CHITRADURGA NEWS | 29 JULY 2025
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ವೀರದಿಮ್ಮನಹಳ್ಳಿ ಗ್ರಾಮದ ಬಳಿ ಬೈಕ್-ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ
ಇದನ್ನೂ ಓದಿ: ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಜಿಪಂ ನೂತನ ಸಿಇಓ ಡಾ.ಆಕಾಶ್ | ಜೆಜೆಎಂ ಕಾಮಗಾರಿ ಮುಗಿಸಲು ಸೂಚನೆ
ಮುರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಮಗನನ್ನು ಭೇಟಿ ಮಾಡಲು ಹೊರಟಿದ್ದ ತಾಯಿ ಹಾಗೂ ಆಕೆಯ ತಮ್ಮ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಅಜಾಕರೂಕತೆಯಿಂದ ಕಾರು ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಅಭಿಷೇಕ ಹಾಗೂ ಮಂಜುಳ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರು ದೇವರಿಕೊಟ್ಟ ಗ್ರಾಮದ ವಸತಿ ಶಾಲೆಯಲ್ಲಿ ಓದುತ್ತಿದ್ದ ಮಂಜುಳಾ ಪುತ್ರನನ್ನು ನೋಡಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಇದನ್ನೂ ಓದಿ: ಕ್ಷಯ ರೋಗಕ್ಕೆ ಭಯ ಬೇಡ, ಚಿಕಿತ್ಸೆ ಲಭ್ಯವಿದೆ | ಡಾ.ವಿನಯ್ ಸಜ್ಜನ್
ಅಪಘಾತದಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಸುಮಾರು ದೂರಕ್ಕೆ ಬೈಕ್ ಎಳೆದೊಯ್ದಿದೆ. ಘಟನೆಗೆ ಕಾರು ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಚಳ್ಳಕೆರೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
