By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    9 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    21 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    21 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    22 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    9 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    10 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ

News Desk Chitradurga News
Last updated: 10 March 2025 18:49
News Desk Chitradurga News
1 year ago
Share
ತುರ್ತು ನಿರ್ವಹಣಾ ಸಮಿತಿ ಸಭೆ
SHARE

CHITRADURGA NEWS | 10 MARCH 2025

ಚಿತ್ರದುರ್ಗ: ಜಿಲ್ಲೆಯಲ್ಲಿ ಹಕ್ಕಿಜ್ವರದ ಯಾವುದೇ ಪ್ರಕರಣಗಳು ಇದುವರೆಗೂ ವರದಿಯಾಗಿಲ್ಲ, ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಆದಾಗ್ಯೂ ಹಕ್ಕಿ ಜ್ವರ ಬಾರದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Also Read: ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಕ್ಕಿಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ ಹಕ್ಕಿಜ್ವರ ತಡೆಗಾಗಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡಲಿದ್ದು, ಈಗಾಗಲೇ ರ್ಯಾಪಿಡ್ ರೆಸ್ಪಾನ್ಸ್ ತಂಡ ಸ್ಥಾಪಿಸಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕು ಜ್ವರ ಇರುವುದು ಖಚಿತಪಟ್ಟಿದ್ದು, ಜಿಲ್ಲೆಗೆ ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಕೋಳಿ ಸಾಗಾಣಿಕೆ ಇದೆ. ಹೀಗಾಗಿ ಗಡಿ ಪ್ರದೇಶದಲ್ಲಿ ಈಗಾಗಲೆ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ಗಳಲ್ಲಿ ಸೂಕ್ತ ನಿಗಾ ವಹಿಸಬೇಕು.

Also Read: ವಾಹನ ಡಿಕ್ಕಿ | ಹೆದ್ದಾರಿ ದಾಟುತ್ತಿದ್ದ ಚಿರತೆ ಸಾವು

ಕೋಳಿಫಾರಂಗಳಿಗೆ ಪಶುವೈದ್ಯಾಧಿಕಾರಿಗಳ ತಂಡ ನಿಯಮಿತವಾಗಿ ಭೇಟಿ ನೀಡಿ, ಸ್ವಚ್ಛತೆ ನಿರ್ವಹಣೆಗೆ ಸೂಚನೆ ನೀಡುವಂತೆ ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ಉದ್ಯಮಿದಾರರಿಗೆ ಆರೋಗ್ಯ ನಿರೀಕ್ಷಕರು ಹಕ್ಕಿಜ್ವರದ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಚಿಕನ್ ಮಾರಾಟ ಮಾಡುವ ಸ್ಟಾಲ್‍ಗಳಲ್ಲಿ ಅನೈರ್ಮಲ್ಯ ಇರುವ ಬಗ್ಗೆ ಬಹಳಷ್ಟು ದೂರುಗಳಿವೆ. ಹೀಗಾಗಿ ಆಯಾ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಪರಿಸರ ಅಭಿಯಂತರರು ಚಿಕನ್ ಸ್ಟಾಲ್‍ಗಳಿಗೆ ಭೇಟಿ ನೀಡಿ, ಮಳಿಗೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಬೇಕು, ಹಾಗೂ ತ್ಯಾಜ್ಯವನ್ನು ಸಮರ್ಪಕವಾಗಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಸೂಕ್ತ ತಿಳುವಳಿಕೆ ನೀಡಬೇಕು, ಆದಾಗ್ಯೂ ಸ್ವಚ್ಛತೆ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

Also Read: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕುಮಾರ್ ಮಾತನಾಡಿ, ಹಕ್ಕಿಜ್ವರವು ಸಾಂಕ್ರಾಮಿಕ ರೋಗವಾಗಿದ್ದು, ಎವಿಯನ್ ಇನ್ ಪ್ಲೂ-ಎಂಜಾ ಎಂಬ ವೈರಾಣುವಿನಿಂದ ಬರುತ್ತದೆ.

