
CHITRADURGA NEWS | 07 OCTOBER 2025
ಹೊಳಲ್ಕೆರೆ: ತಾಲ್ಲೂಕಿನ ಲೋಕದೊಳಲು ಗ್ರಾಮದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.
ಇದನ್ನೂ ಓದಿ: ಸರ್ಕಾರದ ಸೌಲಭ್ಯ ಪಡೆದು ನಾಯಕ ಸಮಾಜ ಮುಖ್ಯವಾಹಿನಿಗೆ ಬರಲಿ | ಶಾಸಕ ಎಂ.ಚಂದ್ರಪ್ಪ

ನಂತರ ಮಾತನಾಡಿದ ಶಾಸಕರು, ಶಾಲಾ-ಕಾಲೇಜು, ಕೆರೆ ಕಟ್ಟೆ, ಚೆಕ್ಡ್ಯಾಂ, ಆಸ್ಪತ್ರೆ, ಬಸ್ನಿಲ್ದಾಣ ಇವೆಲ್ಲವುಗಳನ್ನು ನನ್ನದೆ ಪ್ಲಾನ್ನಿಂದ ಕಟ್ಟಿಸಿದ್ದೇನೆ. ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಇನ್ನೂರಕ್ಕೂ ಹೆಚ್ಚು ಶಾಲೆಗಳು, ಪಿ.ಯು.ಕಾಲೇಜು, ಡಿಗ್ರಿ ಕಾಲೇಜುಗಳನ್ನು ತೆರೆಯಲಾಗಿದೆ.
ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅದುವೇ ನಿಜವಾದ ಆಸ್ತಿ ಪೋಷಕರುಗಳು ಮಕ್ಕಳ ಭವಿಷ್ಯದ ಕಡೆ ಗಮನ ಕೊಡಬೇಕೆಂದು ಹೇಳಿದರು.
ಹೆಣ್ಣು ಮಕ್ಕಳಿಗೆ, ಗಂಡು ಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್ಗಳನ್ನು ಕಟ್ಟಿಸಿದ್ದೇನೆ. ರಾಜಕಾರಣಿಯಾದವನಿಗೆ ಮತ್ಸರವಿರಬಾರದು. ಪರೋಪಕಾರದ ಗುಣವಿದ್ದರೆ ದೇವರು ಒಳ್ಳೆಯದು ಮಾಡುತ್ತಾನೆ. ನುಡಿದಂತೆ ನಡೆಯುವುದು ಮನುಷ್ಯನ ಧರ್ಮ. ಮುಂದಿನ ದಿನಗಳಲ್ಲಿ ಕೆರೆ ತುಂಬಿಸಿ ದೇವಸ್ಥಾನವನ್ನು ಕಟ್ಟಿಸುತ್ತೇನೆ ಎಂದರು.
ಇದನ್ನೂ ಓದಿ: ಜಿಲ್ಲಾಡಳಿತ 30 ಎಕರೆ ಜಮೀನು ನೀಡಿದರೆ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ | MLC ಕೆ.ಎಸ್.ನವೀನ್ ಭರವಸೆ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ತಿಮ್ಮೇಶ್, ಮೀನಮ್ಮ, ಚಂದ್ರಶೇಖರ್, ಗವಿರಂಗಪ್ಪ, ಪುಟ್ಟರಂಗಯ್ಯ, ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್, ರಂಗಸ್ವಾಮಿ, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
