾನಕ್ಕೆ ಭೂಮಿ ಪೂಜೆ | ಯಾರೆಲ್ಲಾ ಭಾಗವಹಿಸಿದ್ದರು | ಯಾರು ಏನು ಹೇಳಿದ್ರು..?

News Desk Chitradurga News
Last updated: 20 January 2026 21:19
News Desk Chitradurga News
3 months ago
Share
ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇವಸ್ಥಾನಕ್ಕೆ ಭೂಮಿ ಪೂಜೆ
ಮಾದಾರ ಚನ್ನಯ್ಯ ಗುರುಪೀಠದಲ್ಲಿ ಮಾತಂಗೇಶ್ವರಿ ದೇವಸ್ಥಾನಕ್ಕೆ ಭೂಮಿ ಪೂಜೆ
SHARE

CHITRADURGA NEWS | 20 JANUARY 2026

ಚಿತ್ರದುರ್ಗ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪ರಲ್ಲಿರುವ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಆವರಣದಲ್ಲಿ ಆದಿಶಕ್ತಿ ಶ್ರೀ ಮಾತಂಗೇಶ್ವರಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ ಸಲ್ಲಿಸುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಮಠ ಸಾಕ್ಷಿಯಾಯಿತು.

ಇದನ್ನೂ ಓದಿ: BJP ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ | ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠದ ಭಕ್ತರು, ಅಭಿಮಾನಿಗಳು ಸಾವಿರ ಸಂಖ್ಯೆಯಲ್ಲಿ ಆಗಮಿಸಿದ್ದರು.

ಅಂದಾಜು 4 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ದೇವಸ್ಥಾನದಲ್ಲಿ ಪೂಜಿಸುವ ವಿಗ್ರಹವನ್ನು ಅಯೋಧ್ಯೆ ಶ್ರೀರಾಮ ವಿಗ್ರಹ ಕೆತ್ತನೆ ಮಾಡಿದ್ದ ಮೈಸೂರಿನ ಅರುಣ್‌ ಯೋಗಿರಾಜ್‌ ರಚಿಸಲಿದ್ದಾರೆ ಎನ್ನುವುದು ವಿಶೇಷ. ಕೈಯಲಿವೀಣಾ ವಾದನ ಹಿಡಿದಿರುವ ರೂಪದಲ್ಲಿ ತಾಯಿ ಮಾತಂಗೇಶ್ವರಿ ದೇವಿ ಭಕ್ತರಿಗೆ ದರ್ಶನ ನೀಡಲಿದ್ದಾರೆ.

ಆದಿಶಕ್ತಿ ಮಾತಂಗೇಶ್ವರಿ ದೇಗುಲಕ್ಕೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ದೇಗುಲಕ್ಕಾಗಿ ವೈಯಕ್ತಿಕವಾಗಿ ಹತ್ತು ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೆ.ಎಚ್‌.ಮುನಿಯಪ್ಪ, ಮಠಗಳ ಅಭಿವೃದ್ಧಿಗೆ ಸಮಾಜದ ಹಾಗೂ ಸಮಾಜಕ್ಕೆ ಶ್ರೀಗಳ ಮಾರ್ಗದರ್ಶನ ಅಗತ್ಯ. ಕುಲದೇವತೆಯ ದೇವಸ್ಥಾನವನ್ನು ಎಲ್ಲರೂ ಸ್ವಯಂ ಪ್ರೇರಣೆಯಿಂದ ನಿರ್ಮಾಣ ಮಾಡಬೇಕು. ಸರ್ಕಾರ ಮಠಕ್ಕೆ ಬೆಂಬಲವಾಗಿ ನಿಲ್ಲುತ್ತದೆ. ಮುಂದಿನ 11 ತಿಂಗಳಲ್ಲಿ ದೇಗುಲ ನಿರ್ಮಾಣವಾಗಿ, ಮಾಘ ಮಾಸದಲ್ಲಿ ಉದ್ಘಾಟನೆಯಾಗಲಿ ಎಂದು ಆಶಿಸಿದರು.