ನಾಟಿಕೋಳಿ, ಫಾರಂ ಕೋಳಿ, ಟರ್ಕಿ ಕೋಳಿ, ಕೌಜುಗನ ಹಕ್ಕಿ, ನವಿಲು ಹಕ್ಕಿ, ಬಾತುಕೋಳಿ, ಹಂಸ ಪಕ್ಷಿ ಇತ್ಯಾದಿ ಎಲ್ಲಾ ಹಕ್ಕಿ ಪ್ರಬೇಧಗಳಲ್ಲಿ ಕಂಡುಬರುತ್ತದೆ ಎಂದು ತಿಳಿಸಿದ ಅವರು, ಕೋಳಿ, ಪಕ್ಷಿಗಳಲ್ಲಿ ಹಠಾತ್ ಸಾವು, ಅಸಾಧರಣ ಸಾವು, ಸತ್ತ ಕೋಳಿಗಳ ಮೂಗು, ಬಾಯಿ ಮತ್ತು ಕಣ್ಣಿನಿಂದ ನೀರು ಸುರಿಯುವುದು, ಕೋಳಿಗಳ ಮೊಣಕಾಲು ಮತ್ತು ಪಾದಗಳು ನೀಲಿ ಬಣ್ಣಕ್ಕೆ ತಿರುವುದು ಇದರ ರೋಗ ಲಕ್ಷಣವಾಗಿದೆ ಎಂದು ತಿಳಿಸಿದರು.

 ಹೆಚ್ಚಿನ ಸಂಖ್ಯೆಯಲ್ಲಿ ಕೋಳಿಗಳು ಅಸಹಜ ಸಾವನ್ನಪ್ಪಿದರೆ ಸಂಬಂಧಿಸಿದ ಕೋಳಿ ಸಾಕಾಣಿಕೆದಾರರು, ರೈತರು, ತಕ್ಷಣವೇ ಪಶುವೈದ್ಯರು, ಸಿಬ್ಬಂದಿಯವರ ಗಮನಕ್ಕೆ ತರಬೇಕು. ರೋಗನಿಯಂತ್ರಣ ಹಾಗೂ ಆರೋಗ್ಯ ರಕ್ಷಣೆ ಹಿತದೃಷ್ಠಿಯಿಂದ ಕೋಳಿಫಾರಂಗಳಿಗೆ ಅನುಮತಿ ಇಲ್ಲದೇ ಪ್ರವೇಶಿಸಬಾರದು.

ಕೆರೆ, ಕಟ್ಟೆ, ನೀರಿನ ತೊರೆ, ನದಿ ಮತ್ತು ಇತರೆ ನೀರಿನ ಜಾಗಕ್ಕೆ ವಲಸೆ ಬರುವ, ಅಲ್ಲಿಯೇ ವಾಸಿಸುವ ಹಕ್ಕಿ, ಪಕ್ಷಿಗಳು ಅಸಹಜವಾಗಿ ಸತ್ತರೆ ತಕ್ಷಣವೇ ಪಶುವೈದ್ಯಕೀಯ ಗಮನಕ್ಕೆ ತರಬೇಕು.

Also Read: ಗಾಂಧಿ ವೃತ್ತದಲ್ಲಿ ಕಟ್ಟಡ ತೆರವು ಕಾರ್ಯಾಚರಣೆ | ನೊಡಲು ಜನವೋ ಜನ

ಕೋಳಿ ಮತ್ತು ಕೋಳಿ ಉತ್ಪನ್ನಗಳನ್ನು ಮುಟ್ಟಿದಲ್ಲಿ ಸೋಪಿನಿಂದ ಕೈ ತೊಳೆದು ಸ್ವಚ್ಛತೆ ಕಾಯ್ದುಕೊಳ್ಳಬೇಕು. ಚಿಕನ್ ಅನ್ನು 70 ಡಿಗ್ರಿ ಸೆಂಟಿಗ್ರೇಡ್‍ನಲ್ಲಿ 10 ನಿಮಿಷ ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಬೇಯಿಸಿಯೇ ಸೇವಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 337 ಕೋಳಿ ಫಾರಂಗಳು ಇದ್ದು, ಮಾಂಸದ ಕೋಳಿಗಳು ಮತ್ತು ಮೊಟ್ಟೆ ಕೋಳಿ ಸೇರಿದಂತೆ ಒಟ್ಟು 60.37 ಲಕ್ಷ ಕೋಳಿಗಳಿವೆ. ಸುಮಾರು 9 ಲಕ್ಷ ನಾಟಿ ಕೋಳಿಗಳು ಇವೆ. ಇದರಲ್ಲಿ ಅತಿ ಹೆಚ್ಚು ಮೊಳಕಾಲ್ಮೂರು ತಾಲ್ಲೂಕು ಒಂದರಲ್ಲೇ ಸುಮಾರು 34 ಲಕ್ಷ ಕೋಳಿಗಳು ಇವೆ.

