
CHITRADURGA NEWS | 22 MAY 2025
ಚಿತ್ರದುರ್ಗ: ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಚಿತ್ರದುರ್ಗ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.


ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಜಾಮೀನು | ನೀತಿ ಸಂಹಿತೆ ಉಲ್ಲಂಘನೆ ಕೇಸ್
2023ರ ಚುನಾವಣೆ ಸಂದರ್ಭ ಪಟಾಕಿ ಸಿಡಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.
ಪ್ರಕರದ ವಿಚಾರಣೆ ನಡೆಸಿದ ನ್ಯಾಯಾಲಯ ಮೇ.22 ಗುರುವಾರ(ಇಂದು) ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ:1001 ಆಶ್ರಯ ಮನೆ ನಿರ್ಮಾಣ | ಕಾಮಗಾರಿ ಪರಿಶೀಲಿಸಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) | ತ್ವರಿತ ನಿರ್ಮಾಣಕ್ಕೆ ತಾಕೀತು
ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪಟಾಕಿ ಸಿಡಿಸಿದ ಪ್ರಕರಣದಲ್ಲಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ನಿರ್ದೋಷಿ ಎಂದು ನ್ಯಾಯಾಧೀಶರಾದ ರಶ್ಮಿ ಮರಡಿ ತೀರ್ಪು ನೀಡಿ ಪ್ರಕರಣವನ್ನು ಖುಲಾಸೆಗೊಳಿಸಿದ್ದಾರೆ.
2023ರಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ತಡರಾತ್ರಿ ಪಟಾಕಿ ಹೊಡೆದ ಆರೋಪದಡಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ), ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಶಾಸಕರ ಬೆಂಬಲಿಗರಾದ ಶ್ರೀರಾಮ್, ಎಚ್.ಎಂ.ಮಂಜುನಾಥ್, ಸೈಯದ್ ಖುದ್ದೂಸ್ ಸೇರಿದಂತೆ ಏಳು ಜನರ ಮೇಲೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ: ಬೇಸಿಗೆಯಲ್ಲಿ ಮಕ್ಕಳಿಗೆ ಮಜ್ಜಿಗೆ ಕುಡಿಸುವುದರಿಂದ ಆಗುವ ಪ್ರಯೋಜನಗಳು
ಪ್ರಕರಣದ ರದ್ದತಿ ಕೋರಿ ಈ ಹಿಂದೆ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಹೈಕೋರ್ಟ್ ನಿರ್ದೇಶನದಂತೆ ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿ ಪ್ರಕರಣ ಖುಲಾಸಯಾಗಿದೆ. ಶಾಸಕರ ಪರವಾಗಿ ನ್ಯಾಯವಾದಿ ಎಂ.ಉಮೇಶ್ ವಾದ ಮಂಡಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