ಇದನ್ನೂ ಓದಿ: ಚಳ್ಳಕೆರೆ KSRTC ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಸ್ತು ಪ್ರದರ್ಶನ | ಶಾಸಕ ಟಿ.ರಘುಮೂರ್ತಿ ಉದ್ಘಾಟನೆ

ಸಮುದಾಯದ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು, ಎಲ್ಲರೂ ಒಗ್ಗಟ್ಟಾಗಿರಬೇಕು. ಮುಂದುವರೆಸ ಸಮಾಜಗಳ ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮಾದರಿಯಲ್ಲೇ ಅಭಿವೃದ್ಧಿ ಆಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಮೈಸೂರು ರಾಜ ವಂಶಸ್ಥರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಒಡೆಯರ್‌ ಮಾತನಾಡಿ, ಪ್ರಾಚೀನ ಭಾರತದಲ್ಲಿ ದೇವಸ್ಥಾನಗಳು ಚಟುವಟಿಕೆಯ ಕೇಂದ್ರವಾಗಿದ್ದವು. ಅಲ್ಲಿ ಕಲೆಯ ರಕ್ಷಣೆಯಾಗುತ್ತಿತ್ತು. ಶಿಕ್ಷಣ, ಸೇವಾ ಚಟುವಟಿಕೆಗಳು ದೊರೆಯುತ್ತಿದ್ದವು. ಈಗ ಮತ್ತೊಮ್ಮೆ ಮಠಗಳ ಮೂಲಕ ಈ ಕಾರ್ಯ ಪುನರುಜ್ಜೀವನವಾಗಬೇಕಿದೆ. ಈ ಕಾರ್ಯಕ್ಕೆ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮುಂದಾಗಿದ್ದಾರೆ ಎಂದು ತಿಳಿಸಿದರು.

ಭಾರತ ಮಾತೆಯ ದೇಗುಲಕ್ಕೆ ಸಂವಿಧಾನವೇ ಧರ್ಮ ಗ್ರಂಥ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಹಾಗೂ ಮಾಧ್ಯಮ ರಂಗವೆಂಬ ನಾಲ್ಕು ಆಧಾರ ಸ್ಥಂಭಗಳ ಆಧಾರದಲ್ಲಿ ಭಾರತ ನಿಂತಿದೆ. ಹಿಂದೆ ವೇದ ಉಪನಿಷತ್ತು ಇನ್ನಿತರೆ ಗ್ರಂಥಗಳಿದ್ದರೂ ಕಾಲ ಕಾಲಕ್ಕೆ ನವೀಕರಣವಾಗಿ ಈಗ ಸಂವಿಧಾನ ಭಾರತದ ಗ್ರಂಥವಾಗಿದೆ ಎಂದರು.

ಇದನ್ನೂ ಓದಿ: ದಕ್ಷಿಣ ಕರ್ನಾಟದಲ್ಲೇ ಚಿತ್ರದುರ್ಗದ ತಲಾದಾಯ ಕಡಿಮೆ | ರಾಜ್ಯದ ಸರಸಾರಿ ತಲಾದಾಯ ಎಷ್ಟು ? | ಚಿತ್ರದುರ್ಗದ ತಲಾದಾಯವೆಷ್ಟು..?

ಒಂದು ಕಾಲದಲ್ಲಿ ದಲಿತ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿತ್ತು. ಈ ಅನ್ಯಾಯ ಸರಿಪಡಿಸಲು ಮದ್ರಾಸ್‌ ಪ್ರಾಂತದಲ್ಲಿ ಮುಂದಾದಾಗ ಕರ್ನಾಟಕದಲ್ಲಿ ಮೈಸೂರು ಸಂಸ್ಥಾನ ತಕ್ಷಣ ಸ್ಪಂದಿಸಿ ಮೀಸಲಾತಿ ಕಲ್ಪಿಸಿತ್ತು. ಹಿಂದುಳಿದ ವರ್ಗಗಳ ಪಾತ್ರವಿಲ್ಲದ ಸುವರ್ಣ ಮೈಸೂರು ಕಟ್ಟಲು ಸಾಧ್ಯವಿಲ್ಲ ಎನ್ನುವುದು ಗೊತ್ತಿತ್ತು. ಮೀಸಲಾತಿ ವ್ಯವಸ್ಥೆಯಿಂದ ಇಡೀ ಭಾರತಕ್ಕೆ ಲಾಭವಾಗಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರದ ಮಾಜಿ ಸಚಿವರಾದ ಎ.ನಾರಾಯಣಸ್ವಾಮಿ ಮಾತನಾಡುತ್ತಾ, ಮಠದಲ್ಲಿ ಸ್ಥಾಪಿಸಲಿರುವ ಮಾತಂಗೇಶ್ವರಿ ಸರಸ್ವತಿ, ಪಾರ್ವತಿ ಅವತಾರದಲ್ಲಿದ್ದಾರೆ. ಇದರರ್ಥ ಭವಿಷ್ಯದ ದಿನಗಳಲ್ಲಿ ಜ್ಞಾನದ ಆರಾಧನೆ ಆಗಬೇಕು. ಹೀಗಾದಾಗ ಮಾತ್ರ ದೇವರ ಆರಾಧಾನ ಫಲಪ್ರದವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ನಾಲ್ವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ | ಚಿತ್ರದುರ್ಗಕ್ಕೆ ಹೊಸ AC

