Connect with us

    ರೈತ ಸಂಘದಿಂದ ಬೈಕ್ ರ್ಯಾಲಿ | ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ

    ರೈತ ಸಂಘದಿಂದ ಬೈಕ್ ರ್ಯಾಲಿ

    ಮುಖ್ಯ ಸುದ್ದಿ

    ರೈತ ಸಂಘದಿಂದ ಬೈಕ್ ರ್ಯಾಲಿ | ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 27 JANUARY 2024

    ಚಿತ್ರದುರ್ಗ: ಭಾರತೀಯ ಕಿಸಾನ್ ಯೂನಿಯನ್ ಕರೆಕೊಟ್ಟ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಶುಕ್ರವಾರ ರೈತರು ಬೈಕ್ ರ್ಯಾಲಿ ನಡೆಸಿದರು.

    ನಗರದ ಕನಕ ವೃತ್ತದಿಂದ ಒನಕೆ ಓಬವ್ವ ವೃತ್ತದವರೆಗೆ ಬೈಕುಗಳಲ್ಲಿ ಆಗಮಿಸಿದ ರೈತರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿದರು.

    ಇದನ್ನೂ ಓದಿ: ಮುರುಘಾ ಮಠದಿಂದ-ಸೀಬಾರ ಹೆದ್ದಾರಿ ಬಂದ್ | ನಾಳೆ ಚಿತ್ರದುರ್ಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

    ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಒತ್ತಾಯಿಸಿತು.

    ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ರೈತರನ್ನು ಉದ್ದೇಶಿಸಿ ಮಾತನಾಡುತ್ತಾ, ದೆಹಲಿಯಲ್ಲಿ ಎರಡು 2 ಲಕ್ಷ ಟ್ರ್ಯಾಕ್ಟರ್ ಪೆರೇಡ್ ಮಾಡಿದ್ದಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ವಿರೋಧಿ ಕಾಯಿದೆಗಳನ್ನು ಹಿಂಪಡೆಯಿತು ಎಂದರು.

    ಚಳುವಳಿಯಲ್ಲಿ ಪ್ರಾಣತೆತ್ತ 501 ರೈತರ ಸ್ಮಾರಕಗಳನ್ನು ನಿರ್ಮಿಸಿ ಕುಟುಂಬದವರಿಗೆ ಪರಿಹಾರ ನೀಡಬೇಕು. ವಿದ್ಯುತ್ ವಲಯವನ್ನು ಖಾಸಗಿಕರಣಗೊಳಿಸಿ ಮೀಟರ್ ಅಳವಡಿಸುವ ಕ್ರಮವನ್ನು ಹಿಂಪಡೆಯುವಂತೆ ಹಿಂದಿನಿಂದಲೂ ಒತ್ತಾಯಿಸಿದ್ದೇವೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

    ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಘೋಷಿಸಿರುವ ಕೇಂದ್ರ ಸರ್ಕಾರ ಈವರೆಗೆ ಹಣ ಬಿಡುಗಡೆ ಮಾಡಿಲ್ಲ. ತಕ್ಷಣ ಹಣ ನೀಡಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯ ರೈತರ ಜಮೀನುಗಳಿಗೆ ನೀರು ಹರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಫೆ.5 ರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಕಚೇರಿ ಎದುರು ಅನಿರ್ಧಿμÁ್ಟವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಎಚ್ಚರಿಸಿದರು.

    ಇದನ್ನೂ ಓದಿ: ಶಾಸಕರಾದ ಟಿ.ರಘುಮೂರ್ತಿ ಹಾಗೂ ಬಿ.ಜಿ.ಗೋವಿಂದಪ್ಪಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

    ಹದಿಮೂರು ತಿಂಗಳುಗಳ ಕಾಲ ದೆಹಲಿಯಲ್ಲಿ ಚಳುವಳಿ ನಡೆಸಿದ ರೈತರ ಮೇಲೆ ದಾಖಲಿಸಿರುವ ಕೇಸುಗಳನ್ನು ವಾಪಸ್ ಪಡೆಯುವುದು ಒಳಗೊಂಡಂತೆ ಇನ್ನು ಮುಂತಾದ ವಿಚಾರಗಳ ಕುರಿತು ಭರವಸೆ ನೀಡಿದ್ದ ಕೇಂದ್ರ ಸರ್ಕಾರ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿಲ್ಲ. ಬರಗಾಲದಿಂದ ರೈತರು ತತ್ತರಿಸಿ ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಫಸಲ್ ಭೀಮ ಯೋಜನೆ ರೈತರಿಗೆ ಉಪಯೋಗವಾಗದೆ ಬಂಡವಾಳಶಾಹಿ ಕಂಪನಿಗಳಿಗೆ ಲಾಭವಾಗುತ್ತಿದೆ. ರಸಗೊಬ್ಬರ ಸಬ್ಸಿಡಿ ಕಡಿತಗೊಳಿಸಿ ಬೆಲೆಯನ್ನು ಏರಿಸಿದೆ. ಸರ್ಕಾರದ ಇಂತಹ ಧೋರಣೆಯಿಂದ ಸಾಲದ ಭಾದೆಗೆ ಸಿಲುಕಿರುವ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆಂದು ಈಚಘಟ್ಟ ಸಿದ್ದವೀರಪ್ಪ ಆಕ್ರೋಶ ವ್ಯಕ್ತಪಡಿಸಿದರು.

    ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಲಿಂಗಪ್ಪ, ಕಾರ್ಯದರ್ಶಿ ಅಪ್ಪರಸನಹಳ್ಳಿ ಬಸವರಾಜಪ್ಪ, ರಾಮರೆಡ್ಡಿ, ರೈತ ಮುಖಂಡರುಗಳಾದ ಸತೀಶ್, ಬೋರೇಶ್, ಮಂಜುನಾಥ್, ಕೆ.ಟಿ.ತಿಪ್ಪೇಸ್ವಾಮಿ ಇನ್ನು ಅನೇಕರು ಬೈಕ್ರ್ಯಾಲಿಯಲ್ಲಿ ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top