ಹಕ್ಕಿಜ್ವರ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಸಂಪರ್ಕಿಸುವ ಚಳ್ಳಕೆರೆ ತಾಲ್ಲೂಕಿನ ನಾಗಪ್ಪನಹಳ್ಳಿ ಗೇಟ್, ಹಿರಿಯೂರು ತಾಲ್ಲೂಕಿನ ಪಿ.ಡಿ.ಕೋಟೆ ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಎದ್ದಲ್ಲಬೋಮ್ಮನಹಟ್ಟಿಯಲ್ಲಿ ಕೋಶಿ ಶೀತಜ್ವರ ರೋಗೋದ್ರೇಕ ಚೆಕ್‍ಪೋಸ್ಟ್‍ಗಳ ಸ್ಥಾಪಿಸಿ, ಪಶುವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ದಿನನಿತ್ಯವೂ ಕೋಳಿ, ಕೋಳಿ ಮೊಟ್ಟೆ, ಕೋಳಿ ಆಹಾರ ತಪಾಸಣೆ ನಡೆಸಲಾಗುತ್ತಿದೆ.

Also Read: ಔಡಲ ಚಿಗುರು ತಿಂದ 86 ಕುರಿ ಸಾವು

ಕೋಳಿ ಫಾರಂ ಮಾಲೀಕರು ತಮ್ಮ ಫಾರಂ ಪ್ರದೇಶವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಹಾಗೂ ನಿಯಮಿತವಾಗಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಒಡೆದುಹೋದ ಕೋಳಿ ಮೊಟ್ಟೆ ಹಾಗೂ ಸತ್ತ ಕೋಳಿಯನ್ನು ಸುಡಬೇಕು.

ಫಾರಂ ಮೇಲಿನ ಕೋಳಿ, ಕೋಳಿ ಆಹಾರ, ಕುಡಿಯುವ ನೀರಿನ ಸಂಪರ್ಕಕ್ಕೆ ಬಾರದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಹಕ್ಕಿ ಜ್ವರ ಪ್ರಕರಣ ವರದಿಯಾಗಿಲ್ಲ, ಆದಾಗ್ಯೂ ಯಾವುದೇ ಪರಿಸ್ಥಿತಿ ಎದುರಿಸಲು ಪಿಪಿಇ ಕಿಟ್, ಸುರಕ್ಷಾ ಕನ್ನಡಕ, ಔಷಧಿಗಳು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಂದ್ರಶೇಖರ ಕಂಬಾಳಿಮಠ್ ಅವರು ಮಾತನಾಡಿ, ಹಕ್ಕಿಜ್ವರದ ಕಾರಣದಿಂದ ಸೋಂಕಿಗೆ ಒಳಗಾಗುವ ಮನುಷ್ಯರಲ್ಲಿ ನೆಗಡಿ, ಜ್ವರ, ಕೆಮ್ಮು ಹಾಗೂ ಭೇದಿ ಉಂಟಾಗುವ ರೋಗ ಲಕ್ಷಣಗಳು ಕಂಡುಬರುತ್ತವೆ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ರೋಗವಲ್ಲ. ಈ ಕುರಿತು ಈಗಾಗಲೆ ಜಿಲ್ಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಕೈಗೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ಕೋಳಿ ಶೀತ ಜ್ವರ, ಹಕ್ಕಿಜ್ವರದ ಮುಂಜಾಗ್ರತಾ ಕ್ರಮಗಳ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

Also Read: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಘೆ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಸೇರಿದಂತೆ ಪಶುಪಾಲನಾ ಮತ್ತು ಪಶೈವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ADC KumaraswamyBellaryBird fluchickenChitradurgaChitradurga newsChitradurga UpdatesKannada Latest NewsKannada Newsprecautionary measuresStateಎಡಿಸಿ ಕುಮಾರಸ್ವಾಮಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೋಳಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಳ್ಳಾರಿಮುನ್ನೆಚ್ಚರಿಕೆ ಕ್ರಮರಾಜ್ಯಹಕ್ಕಿ ಜ್ವರ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
Next Article ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಚುನಾವಣೆ | ಅಧ್ಯಕ್ಷರಾಗಿ ಪಾಲವ್ವನಹಳ್ಳಿ ಮಂಜುನಾಥ ಆಯ್ಕೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up