
CHITRADURGA NEWS | 17 JANUARY 2024
ಚಿತ್ರದುರ್ಗ (CHITRADURGA): ಹೆದ್ದಾರಿಯಲ್ಲಿ ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟಿದ್ದಾನೆ.
ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮಕ್ಕೆ ಸಮೀಪದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೈಕ್ ಅಪಘಾತವಾಗಿದೆ. ಈ ವೇಲೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ವಾಸಿ ಹರೀಶ್ ಕುಮಾರ್ (48) ಮೃತಪಟ್ಟವರು. ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಪದ್ಮನಾಭ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ | ಬೆಳೆ ವಿಮೆ, ಬೆಳೆ ಪರಿಹಾರಕ್ಕೆ ಆಗ್ರಹ
ಭದ್ರಾವತಿಯಿಂದ ಕೆಂಗುಂಟೆ ಗ್ರಾಮಕ್ಕೆ ಬೈಕ್‌ನಲ್ಲಿ ಹರೀಶ್ ಕುಮಾರ್, ಪದ್ಮನಾಭ ತೆರಳುತ್ತಿದ್ದರು. ಈ ವೇಳೆ ಹೆಬ್ಬಳಗೆರೆ ಗ್ರಾಮದ ಹೆದ್ದಾರಿಯಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆಗಿದೆ.
ಇದನ್ನೂ ಓದಿ: ಕರಡಿಗಳ ಮುದ್ದಾದ ಗುದ್ದಾಟ ನೊಡಿದ್ದೀರಾ | ಇಲ್ಲಿದೆ ನೋಡಿ ಸುದ್ದಿ ಮತ್ತು ವಿಡಿಯೋ
ಕ್ಷಣ ಮಾತ್ರದಲ್ಲೇ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಹರೀಶ್ ಕುಮಾರ್ ಮೃತಪಟ್ಟಿದ್ದಾರೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
