
CHITRADURGA NEWS | 19 NOVEMBER 2024
ಚಿತ್ರದುರ್ಗ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ನೇರ್ಲಗುಂಟೆ ಬಳಿ ಮಂಗಳವಾರ ರಾತ್ರಿ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ದಿಬ್ಬದಹಳ್ಳಿ ನಿವಾಸಿಗಳಾದ ಪ್ರಜ್ವಲ್ (20), ಹೊನ್ನೂರು ಸಾಬ್ (24) ಮೃತ ದುರ್ದೈವಿಗಳು.
ಕ್ಲಿಕ್ ಮಾಡಿ ಓದಿ: ತಾಯಿ ಮಗಳು ಆತ್ಮಹತ್ಯೆ | ಚಿಕ್ಕಂದವಾಡಿಯಲ್ಲಿ ಧಾರುಣ ಘಟನೆ
ಚಳ್ಳಕೆರೆ ನಗರದಲ್ಲಿ ಎಲೆಕ್ಟ್ರಿಕಲ್ ಕೆಲಸಕ್ಕೆ ಹೋಗಿ ವಾಪಸು ಊರಿಗೆ ತೆರಳುವಾಗ ಮಾರ್ಗ ಮಧ್ಯದಲ್ಲಿ ಅಪಘಾತ ನಡೆದಿದೆ.
ಟಾಟಾ ಎಸ್ ಚಾಲಕನ ಅತೀ ವೇಗ – ಅಜಾಗರೂಕತೆಯಿಂದ ಅಪಘಾತ.
ಘಟನಾ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