ಒಳಮೀಸಲಾತಿಗಾಗಿ ಅನೇಕರು ಜೀವ ತೆತ್ತಿದ್ದಾರೆ. ಆದರೆ, ಒಳಮೀಸಲಾತಿಯ ಅರ್ಥವೇ ಗೊತ್ತಿಲ್ಲದ ರಾಜಕಾರಣಿಗಳ ಕೈಯಲ್ಲಿ ನಾವಿದ್ದೇವೆ. ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿದ್ದರೂ, ಆ ಆರ್ಟಿಕಲ್‌ಗಳನ್ನು ಇಷ್ಟು ವರ್ಷಗಳವರೆಗೆ ಕತ್ತಲಲ್ಲಿಟ್ಟು ನಮ್ಮನ್ನು ನ್ಯಾಯಾಲಯಕ್ಕೆ ಅಲೆದಾಡಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಯಾರೆಲ್ಲಾ ಇದ್ದರು:

ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಆದಿಜಾಂಬವ ಮಠದ ಶ್ರೀ ಷಡಾಕ್ಷರಮುನಿ ಸ್ವಾಮೀಜಿ, ಹಂಪಿ ಹೇಮಕೂಟದ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ, ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶಾಸಕ ದುರ್ಯೋಧನ ಐಹೊಳೆ, ಎಂಎಲ್ಸಿ ಕೆ.ಎಸ್‌.ನವೀನ್‌, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಕೆಳಗೋಟೆ, ಮಾದಾರ ಚನ್ನಯ್ಯ ಸೇವಾ ಸಮಿತಿ ಅಧ್ಯಕ್ಷ ಹೂಡಿ ಮಂಜುನಾಥ್‌, ನಗರಸಭೆ ಮಾಜಿ ಅಧ್ಯಕ್ಷ ಗೊಪ್ಪೆ ಮಂಜುನಾಥ್‌, ಲೋಕಸೇವಾ ಆಯೋಗದ ಸದಸ್ಯೆ ಡಾ.ಶಾಂತ ಹೊಸಮನಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಬಿಜೆಪಿ ಮುಖಂಡ ಅನಿತ್‌ ಕುಮಾರ್‌, ಮೈಸೂರು ಮರ್ಕಂಟೈಲ್‌ ಅಧ್ಯಕ್ಷರಾದ ಡಾ.ಎಚ್‌.ಎಸ್‌.ಶೆಟ್ಟಿ, ರವಿ ಮಲ್ಲಾಪುರ, ಬಿ.ಪಿ.ಪ್ರಕಾಶ್‌ ಮೂರ್ತಿ, ಜಡೇಕುಂಟೆ ಮಂಜುನಾಥ್‌, ವಿನಾಯಕ ತೊಡರನಾಳು, ನರಸಿಂಹರಾಜು, ಜಿ.ಎಚ್‌.ಮೋಹನ್‌, ರಘು ಇತರರಿದ್ದರು.

