
CHITRADURGA NEWS | 14 JANUARY 2024
ಹಿರಿಯೂರು: ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಯ ಬಿಲ್ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ತಾಲೂಕು ಹೊಸಯಳನಾಡು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆನಂದ್ ಬಂಧಿತ ಆರೋಪಿ.

ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಪಾಂಡುರಂಗಪ್ಪ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಇದನ್ನೂ ಓದಿ: ತಿಂಗಳಾಂತ್ಯಕ್ಕೆ ಕೋಟೆನಾಡಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ದೂರುದಾರ ಪಾಂಡುರಂಗಪ್ಪ ಅವರಿಗೆ ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಗೆ ಬಿಲ್ ಮಂಜೂರು ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಹಣ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯಂಜಯ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಆರೋಪಿ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
