CHITRADURGA NEWS | 22 SEPTEMBER 2026
ಚಿತ್ರದುರ್ಗ: ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಾಸವಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಬಿಂಧು ಟಿ. ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಆರ್ಯವೈಶ್ಯ ಸಮುದಾಯದ ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಹಲವು ಯೋಜನೆ | ನಿಗಮದ ಅಧ್ಯಕ್ಷ ಕೆ.ವಿ.ರಾಮ್ಪ್ರಸಾದ್
400 ಮೀಟರ್ ಹಾಗೂ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ ಬಿಂಧು ಟಿ., 400×100 ಮೀಟರ್ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಬಿಂಧು ಟಿ. ಅವರ ಸಾಧನೆಗೆ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

