CHITRADURGA NEWS | 07 MAY 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ನೂರಾರು ವರ್ಷಗಳಿಂದ ನಡೆದು ಬರುತ್ತಿರುವ ಜಾನಪದ ಸೊಗಡಿನ, ಸಾಂಪ್ರದಾಯಿಕ ಅಕ್ಕ-ತಂಗಿ ದೇವತೆಯರ ಭೇಟಿ ಉತ್ಸವಕ್ಕೆ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ.

ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಶ್ರೀ ಬರಗೇರಮ್ಮ ದೇವಿ ಹಾಗೂ ಶ್ರೀ ತಿಪ್ಪಿನಘಟ್ಟಮ್ಮ ದೇವಿಯರ ಭೇಟಿ ಉತ್ಸವ ನಡೆಯಲಿದ್ದು, ಇಂದು(ಮಂಗಳವಾರ) ಸಂಜೆ ಕಾರ್ಯಕ್ರಮ ಭೇಟಿ ಕುರಿತ ಧಾರ್ಮಿಕ ಕಾರ್ಯಗಳು ಪ್ರಾರಂಭವಾಗಲಿವೆ.
ಇದನ್ನೂ ಓದಿ: ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ
ಜನಪದ ಸೊಗಡಿನ ಹಿನ್ನೆಲೆ ಹೊಂದಿರುವ ಈ ಭೇಟಿ ಉತ್ಸವ ಪ್ರತಿವರ್ಷ ಶ್ರೀ ಏಕನಾಥೇಶ್ವರಿ ಅಮ್ಮನವರ ಉತ್ಸವದ ನಂತರ ಮೊದಲ ಮಂಗಳವಾರ ನಡೆಯುವುದು ವಾಡಿಕೆ. ಅದರಂತೆ ಇಂದು ನಡೆಯಲಿರುವ ಭೇಟಿ ಉತ್ಸವಕ್ಕೆ ರಾಜಬೀದಿ ದೊಡ್ಡಪೇಟೆಯಲ್ಲಿ ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ರಾಜ ಉತ್ಸವಾಂಬ ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಿಂದ ರಂಗಯ್ಯನ ಬಾಗಿಲಿನವರೆಗೂ ರಸ್ತೆಯ ಎರಡೂ ಬದಿಗಳಲ್ಲಿ ಸಾರ್ವಜನಿಕರು ಭೇಟಿ ಉತ್ಸವ ವೀಕ್ಷಿಸಲು ಬ್ಯಾರಿಕೇಡ್ ನಿರ್ಮಿಸಲಾಗಿದೆ.
ಇದನ್ನೂ ಓದಿ: ಮತ ಚಲಾಯಿಸಿದ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ
ಭೇಟಿ ಉತ್ಸವ ಸಮಿತಿಯಿಂದ ಉತ್ಸವಕ್ಕೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಜತೆಗೆ ಪ್ರತಿ ವರ್ಷದಂತೆ ನಗರಸಭೆಯಿಂದ ಸ್ವಚ್ಛತಾ ಕಾರ್ಯ, ನೀರಿನ ಸೌಕರ್ಯ, ಹೆಚ್ಚಿನ ವಿದ್ಯುತ್ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ. ಮಹೋತ್ಸವ ನಡೆಯುವ ಸ್ಥಳದಲ್ಲಿ ಆಕರ್ಷಕ ಅಲಂಕಾರ ನಡೆಯುತ್ತಿದ್ದು, ಚಿತ್ತಾಕರ್ಷಕ ರಂಗವಲ್ಲಿ, ಹೂವಿನ ಅಲಂಕಾರಗಳೂ ನಡೆಯುತ್ತಿವೆ.
ಇದನ್ನೂ ಓದಿ: ಮೇ.8 ರಿಂದ 10ರವರೆಗೆ ಮುರುಘಾ ಮಠದಲ್ಲಿ ಬಸವ ಜಯಂತಿ
ಸಂಜೆ ನಡೆಯುವ ಭೇಟಿ ಉತ್ಸವ ಕಣ್ತುಂಬಿಕೊಳ್ಳಲು ದುರ್ಗದ ಜನತೆ ಕಾತರರಾಗಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
