
CHITRADURGA NEWS | 05 JUNE 2026
ಹೊಳಲ್ಕೆರೆ: ಮತ ಕೊಟ್ಟವರಿಗೆ ಗೌರವ ಬರುವ ರೀತಿಯಲ್ಲಿ ನಡೆದುಕೊಳ್ಳುವುದು ನನ್ನ ಕರ್ತವ್ಯವೆಂದು ತಿಳಿದು ಕೆಲಸ ಮಾಡುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
ತಾಲ್ಲೂಕಿನ ಬಹದ್ದೂರ್‍ಘಟ್ಟ ಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದಲ್ಲಿ ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ ತಕ್ಷಣವೆ ಚಿಕಿತ್ಸೆ ಸಿಗಲಿ ಎನ್ನುವ ಉದ್ದೇಶದಿಂದ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಿಸಲಾಗುತ್ತಿದೆ. ತಾಲ್ಲೂಕಿನಾದ್ಯಂತ ಶಾಲಾ
ಕಾಲೇಜು, ರಸ್ತೆ, ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ರೈತರ ಅಡಿಕೆ ತೋಟಗಳು ಒಣಗಬಾರದೆಂದು ನೀರು, ವಿದ್ಯುತ್‍ಗೆ ಹೆಚ್ಚಿನ ಆದ್ಯತೆ ಕೊಡುತ್ತಿದ್ದೇನೆ.
ಕೆರೆಗೆ ನೀರು ತುಂಬಿಸುವ ಯೋಜನೆ ಕೂಡ ಕೈಗೆತ್ತಿಕೊಳ್ಳಲಾಗಿದೆ. ಭರಮಸಾಗರ, ಕೋಗುಂಡೆ ಸೇರಿದಂತೆ ತಾಲ್ಲೂಕಿನಾದ್ಯಂತ ಹದಿಮೂರು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ. ಎಲ್.ಕೆ.ಜಿ.ಯಿಂದ ಹಿಡಿದು ದ್ವಿತೀಯ ಪಿ.ಯು.ಸಿ.ವರೆಗೆ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ನಿಯಮ ಬಾಹಿರ ಬೆಳೆವಿಮೆ ಪಾವತಿ | ವಿಮಾ ಕಂಪನಿ ಪ್ರತಿನಿಧಿಗಳ ವಿರುದ್ಧ ವಿಚಾರಣೆ ನಡೆಸುವಂತೆ ಡಿಸಿ ಸೂಚನೆ
ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ, ಮಧ್ಯಾಹ್ನದ ಊಟ, ಕಾಳು ಪಲ್ಯ ನೀಡಿ ಸಂಜೆ ಸುರಕ್ಷಿತವಾಗಿ ಬಸ್‍ನಲ್ಲಿ ಕರೆದುಕೊಂಡು ಹೋಗಿ ಮನೆಗಳಿಗೆ ತಲುಪಿಸಲಾಗುವುದು. ಹನ್ನೆರಡು ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತವಾದ ಕಟ್ಟಡ ಕಟ್ಟಿಸಲಾಗುತ್ತದೆ. ಸುತ್ತಮುತ್ತಲಿನ ಹತ್ತಾರು ಮಕ್ಕಳಿಗೆ ಇದರಿಂದ ಗುಣ ಮಟ್ಟದ ಶಿಕ್ಷಣ ಸಿಗುತ್ತದೆ.
ಅಡಿಕೆ ತೋಟ, ತೆಂಗಿನ ತೋಟ ಬಹಳ ದಿನ ಇರಲ್ಲ. ಮಕ್ಕಳಿಗೆ ಶಿಕ್ಷಣ ಕೊಡಿಸಿದರೆ ಗೌರವದಿಂದ ಬದುಕುತ್ತಾರೆ. ಇದರಿಂದ ತಂದೆ-ತಾಯಿಗಳಿಗೆ ಖುಷಿಯಾಗುತ್ತದೆ. ನಾನು ಆಡಳಿತ ಪಕ್ಷದಲ್ಲಿಲ್ಲ. ವಿರೋಧ ಪಕ್ಷದಲ್ಲಿದ್ದರು ಸರ್ಕಾರದಿಂದ ಅನುದಾನ ತರುವ ಯೋಗ್ಯತೆಯಿಟ್ಟುಕೊಂಡಿದ್ದೇನೆ. ಅಧಿಕಾರ ಶಾಶ್ವತವಲ್ಲ. ಇರುವಷ್ಟು ದಿನ ಹತ್ತಾರು ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಕೆಲಸ ಮಾಡಿಸುತ್ತಿದ್ದೇನೆಂದರು.
250 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ. ನೀರು, ಕರೆಂಟ್ ಕೊಟ್ಟರೆ ರೈತರು ನೆಮ್ಮದಿಯಾಗಿ ಜೀವಿಸುತ್ತಾರೆ. 32 ವರ್ಷಗಳ ಕೆಳಗೆ ನಾನು ಎಂಎಲ್‍ಎ. ಆದವನು ನಿಮ್ಮೆಲ್ಲರ ಆಶೀರ್ವಾದಿಂದ ಅಧಿಕಾರದಲ್ಲಿದ್ದೇನೆಂದು ಕೃತಜ್ಞತೆ ಸಮರ್ಪಿಸಿದರು.
ಇದನ್ನೂ ಓದಿ: ಜೂನ್ 06 ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ ಶಿಬಿರ
ಈ ವೇಳೆ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶೈಲೇಶ್‍ಕುಮಾರ್, ಡಿ.ಎಸ್.ಪ್ರವೀಣ್‍ಕುಮಾರ್, ಮಂಜುನಾಥ, ತಿಪ್ಪಣ್ಣ, ಆನಂದಪ್ಪ, ಬಸವರಾಜಣ್ಣ, ಜಗದೀಶ್, ತಿಪ್ಪೇಶ್, ಚಂದ್ರಶೇಖರ್, ಅರುಣ್‍ಕುಮಾರ್ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
