CHITRADURGA NEWS | 18 JULY 2026
ಚಿತ್ರದುರ್ಗ: ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಮ್ಮ ಜನ್ಮ ದಿನವನ್ನು ಜನಪರ ಕಾರ್ಯಕ್ರಮವನ್ನಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.
ಇದನ್ನೂ ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳ 30ನೇ ಸ್ಮರಣೋತ್ಸವ | ಜುಲೈ 20 ರಂದು ಪೂರ್ವಭಾವಿ ಸಭೆ
ನಗರದ ಭೋವಿ ಗುರುಪೀಠದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮದಿನೋತ್ಸವ ಹಾಗೂ ವಧುವರ ಸಮಾವೇಶದಲ್ಲಿ ಮಾತನಾಡಿದರು.
ಶ್ರೀಗಳ ವಯಸ್ಸು ಬಹಳ ಕಡಿಮೆ. ಆದರೆ, ಅವರ ಸಾಧನೆ ಹಿರಿದು. ಅಂತಹ ಸಾಧಕರ ಜನ್ಮದಿವನ್ನು ವಿವಿಧ ಮಠಾಧೀಶರು ಒಗ್ಗೂಡಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ರೀಗಳ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಕಾರ್ಯಕ್ರಮಗಳು ಬೃಹತ್ ಆಗಿವೆ. ಮಠದ ಅಭಿವೃದ್ಧಿಗಾಗಿ ಅವರು ಕೈಗೊಂಡಿರುವ ಕಾಮಗಾರಿಗಳು ಕಣ್ಮುಂದಿವೆ ಎಂದರು.
ಸಮಾಜದ ಪ್ರಗತಿಗಾಗಿ ರಾಜ್ಯಾದ್ಯಂತ ಎಡೆಬಿಡದೆ ಓಡಾಡುತ್ತಿರುವುದು, ಭೋವಿ ಸಂಘಟನೆಯನ್ನು ರಾಷ್ಟ್ರಮಟ್ಟಕ್ಕೆ ವಿಸ್ತರಿಸಿರುವುದು ವಿಸ್ಮಯ. ಬೃಹತ್ ಪೆಂಡಾಲ್ ಮಧ್ಯದಲ್ಲಿನ ಕಂಬದಂತೆ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಭಾರವನ್ನು ತಾವೊಬ್ಬರೇ ವಹಿಸಿಕೊಂಡು ಭೋವಿಗಳ ಪಾಲಿಗೆ ಆಶಾಕಿರಣರಾಗಿದ್ದಾರೆ ಎಂದು ಬಣ್ಣಿಸಿದರು.
ಇದನ್ನೂ ಓದಿ: ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ
ಶ್ರೀಗಳ ಆಶ್ರಯದಲ್ಲಿ ಬೆಳೆಯುವ ವಿದ್ಯಾರ್ಥಿಗಳು, ಯುವಕ-ಯುವತಿಯರು ಮುಂದೆ ಸಮಾಜಕ್ಕೆ ಆಶ್ರಯ ನೀಡುವ ಹೆಮ್ಮರಗಳಾಗಬೇಕು. ಸಾಮಾಜಿಕ ಜಾಲತಾಣದ ಮೂಲಕ ರಾತ್ರೋರಾತ್ರಿ ಕೀರ್ತಿ ಗಳಿಸಬಹುದು. ಆದರೆ, ಶ್ರೀಗಳು ವ್ಯಕ್ತಿತ್ವಯಿಂದ ಭಕ್ತರು, ಮಠಾಧೀಶರ ಪ್ರೀತಿ ಗಳಿಸಿದ್ದಾರೆ. ಎಲ್ಲ ಸಮುದಾಯದ ಶ್ರೀಗಳು ಮತ್ತು ಭಕ್ತರನ್ನು ಸೋದರತ್ವದ ಭಾವನೆಯಿಂದ ಕಾಣುತ್ತಿದ್ದಾರೆ ಎಂದರು.
ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮತ್ತು ಶ್ರೀ ಶಾಂತವೀರ ಸ್ವಾಮೀಜಿ ಅವರು ಬಾಲ್ಯದ ಗೆಳೆಯರು. ಅವರ ನಡುವಿನ ಬಾಂಧವ್ಯ ಕೇವಲ ವ್ಯಕ್ತಿಗಳ ನಡುವಿನ ಸಂಬಂಧವಲ್ಲ. ಅದು ಒಂದು ಗುರಿ ಮತ್ತು ಎರಡು ಕಣ್ಣುಗಳಂತೆ ಎಂದು ಬಣ್ಣಿಸಿದರು.
ಕಳೆದ ಎರಡು ದಶಕಗಳಿಂದಲೂ ಈ ಸಂಬಂಧ ಗಟ್ಟಿಯಾಗಿ ಮುಂದುವರಿಯುತ್ತಲೇ ಇದೆ. ಸಮಾಜದಲ್ಲಿ ಪರಸ್ಪರ ಬೆಂಬಲ ಮತ್ತು ಮಾರ್ಗದರ್ಶನದ ಮೂಲಕ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಇವರಿಬ್ಬರೂ ಕೈಜೋಡಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ
ಇಮ್ಮಡಿ ಶ್ರೀಗಳ ಕುರಿತು ಕುಂಚಿಟಿಗ ಸ್ವಾಮೀಜಿ ಅಪಾರ ಪ್ರೀತಿ, ಗೌರವಭಾವನೆ ಹೊಂದಿದ್ದಾರೆ. ಪರಸ್ಪರ ಮಾರ್ಗದರ್ಶಕರಾಗಿ ಸಮುದಾಯ ಸಂಘಟನೆ ಹಾಗೂ ನಾಡು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಭವಿಷ್ಯದಲ್ಲಿಯೂ ಮಹನೀಯರ ಮಾರ್ಗದರ್ಶನ ಎಲ್ಲ ಸಮುದಾಯಗಳಿಗೂ ದೊರೆಯಲಿ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಮಾಚಿದೇವ ಸ್ವಾಮೀಜಿ, ಶ್ರೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಶಿವಸವ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಮಹಲಿಂಗ ಸ್ವಾಮೀಜಿ, ಶ್ರೀ ಬಸವಪ್ರಸಾದ್ ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ತಿಪ್ಪೇರುದ್ರಸ್ವಾಮಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಬಸವ ಮರಳುಸಿದ್ಧ ಸ್ವಾಮೀಜಿ ಸೇರಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ 60ಕ್ಕೂ ಹೆಚ್ಚು ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಭೋವಿ ಸಮುದಾಯದಲ್ಲಿ ಒಗ್ಗಟ್ಟಿನ ಸಂಕೇತವಾಗಿ ಇಡೀ ರಾಜ್ಯವನ್ನು ಸಂಘಟಿಸಿದ ಕೀರ್ತಿ ಇಮ್ಮಡಿ ಶ್ರೀಗಳಿಗೆ ಸಲ್ಲುತ್ತದೆ. ಶ್ರೀಗಳು ಸಮುದಾಯದ ಸಂಘಟನೆಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇಂದು ಭೋವಿ ಸಮಾಜದತ್ತ ಇಡೀ ಸರ್ಕಾರವೇ ತಿರುಗಿ ನೋಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಇಮ್ಮಡಿ ಶ್ರೀಗಳ ನಾಯಕತ್ವ.
| ಶ್ರೀ ಶಾಂತವೀರ ಸ್ವಾಮೀಜಿ, ಕುಂಚಿಟಿಗ ಗುರುಪೀಠ, ಹೊಸದುರ್ಗ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

