Connect with us

BIKE RALLY; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

ಮುಖ್ಯ ಸುದ್ದಿ

BIKE RALLY; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

CHITRADURGA  NEWS | 04  AUGUST 2024

ಚಿತ್ರದುರ್ಗ: ಅಹಿಂದ ನಾಯಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಬೈಕ್ ರ್ಯಾಲಿ(BIKE RALLY) ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಕ್ಲಿಕ್ ಮಾಡಿ ಓದಿ: Muda scam: ಜನ ನಿಮ್ಮನ್ನು ಕ್ಷಮಿಸುವುದಿಲ್ಲ | ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

ಸಿದ್ದರಾಮಯ್ಯ ವಿರುದ್ದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ದ ಬೈಕ್ ರ‍್ಯಾಲಿಯಲ್ಲಿ ಧಿಕ್ಕಾರ ಕೂಗಲಾಯಿತು.

ಕುರುಬ ಸಮಾಜದ ಮುಖಂಡ ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್ ರ‍್ಯಾಲಿ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಡ ಜನರ ಪರವಾಗಿರುವುದನ್ನು ಸಹಿಸಿಕೊಳ್ಳಲು ಆಗದ ಪ್ರತಿ ಪಕ್ಷಗಳು ರಾಜಿನಾಮೆಗೆ ಒತ್ತಾಯಿಸುತ್ತಿರುವುದರಲ್ಲಿ ಅರ್ಥವಿಲ್ಲ. ಅಹಿಂದ ಜಾತಿ ಹಾಗೂ ಶೋಷಿತ ಸಮುದಾಯಗಳು ಸಿದ್ದರಾಮಯ್ಯನವರ ಪರವಾಗಿವೆ. ಯಾವುದೇ ಕಾರಣಕ್ಕೂ ತೊಂದರೆಯಾಗಲು ಬಿಡುವುದಿಲ್ಲ ಎಂದು ವಿರೋಧಿಗಳಿಗೆ ಎಚ್ಚರಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ರಾಜ್ಯಪಾಲರು ಮುಖ್ಯಮಂತ್ರಿಗೆ ನೀಡಿರುವ ನೋಟಿಸ್ ಸೋಮವಾರ ಸಂಜೆಯೊಳಗೆ ಹಿಂದಕ್ಕೆ ಪಡೆಯದಿದ್ದರೆ ಚಿತ್ರದುರ್ಗ ಜಿಲ್ಲೆಯನ್ನು ಬಂದ್ ಮಾಡಿ ಪ್ರತಿಭಟಿಸುತ್ತೇವೆ. ಗೋಬ್ಯಾಕ್ ರಾಜ್ಯಪಾಲ ಎಂದು ಅಧಿಕಾರದಿಂದ ಇಳಿಯುವತನಕ ಕೂಗುತ್ತಿರುತ್ತೇವೆಂದು ಎಚ್ಚರಿಸಿದರು.

ಕ್ಲಿಕ್ ಮಾಡಿ ಓದಿ: Hindu Mahaganapathi: ಹಿಂದೂ ಮಹಾಗಣಪತಿ ಉತ್ಸವ ಸಮಿತಿಗೆ ಬಿ.ನಯನ್ ಅಧ್ಯಕ್ಷ

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಜೊತೆ ಅಲ್ಪಸಂಖ್ಯಾತರು, ದಲಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಕ್ಕಿದ್ದಾರೆ, ವಿರೋಧ ಪಕ್ಷಗಳು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.

ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯ ಶ್ರೀರಾಮ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಸೈಯದ್ ವಲಿಖಾದ್ರಿ, ಅಬ್ದುಲ್ಲಾ, ಎ.ಸಾಧಿಕ್ವುಲ್ಲಾ, ಛಲವಾದಿ ಸಮಾಜದ ಮುಖಂಡ ಎಸ್.ಎನ್.ರವಿಕುಮಾರ್, ಮುತ್ತುರಾಜ್, ಮಲ್ಲಿಕಾರ್ಜನ ಎಸ್.ಬಿ.ಎಲ್. ಹನೀಸ್, ನ್ಯಾಯವಾದಿ ರವೀಂದ್ರ, ಖಾನ್ಸಾಬ್, ಕುರಿ ನಾಗರಾಜ್ ಮತ್ತಿತರರಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version