
CHITRADURGA NEWS | 15 NOVEMBER 2025
ಚಿತ್ರದುರ್ಗ: ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಹಾರ ಚುನಾವಣೆ ಫಲಿತಾಂಶ ಮುನ್ನುಡಿ ಬರೆದಿದೆ. ಈ ಚುನಾವಣೆಯಲ್ಲಿ ಎರಡಂಕಿಯನ್ನು ಕಾಣದ ಕಾಂಗ್ರೆಸ್ ಹಾಗೂ ಆರ್ ಜೆಡಿ, ಜಂಗಲ್‍ರಾಜ್ ಆಡಳಿತವನ್ನು ಜನರು ತಿರಸ್ಕರಿಸಿದ್ದಾರೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ಹೇಳಿದರು.
ಬಿಹಾರ ಚುನಾವಣೆಯಲ್ಲಿ ಆ ರಾಜ್ಯದ ಜನತೆ ಪ್ರಧಾನ ಮೋದಿ ಹಾಗೂ ನಿತೀಶ್ ಕುಮಾರ್ ನೇತೃತ್ವದ ಎನ್.ಡಿ.ಎ. ಒಕ್ಕೂಟಕ್ಕೆ ಭಾರೀ ಬಹುಮತ ನೀಡಿ ಗೆಲ್ಲಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ರೇಟ್ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ದರ
ಬಿಹಾರದಲ್ಲಿ ಈ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೂರ ಹೊಮ್ಮಿದ್ದು ಸಂತಸದ ವಿಷಯವಾಗಿದೆ. ಮಹಾ ಘಟಭಂದನ್ ಒಕ್ಕೂಟಕ್ಕೆ ಬಿಹಾರದ ಜನ ತಕ್ಕ ಪಾಠ ಮಾಡಿದ್ದಾರೆ.
ಪ್ರತಿ ಚುನಾವಣೆಯಲ್ಲಿ ಆಯೋಗವನ್ನು ದೂರುವ ಕಾಂಗ್ರೆಸ್ ಮುಖಂಡರು ಈಗಲಾದರೂ ಬುದ್ದಿಕಲಿತು ಆತ್ಮಾವಲೋಕನವನ್ನು ಮಾಡಿಕೊಳ್ಳಲಿ. ಬಿಹಾರ ಚುನಾವಣೆ ಪ್ರಜಾಪ್ರಭುತ್ವದ ಗೆಲುವಾಗಿದೆ ಎನ್.ಡಿ.ಎ.ಗೆ ಜನಾದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