ಶರಣರ ಚೆನ್ನುಡಿ ಮಾಸಪತ್ರಿಕೆ ಲೋಕಾರ್ಪಣೆ:

ಮಾದಾರ ಚನ್ನಯ್ಯ ಗುರುಪೀಠದಿಂದ ಹೊಬರಲಿರುವ ನೂತನ ಮಾಸ ಪತ್ರಿಕೆ ʼಶರಣರ ಚೆನ್ನುಡಿʼ ಮಾಸಪತ್ರಿಕೆಯನ್ನು ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಗುರುಗಳಿಂದ ಗುರುಗಳಿಗೆ ಸನ್ಮಾನ:

ಕಾರ್ಯಕ್ರಮದಲ್ಲಿ ಮಾದಾರ ಚನ್ನಯ್ಯ ಶ್ರೀಗಳ ಪೂರ್ವಾಶ್ರಮದಲ್ಲಿ ಅಕ್ಷರ ಕಲಿಸಿದ ಗುರುಗಳಾದ ನಿವೃತ್ತ ಶಿಕ್ಷಕರಾದ ಟಿ.ಬಸವರಾಜಪ್ಪ, ಮಸ್ರತ್‌ ನಾಜ್‌ ಬೇಗಂ, ಡಿ.ಟಿ.ವೆಂಕಟೇಶ್‌ ರೆಡ್ಡಿ, ಎಚ್‌.ಎಸ್.ಲಲಿತಮ್ಮ, ಬಸವರಾಜಪ್ಪ ಹಾಗೂ ಎ.ಆರ್‌.ಶಿವಮೂರ್ತಿ ಅವರನ್ನು ಶ್ರೀಗಳು ಸನ್ಮಾನಿಸಿದರು.

ನಮಗೆ ಈ ಜಾಗ ಕೊಟ್ಟು ಬೆಳೆಸಿದ್ದು ಮುರುಘಾ ಮಠ, ಈ ಮಠ ಅದೇ ಪರಂಪರೆಯಲ್ಲಿ ಮುಂದುವರೆಯಬೇಕು. ಆದಿಚುಂಚನಗಿರಿ ಮಠದಿಂದ ೫೦ ಲಕ್ಷ ರೂ.ಗಳನ್ನು ನೀಡಿ ಮಠ ಕಟ್ಟಿಕೊಟ್ಟು ನಮಗೆ ಮಾರ್ಗದರ್ಶನ ಮಾಡಿದ್ದಾರೆ. ಮಠ ಸಮುದಾಯದ ರಾಜಕಾರಣಿಗಳನ್ನು ತಯಾರು ಮಾಡುವ ಕಾರ್ಖಾನೆ ಆಗಬೇಕು ಎನ್ನುವುದು ಆದಿಚುಂಚನಗಿರಿ ಶ್ರೀಗಳ ಅಭಿಪ್ರಾಯ. ನಾವು ಅದೇ ರೀತಿಯಲ್ಲಿರುತ್ತೇವೆ.

| ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ. ಮಾದಾರ ಚನ್ನಯ್ಯ ಗುರುಪೀಠ.

ಜನರಲ್ಲಿ ಜಾತಿ ತಾರತಮ್ಯವಿದೆ. ಆದರೆ, ನಮ್ಮ ಮಠಾಧೀಶರಲ್ಲಿ ಇಲ್ಲ. ನಾವೆಲ್ಲಾ ಒಂದೇ ತಟ್ಟಯಲ್ಲಿ ಊಟ ಮಾಡುತ್ತೇವೆ. ಹಿಂದುಳಿದ, ದಲಿತ ಮಠಾಧೀಶರಲ್ಲಿ ಒಡಕು ತರಲು ಯಾರಿಂದಲೂ ಸಾಧ್ಯವಿಲ್ಲ. ಮಾದಾರ ಚನ್ನಯ್ಯ ಶ್ರೀಗಳು ಸಾಕಷ್ಟು ಸಂಕಷ್ಟ ಅನುಭವಿಸಿ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.

| ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠ.

ಬಸವಣ್ಣ ಹಾಗೂ ಅಂಬೇಡ್ಕರ್‌ ಈ ಸಮುದಾಯಕ್ಕೆ ನ್ಯಾಯ ಒದಗಿಸಿದ ಮಹನೀಯರು. ಬಸವಣ್ಣ ಮಾದಾರ ಚನ್ನಯ್ಯ ನಮ್ಮ ತಂದೆ ಎಂದು ಕರೆದರು. ಹುಟ್ಟಿಗೆ ಆಧ್ಯತೆ ಕೊಡುವುದಕ್ಕಿಂತ, ಬದುಕಿಗೆ ಮಹತ್ವ ಕೊಡಬೇಕು ಎನ್ನುವುದು ಬಸವಣ್ಣನವರ ಸಂದೇಶ.

| ಎಸ್‌.ಕೆ.ಬಸವರಾಜನ್‌, ಮಾಜಿ ಶಾಸಕರು.

ಮಾದರು – ಸಾದರು ಅಣ್ಣ ತಮ್ಮಂದಿರಂತೆ. ಶ್ರೀಗಳು ಸಮಾಜವನ್ನು ಉತ್ತಮವಾಗಿ ಸಂಘಟಿಸಿದ್ದಾರೆ. ಹಿಂದಿನ ದಿನಗಳಿಗಿಂತ ಈಗ ಸಾಕಷ್ಟು ಬದಲಾವಣೆ ಆಗುತ್ತಿದೆ. ಶಿಕ್ಷಣ ಪಡೆಯುತ್ತಿದ್ದಾರೆ. ಉನ್ನತ ಸ್ಥಾನಮಾನಗಳಿಗೆ ಹೋಗುತ್ತಿದ್ದಾರೆ. ಇದು ಬದಲಾವಣೆ ಸಂಕೇತ.

| ಜಿ.ಎಂ.ಸಿದ್ದೇಶ್ವರ, ಕೇಂದ್ರದ ಮಾಜಿ ಸಚಿವರು.

ಕಳೆದ 25 ವರ್ಷಗಳಲ್ಲಿ ಮಠ ಶಕ್ತಿ ಮೀರಿ ಬೆಳೆಯುತ್ತಿದೆ. ಸಮಾಜದ ವಿಚಾರ ಬಂದಾಗ ಮುಖಂಡರು ರಾಜಕಾರಣ ಬಿಟ್ಟು ಒಂದಾಗಬೇಕು.

| ಬಿ.ಎನ್‌.ಚಂದ್ರಪ್ಪ, ಮಾಜಿ ಸಂಸದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMadara Channaiah GurupeethMatangeshwari TempleMysoreYaduveera Krishnadatta Wodeyarಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಾತಂಗೇಶ್ವರಿ ದೇವಸ್ಥಾನಮಾದಾರ ಚನ್ನಯ್ಯ ಗುರುಪೀಠಮೈಸೂರುಯದುವೀರ ಕೃಷ್ಣದತ್ತ ಒಡೆಯರ್‌
Share This Article
Facebook Email Print
Previous Article BJP ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ | ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ BJP ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ | ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ
Next Article ದಿನ ಭವಿಷ್ಯ ದಿನ ಭವಿಷ್ಯ | ಜನವರಿ 21 | ಕಠಿಣ ಪರಿಶ್ರಮಕ್ಕೆ ತಕ್ಕ ಫಲ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ
ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಬಸವ ಜಯಂತಿ ಆಚರಣೆ 
ಮುಖ್ಯ ಸುದ್ದಿ
ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ
ನಿರಾಶ್ರಿತರ ಕೇಂದ್ರದಲ್ಲಿ ಬಸವಣ್ಣ ಜಯಂತ್ಯೋತ್ಸವ ಆಚರಣೆ | ಹಣ್ಣು, ಪ್ರಸಾದ ವಿತರಣೆ 
ಮುಖ್ಯ ಸುದ್ದಿ
ಬಿಜೆಪಿ ಕಚೇರಿ ಬಸವ ಜಯಂತಿ ಆಚರಣೆ
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಬಸವಣ್ಣ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ  
ಮುಖ್ಯ ಸುದ್ದಿ
ಪತ್ರಿಕಾಗೋಷ್ಠಿಯಲ್ಲಿ ಶಿವಯೋಗಿ ಸಿ.ಕಳಸದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿದರು
SJM ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಮೈಲುಗಲ್ಲು | 7 ವೃತ್ತಿಪರ ಕಾಲೇಜು ಸೇರ್ಪಡೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up